ಪ್ರವಾಸೋದ್ಯಮ ಮಾಸ್ಟರ್‌ ಪ್ಲಾನ್‌ ಸಿದ್ಧಪಡಿಸಲು ಜಿಲ್ಲಾಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು ಜುಲೈ 09 : ರಾಜ್ಯ ಪ್ರವಾಸೋದ್ಯಮಕ್ಕೆ ಹೆಚ್ಚು ಅವಕಾಶ ಇರುವ ರಾಜ್ಯ. 320 ಕಿಮಿ ಕರಾವಳಿ ಪ್ರದೇಶವಿದೆ. ಇದುವರೆಗೆ ನಮಗೆ ಅದನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಾಧ್ಯವಾಗಿಲ್ಲ. ಉಡುಪಿ, ಮಂಗಳೂರು, ಉತ್ತರಕನ್ನಡ ಜಿಲ್ಲೆಗಳಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ಸ್ಥಳೀಯರೊಂದಿಗೆ ಸೇರಿಕೊಂಡು ಪ್ರೇಕ್ಷಣೀಯ ಸ್ಥಳಗಳ ಅಭಿವೃದ್ಧಿಪಡಿಸುವ ಕುರಿತು ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೂಚನೆ ನೀಡಿದರು.

ಎರಡನೇ ದಿನದ DC-CEO ಮತ್ತು ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಇದರಿಂದ ಉದ್ಯೋಗ ಸೃಷ್ಟಿ ಸಾಧ್ಯವಿದೆ. ಹೊಸ ಪ್ರವಾಸೋದ್ಯಮ ನೀತಿ ರಚಿಸಲು ನಿರ್ಧರಿಸಲಾಗಿದ್ದು, ಈ ಕುರಿತು ವಿಸ್ತೃತವಾದ ಸಮಾಲೋಚನೆ ನಡೆಸಬೇಕು ಎಂದು ಹೇಳಿದರು. ಅನೇಕ ರಾಜ್ಯಗಳಿಗೆ ಪ್ರವಾಸೋದ್ಯಮವೇ ಪ್ರಮುಖ ಆದಾಯ. ನೆರೆಯ ಕೇರಳದಷ್ಟು ಕೂಡಾ ಪ್ರವಾಸೋದ್ಯಮ ಅಭಿವೃದ್ಧಿ ನಮಗೆ ಸಾಧ್ಯವಾಗಿಲ್ಲ. ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ನೀಲನಕಾಶೆ ಸಿದ್ಧಪಡಿಸಬೇಕು

Tourism is The Most Neglected Sector In The State Says Siddaramaiah

ಪ್ರವಾಸೋದ್ಯಮ ಮೂಲಸೌಲಭ್ಯಗಳು ಅತ್ಯಂತ ಕಡಿಮೆಯಿದೆ. ಮಧುಗಿರಿಯಲ್ಲಿರುವ ಏಕಶಿಲಾ ಬೆಟ್ಟ ಹಿಂದಿನ ಬಾರಿ ಸರ್ಕಾರ ಇದ್ದಾಗ ಅಭಿವೃದ್ಧಿ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರೂ, ಇದುವರೆಗೆ ಯಾವುದೇ ಅಭಿವೃದ್ಧಿಯಾಗಿಲ್ಲ. ಪ್ರವಾಸೋದ್ಯಮಕ್ಕೆ ಪೂರಕವಾದ ವಾತಾವರಣ ಸೃಷ್ಟಿಸಿದರೆ ಮಾತ್ರ ಬಂಡವಾಳ ಹೂಡಿಕೆದಾರರು ಮುಂದೆ ಬರುತ್ತಾರೆ ಎಂದರು

ಜಿಲ್ಲಾಧಿಕಾರಿಗಳು ಪ್ರವಾಸಿ ತಾಣಗಳ ಅಭಿವೃದ್ಧಿ ಸಾಧ್ಯತೆಗಳನ್ನು ಗುರುತಿಸಬೇಕು. ಖಾಸಗಿ ಸಹಭಾಗಿತ್ವದಲ್ಲಿ ಮಾತ್ರವಲ್ಲ ಸರ್ಕಾರದ ವತಿಯಿಂದಲೂ ಹೆಜ್ಜೆ ಇರಿಸಬೇಕು. ಹೊಸ ಪ್ರವಾಸೋದ್ಯಮ ನೀತಿಯಲ್ಲಿ ಎಲ್ಲಾ ಅಂಶಗಳನ್ನು ಸೇರಿಸಲಾಗುವುದು. ಇದಕ್ಕೆ ಪೂರಕವಾಗಿ ಅನುದಾನವನ್ನು ಒದಗಿಸಲಾಗುವುದು ಎಂದರು. ಇನ್ನೂ ಕರಾವಳಿಯಲ್ಲಿ ಸಿಆರ್‌ಝೆಡ್‌ ಕಾಯ್ದೆಯಿಂದಾಗಿ ಅಭಿವೃದ್ಧಿಗೆ ಕೆಲವು ತೊಡಕುಗಳಿದ್ದು, ಇದನ್ನು ಬಗೆಹರಿಸಲು ಪ್ರಯತ್ನಿಸಬೇಕು ಎಂದರು

