Bengaluru Mysuru Expresswayನಲ್ಲಿ ಸದ್ಯಕ್ಕಿಲ್ಲ ಸಂಚಾರ ನಿರ್ಬಂಧ: ರಾಹುಲ್ ಗುಪ್ತಾ
ಬೆಂಗಳೂರು, ಜೂನ್ 30: ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ದಿನದಿಂದ ದಿನಕ್ಕೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದ್ವಿಚಕ್ರ ವಾಹನ, ತ್ರಿಚಕ್ರ ವಾಹನ, ಟ್ರ್ಯಾಕ್ಟರ್‌ಗಳ ಸಂಚಾರವನ್ನು ನಿರ್ಬಂಧಿಸಲು ಜುಲೈ 1ರಿಂದ ತಕ್ಷಣ ಜಾರಿಗೆ ಬರುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ ಎಂಬ ಸುದ್ದಿಗಳು ಕಂಡು ಬಂದಿರುವ ನಿಟ್ಟಿನಲ್ಲಿ ಹೆದ್ದಾರಿ ಪ್ರಾಧಿಕಾರ ಯೋಜನಾ ನಿರ್ದೇಶಕ ರಾಹುಲ್ ಗುಪ್ತಾ ಸ್ಪಷ್ಟನೆ ನೀಡಿದ್ದಾರೆ.
ಜುಲೈ 1ರಿಂದ ಮಂಡ್ಯದ ಗಣಂಗೂರು ಬಳಿಯೂ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರ ನಡುವಯೇ ದ್ವಿಚಕ್ರ, ತ್ರಿಚಕ್ರ ಹಾಗೂ ಕೃಷಿ ಬಳಕೆಯ ವಾಹನಗಳಾದ ಟ್ರ್ಯಾಕ್ಟರ್‌ಗಳ ಸಂಚಾರಕ್ಕೆ ನಿರ್ಬಂಧ ಹೇರಬೇಕು ಎಂಬ ಗಂಭೀರ ಚಿಂತನೆಯನ್ನು ಹೆದ್ದಾರಿ ಪ್ರಾಧಿಕಾರ ಸದ್ಯಕ್ಕೆ ಮಾಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಜುಲೈ 1ರಿಂದ ಮಂಡ್ಯದ ಗಣಂಗೂರು ಬಳಿಯೂ ಟೋಲ್ ಸಂಗ್ರಹಕ್ಕೆ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ. ಇದರ ನಡುವಯೇ ದ್ವಿಚಕ್ರ, ತ್ರಿಚಕ್ರ ಹಾಗೂ ಕೃಷಿ ಬಳಕೆಯ ವಾಹನಗಳಾದ ಟ್ರ್ಯಾಕ್ಟರ್‌ಗಳ ಸಂಚಾರಕ್ಕೆ ನಿರ್ಬಂಧ ಹೇರಬೇಕು ಎಂಬ ಗಂಭೀರ ಚಿಂತನೆಯನ್ನು ಹೆದ್ದಾರಿ ಪ್ರಾಧಿಕಾರ ಮಾಡಿದೆ ಎಂದು ತಿಳಿದು ಬಂದಿದೆ.
ಈ ಹಿಂದೆಯೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯಕ್ಕೆ ಈ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದರೆ ಅಧಿಕೃತ ಆದೇಶ ಬಂದಿರಲಿಲ್ಲ. ಈ ಬಗ್ಗೆ ಹರಿದಾಡುತ್ತಿರುವ ಸುದ್ದಿಗಳು ನಿಜವಲ್ಲ ಎಂದು ದಶಪಥ ಯೋಜನಾ ನಿರ್ದೇಶಕ ರಾಹುಲ್ ಗುಪ್ತಾ ದೃಢಪಡಿಸಿದ್ದಾರೆ. ಕಳೆದ ಮಂಗಳವಾರ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಮರಣದ ಹೆದ್ದಾರಿ ಎಂಬ ಕುಖ್ಯಾತಿ ಪಡೆದಿದ್ದ ಹಿನ್ನಲೆಯಲ್ಲಿ ಅಪಘಾತ ಪ್ರಕರಣ ಪರಿಶೀಲನೆ ಮಾಡುವ ನಿಟ್ಟಿನಲ್ಲಿ ಪೊಲೀಸ್ ಇಲಾಖೆಯ ಎಡಿಜಿಪಿ ಅಲೋಕ್ ಕುಮಾರ್ ಎಕ್ಸ್‌ಪ್ರೆಸ್ ಹೈವೇ ಪರಿಶೀಲನೆ ನಡೆಸಿದ್ದರು.

