ಮತ್ತೆ ಬಂತು ಸಂಚಾರಿ ಪೋಲಿಸರ ದಂಡದ ಮೊತ್ತದ ರಿಯಾಯಿತಿ, ವಿವರಗಳು
ಬೆಂಗಳೂರು, ಜುಲೈ 05; ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣಗಳ ದಂಡ ಪಾವತಿಗೆ ಶೇ 50ರಷ್ಟು ರಿಯಾಯಿತಿ ಘೋಷಣೆ ಮಾಡಲಾಗಿತ್ತು. ಈ ಹಿಂದೆ ಜಾರಿಗೊಳಿಸಿದ್ದ ಈ ಕ್ರಮಕ್ಕೆ ಉತ್ತಮ ಪ್ರತಿಕ್ರಿಯೆ ಸಹ ವ್ಯಕ್ತವಾಗಿತ್ತು. ಸಾವಿರಾರು ಜನರು ಅರ್ಧದಷ್ಟು ದಂಡವನ್ನು ಕಟ್ಟಿ ವಾಹನಗಳ ಮೇಲಿನ ಕೇಸಿನ ಹೊರೆ ಕಡಿಮೆ ಮಾಡಿಕೊಂಡಿದ್ದರು.
ಈ ಮತ್ತೊಮ್ಮೆ ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ ನೀಡುವ ಕುರಿತು ಆದೇಶವನ್ನು ಹೊರಡಿಸಲಾಗಿದೆ. ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪುಷ್ಪ ವಿ. ಎಸ್. ಈ ಕುರಿತು ಆದೇಶಿಸಿದ್ದಾರೆ.

ಸರ್ಕಾರದ ಆದೇಶ ದಿನಾಂಕ 02/02/2023, ಸರ್ಕಾರದ ಆದೇಶ ದಿನಾಂಕ 03/03/2023 ಮತ್ತು ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಡವಳಿಗಳು ದಿನಾಂಕ 14/06/2023 ಹಾಗೂ ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇವರ ಪ್ರಸ್ತಾವನೆ 20/6/2023 ಉಲ್ಲೇಖಿಸಲಾಗಿದೆ.
ಪ್ರಸ್ತಾವನೆ ಏನು?; ಸರ್ಕಾರದ ಆದೇಶದಲ್ಲಿ ದಿನಾಂಕ 11/02/2023ರ ಒಳಗಾಗಿ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.
ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ 11/02/2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.
ಗೌರವಾನ್ವಿತ ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ದಿನಾಂಕ 14/06/2023ರಂದು ನಡೆದ ಸಭೆಯ ನಡವಳಿಗಳಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತದ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿದೆ.
ಪ್ರಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರು ಉಚ್ಚ ನ್ಯಾಯಾಲಯದ ನ್ಯಾಯಾಧೀಶರು ಮತ್ತು ಅಧ್ಯಕ್ಷರು, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ನಿರ್ಣಯದಂತೆ ದಿನಾಂಕ 11/02/2023ರೊಳಗಿನ ಪಕರಣಗಳಿಗೆ ಮಾತ್ರ ಅನ್ವಯಿಸುವಂತ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ 08/07/2023ರವರೆಗೆ ಕಾಲಾವಕಾಶ ನೀಡಿ ಆದೇಶ ಹೂರಡಿಸುವಂತೆ ಕೋರಿರುತ್ತಾರೆ.
ಆದೇಶವೇನು?; ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಆದೇಶ ನೀಡಿದೆ. ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ- ಚಲನ್‌ನಲ್ಲಿ ದಿನಾಂಕ 11/02/2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಿದೆ.
ಈ ರಿಯಾಯಿತಿಯು ದಿನಾಂಕ 09/09/2023ರವರೆಗೆ ಇತ್ಯರ್ಥಗೊಳ್ಳುವ ಪುಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ. ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ದಿನಾಂಕ 04/07/2023ರಲ್ಲಿ ನೀಡಿರುವ ಸಹಮತಿಯನ್ವಯ ಹೊರಡಿಸಿದೆ ಎಂದು ಹೇಳಿದೆ.
ನಿಮ್ಮ ವಾಹನದ ಮೇಲೆ ಎಷ್ಟು ಕೇಸಿದೆ?, ಎಷ್ಟು ದಂಡವಿದೆ? ಎಂದು ಒಮ್ಮೆ ಚೆಕ್ ಮಾಡಿಕೊಳ್ಳಿ. ಹೆಚ್ಚಿನ ದಂಡ ವಿದ್ದರೆ ಶೇ 50ರಷ್ಟು ರಿಯಾಯಿತಿ ಪಡೆದು ಕಟ್ಟುವ ಮೂಲಕ ಕೇಸಿನಿಂದ ಮುಕ್ತಿ ಪಡೆಯಿರಿ.












Click it and Unblock the Notifications