ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ರಾಜೀನಾಮೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 04 : ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಅವರು ಸಂಪೂರ್ಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

ಭಾನುವಾರ ಸಿ. ಟಿ. ರವಿ ಅವರು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪಗೆ ರಾಜೀನಾಮೆ ಪತ್ರವನ್ನು ರವಾನೆ ಮಾಡಿದ್ದಾರೆ. ಮುಖ್ಯಮಂತ್ರಿಗಳು ರಾಜ್ಯಪಾಲರಿಗೆ ಪತ್ರವನ್ನು ಕಳಿಸಿದ ಬಳಿಕ ರಾಜೀನಾಮೆ ಅಂಗೀಕಾರವಾಗಲಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ; ಸಿ. ಟಿ. ರವಿ ಹೇಳಿದ್ದೇನು?ಸಚಿವ ಸ್ಥಾನಕ್ಕೆ ರಾಜೀನಾಮೆ; ಸಿ. ಟಿ. ರವಿ ಹೇಳಿದ್ದೇನು?

ಕೆಲವು ದಿನಗಳ ಹಿಂದೆ ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿ. ಟಿ. ರವಿ, "ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚನೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ" ಎಂದು ಹೇಳಿದ್ದರು.

ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ತಂಡ: ಸಿ.ಟಿ ರವಿ, ತೇಜಸ್ವಿ, ರಾಜೀವ್‌ಗೆ ಸ್ಥಾನಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ತಂಡ: ಸಿ.ಟಿ ರವಿ, ತೇಜಸ್ವಿ, ರಾಜೀವ್‌ಗೆ ಸ್ಥಾನ

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕರಾಗಿರುವ 53 ವರ್ಷದ ಸಿ. ಟಿ. ರವಿ ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರಾಗಿದ್ದರು. ಒಬ್ಬರಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿ ಪಕ್ಷದಲ್ಲಿದೆ.

ಸೋಮವಾರ ದೆಹಲಿಗೆ ಸಿ. ಟಿ. ರವಿ

ಸೋಮವಾರ ದೆಹಲಿಗೆ ಸಿ. ಟಿ. ರವಿ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿರುವ ಸಿ. ಟಿ. ರವಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದ ನಾಯಕರನ್ನು ಭೇಟಿ ಮಾಡಲು ಅವರು ಸೋಮವಾರ ದೆಹಲಿಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳ ಸಭೆ ಸೋಮವಾರ ದೆಹಲಿಯಲ್ಲಿ ನಡೆಯಲಿದೆ.

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

ಸೆಪ್ಟೆಂಬರ್ 26ರಂದು ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ ಅವರು ಪಕ್ಷದ ಪದಾಧಿಕಾರಿಗಳನ್ನು ನೇಮಕ ಮಾಡಿದ್ದರು. ಆಗ ಸಿ. ಟಿ. ರವಿ ಅವರನ್ನು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿತ್ತು. ಕರ್ನಾಟಕದಿಂದ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷರಾಗಿ ತೇಜಸ್ವಿ ಸೂರ್ಯ, ರಾಜೀವ್ ಚಂದ್ರಶೇಖರ್‌ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಕ ಮಾಡಲಾಗಿತ್ತು.

ಸಿ. ಟಿ. ರವಿ ಹೇಳಿಕೆ

ಸಿ. ಟಿ. ರವಿ ಹೇಳಿಕೆ

ಮಾಧ್ಯಮಗಳ ಜೊತೆ ಮಾತನಾಡಿದ್ದ ಸಿ. ಟಿ. ರವಿ ಅವರು, "ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ" ಎಂದು ಹೇಳಿದ್ದರು.

ಒಬ್ಬರಿಗೆ ಒಂದೇ ಹುದ್ದೆ

ಒಬ್ಬರಿಗೆ ಒಂದೇ ಹುದ್ದೆ

ಬಿಜೆಪಿಯಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮವಿದೆ. ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡರೆ ಸಚಿವ ಸ್ಥಾನ ಬಿಡಬೇಕು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೇಂದ್ರ ಗೃಹ ಸಚಿವರಾಗುತ್ತಿದ್ದಂತೆ ಬಿಜೆಪಿ ಅಧ್ಯಕ್ಷರಾಗಿ ಜೆ. ಪಿ. ನಡ್ಡಾ ನೇಮಕ ಮಾಡಲಾಗಿತ್ತು.

English summary
Minister for tourism and Kannada and culture C. T. Ravi resigned. He appointed as BJP national general secretary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X