ಕುಂಬಳಗೂಡಿನ ಬಾಬುಸಾಬರಪಾಳ್ಯದಿಂದ ಸಂಚಾರಿ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಪರಿಶೀಲನೆ ಆರಂಭಿಸಿದ್ದು, ಅಪಘಾತ ಸಂಖ್ಯೆ ಹೆಚ್ಚಳದ ಕುರಿತು ಅವರು ಮಾಹಿತಿ ಸಂಗ್ರಹಿಸಿದ್ದರು. ಎಡಿಜಿಪಿ ಅಲೋಕ್ ಕುಮಾರ್, ಐಜಿಪಿ ರವಿಕಾಂತೇಗೌಡ, ರಾಮನಗರ ಎಸ್‌ಪಿ ಕಾರ್ತಿಕ್ ರೆಡ್ಡಿ ಅವರೊಂದಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಹೆದ್ದಾರಿ ನಿರ್ಮಾಣ ಹೊಣೆ ಹೊತ್ತಿರುವ ಡಿಬಿಎಲ್ ಕಂಪನಿ ಅಧಿಕಾರಿಗಳು ಕೂಡ ಹೆದ್ದಾರಿ ಪರಿಶೀಲನೆಯಲ್ಲಿ ಭಾಗಿಯಾಗಿದ್ದರು.
ಬೆಂಗಳೂರು-ಮೈಸೂರು ಹೆದ್ದಾರಿ ಅವೈಜ್ಞಾನಿಕ ರಸ್ತೆ ನಿರ್ಮಾಣದ ಬಗ್ಗೆ ಹೆದ್ದಾರಿ ಪ್ರಾಜೆಕ್ಟ್ ಡೈರೆಕ್ಟರ್ ರಾಹುಲ್ ಗುಪ್ತ ಹಾಗೂ ಇತರರಿಂದಸ ಎಡಿಜಿಪಿ ಅಲೋಕ್ ಕುಮಾರ್ ಮಾಹಿತಿ ಪಡೆದಿದ್ದಾರೆ. ಅಲ್ಲದೇ ಹೆದ್ದಾರಿಯಲ್ಲಿ ಕೆಲವೆಡೆ ಇಂಜಿನಿಯರಿಂಗ್ ಲೋಪದೋಷಗಳ ಸರಿಪಡಿಸುವ ಕುರಿತು ಚರ್ಚೆ ನಡೆಸಿದ್ದಾರೆ ಎನ್ನುವ ಕುರಿತು ಮಾಹಿತಿ ಲಭ್ಯವಾಗಿತ್ತು.
ಸರ್ಕಾರಗಳ ತಪ್ಪು ನಡೆಯಿಂದಾಗಿ ಅಮಾಯಕ ಜೀವಗಳ ಬಲಿಯಾಗುತ್ತಿರುವ ಪರಿಯನ್ನು ಖಂಡಿಸಿ ಆಮ್ ಆದ್ಮಿ ಪಕ್ಷದ ಕಾರ್ಯಾಧ್ಯಕ್ಷ ಮೋಹನ್ ದಾಸರಿ ರವರ ನೇತೃತ್ವದಲ್ಲಿ ಸಾವಿನ ಅಭಿಯಾನ ಕೈಗೆತ್ತಿಕೊಂಡಿರುವುದಾಗಿ ತಿಳಿಸಲಾಗಿತ್ತು. ಈ ಮೂಲಕ ಅಮಾಯಕ ಪ್ರಯಾಣಿಕರ ಜೀವಗಳನ್ನು ಉಳಿಸಲು ಅರಿವು ಮೂಡಿಸಲಾಗುತ್ತದೆ ಎಂದು ಪಕ್ಷ ತಿಳಿಸಿದೆ. ಬೆಳಗ್ಗೆ 11 ಗಂಟೆಗೆ ಬೆಂಗಳೂರು-ಮೈಸೂರು ರಸ್ತೆಯ ಬಿಡದಿ ಹತ್ತಿರ ಕುಣಮಿಣಿಕೆ ಟೋಲ್ ಬಳಿ ಅಭಿಯಾನ ಆರಂಭಗೊಳ್ಳಲಿದೆ. ಎಎಪಿ ನೂರಾರು ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ವರದಿಗಳು ತಿಳಿಸಿದ್ದವು.












Click it and Unblock the Notifications