ರಾಜ್ಯದಲ್ಲಿ ಕೆಲವೇ ಪ್ರವಾಸೋದ್ಯಮ ತಾಣಗಳಿಗೆ ಫೋಕಸ್‌ ದೊರೆಯುತ್ತಿದೆ. 25 ಸಾವಿರ ಸ್ಮಾರಕಗಳಿವೆ. ಇವುಗಳ ಪೈಕಿ ಸುಮಾರು 23 ಸಾವಿರ ಸ್ಮಾರಕಗಳು ನಿರ್ಲಕ್ಷ್ಯಕ್ಕೆ ಒಳಗಾಗಿವೆ. ಕರ್ನಾಟಕ ಪ್ರವಾಸೋದ್ಯಮ ವ್ಯಾಪಾರ ಸೌಲಭ್ಯ ಕಾಯ್ದೆ 2015 ಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿದರೆ ಪ್ರವಾಸೋದ್ಯಮ ತಾಣಗಳ ಅಭಿವೃದ್ಧಿ ಸಾಧ್ಯವಿದೆ. ಪ್ರವಾಸೋದ್ಯಮತಾಣಗಳ ಸಮೀಕ್ಷೆ, ಸಂರಕ್ಷಣೆ ಇತ್ಯಾದಿಗಳ ಮಾಸ್ಟರ್‌ ಪ್ಲಾನ್‌ ಜಿಲ್ಲಾವಾರು ಸಿದ್ಧಪಡಿಸಬೇಕು. ಮೂರು ತಿಂಗಳ ಒಳಗಾಗಿ ಈ ಕಾರ್ಯವನ್ನು ಪೂರ್ಣಗೊಳಿಸಬೇಕು. ಪ್ರವಾಸಿಕ ತಾಣಗಳನ್ನು ಹಂತ ಹಂತವಾಗಿ ಪುನರುಜ್ಜೀವನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಸ್ಥಳೀಯ ಜನರು, ಎನ್‌ಜಿಒಗಳ ಸಹಯೋಗ ಪಡೆದುಕೊಳ್ಳಬೇಕು. ಜಿಲ್ಲಾ ಪ್ರವಾಸೋದ್ಯಮ ಕುರಿತು ಪುಸ್ತಕಗಳನ್ನು ಬಿಡುಗಡೆಗೊಳಿಸಿ. ಸ್ಮಾರಕ ದತ್ತಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿದ್ದು, ಆಸಕ್ತರು ಸ್ಮಾರಕಗಳನ್ನು ದತ್ತು ಪಡೆದು ಸಂರಕ್ಷಣೆ ಕಾರ್ಯ ಮಾಡಬಹುದಾಗಿದೆ ಎಂದು ಹೇಳಿದರು

ಕರಾವಳಿ ಪ್ರವಾಸೋದ್ಯಮಕ್ಕೆ ಆದ್ಯತೆ

ಕರಾವಳಿಯಲ್ಲಿ ಮೆಡಿಕಲ್‌ ಕಾಲೇಜುಗಳು, ಬಂದರುಗಳು, ದೇವಾಲಯಗಳು ಸೇರಿದಂತೆ ಹಲವು ಪ್ರಮುಖ ಸ್ಥಳಗಳು ಇವೆ. ಆದರೆ ಒಂದೇ ಒಂದು ಪಂಚತಾರಾ ಹೊಟೇಲ್‌ ಇಲ್ಲ. ಸಂಜೆಯಾಗುತ್ತಿದ್ದಂತೆಯೇ ಇಡೀ ಮಂಗಳೂರು ಮುಚ್ಚಿಕೊಳ್ಳುತ್ತದೆ. ಕರಾವಳಿ ಹಾಗೂ ಮಲೆನಾಡು ಪ್ರದೇಶಕ್ಕೆ ಪ್ರತ್ಯೇಕ ಯೋಜನೆಯನ್ನು ರೂಪಿಸಬೇಕಿದೆ. ಕರಾವಳಿಯ ಪ್ರವಾಸೋದ್ಯಮದ ಸಾಧ್ಯತೆಗಳನ್ನು ಕಂಡುಕೊಳ್ಳುವ ಅಗತ್ಯವಿದೆ. ಇದರಿಂದ ತೆರಿಗೆ ಸಂಗ್ರಹ ಹಾಗೂ ಸ್ಥಳೀಯರಿಗೆ ಉದ್ಯೋಗವಕಾಶ ಸೃಷ್ಠಿಸಲು ಸಾಧ್ಯವಿದೆ. ಕರಾವಳಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಮುಂಬೈ, ಗಲ್ಫ್‌ ದೇಶಗಳಿಗೆ ಉದ್ಯೋಗ ಅರಸಿಕೊಂಡು ಹೋಗುವ ಪರಿಸ್ಥಿತಿ ಬದಲಾಗಬೇಕಿದೆ ಎಂದರು.

ಸಚಿವ ಹೆಚ್.ಕೆ.ಪಾಟೀಲ್ ಅವರ ಪ್ರಸ್ತಾವನೆ

ರಾಜ್ಯದಲ್ಲಿ 25 ಸಾವಿರ ಸ್ಮಾರಕಗಳಿವೆ. ಇವುಗಳ ಮಹತ್ವ ಅರಿತು ಗೈಡ್ ಗಳನ್ನು ನೇಮಿಸುವುದಾಗಲಿ, ಸಮೀಕ್ಷೆ ನಡೆಸಿ, ಸಂರಕ್ಷಣೆ ಮಾಡಿ ನಿಮ್ಮ ನಿಮ್ಮ ಜಿಲ್ಲೆಗಳಿಗೆ ಸಂಬಂಧಿಸಿದಂತೆ ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಆಕ್ಷನ್ ಪ್ಲಾನ್ ಮಾಡಿ, ಬಜೆಟ್ ಪ್ಲಾನ್ ಸಿದ್ದಪಡಿಸಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ. ನಿಮ್ಮ ನಿಮ್ಮ ಜಿಲ್ಲೆಗಳಲ್ಲಿನ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಬಹುದು.

ನಿಮ್ಮ ಜಿಲ್ಲೆಗಳಲ್ಲಿ ಎಷ್ಟೆಲ್ಲಾ ಉತ್ತಮ ಸಾಹಿತಿ, ಬರಹಗಾರರು, ಕಲಾವಿದರು ಇದ್ದಾರೆ. ಅವರ ನೆರವು ಪಡೆದು 3 ತಿಂಗಳಲ್ಲಿ ಮಾಸ್ಟರ್ ಪ್ಲಾನ್ ಸಿದ್ದಪಡಿಸಿ ಪ್ರವಾಸೋದ್ಯಮ ಸಮಿತಿ ಮುಂದೆ ಇಡಿ. ಸ್ಮಾರಕಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸುವವರೂ ಇರ್ತಾರೆ. ಅವರನ್ನು ಗುರುತಿಸಿ. ನೀವು ಸಿದ್ದಪಡಿಸುವ ಮಾಸ್ಟರ್ ಪ್ಲಾನ್ ಗೆ ಹಣಕಾಸು ಒದಗಿಸಲಾಗುವುದು ಎಂದು ಸಚಿವ ಹೆಚ್.ಕೆ.ಪಾಟೀಲ್ ಅಭಿಪ್ರಾಯಪಟ್ಟರು.

ಕಪ್ಪತ್ತಗುಡ್ಡ ನಿಸರ್ಗ ಪ್ರದೇಶವನ್ನು ಪ್ರವಾಸೋದ್ಯಮ ಕ್ಷೇತ್ರವಾಗಿ ಇನ್ನಷ್ಟು ಅಭಿವೃದ್ಧಿ ಪಡಿಸಲು ಸಾಧ್ಯವಿದೆ. ಈ ಬಗ್ಗೆ ಗಮನ ಹರಿಸಿ. ಎಲ್ಲಾ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಿದರೆ ರಾಜ್ಯದ ಪ್ರತೀ ಜಿಲ್ಲೆಗಳನ್ನೂ ಪ್ರವಾಸೋದ್ಯಮ ಜಿಲ್ಲೆಗಳನ್ನಾಗಿ ಮಾಡಬಹುದಾಗಿದೆ ಎಂದು ಸಚಿವ ಹೆಚ್.ಕೆ.ಪಾಟೀಲ್ ಅವರು ಪ್ರಸ್ತಾವನೆಗೆ ಮುಂದಿಟ್ಟರು. ಇದಕ್ಕೆ ಧ್ವನಿಗೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದಲ್ಲಿ ಅತೀ ವಿಸ್ತಾರವಾದ ಕರಾವಳಿ ಪ್ರದೇಶವಿದೆ. ಕರಾವಳಿಯುದ್ಧಕ್ಕೂ ನಾವು ಪ್ರವಾಸೋದ್ಯಮ ಬೆಳೆಸುವ, ಅಭಿವೃದ್ಧಿಪಡಿಸುವ ಅವಕಾಶಗಳು ಹೇರಳವಾಗಿವೆ ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+