ವಾಹನ ಸವಾರರೇ ಆಗಸ್ಟ್‌ನಲ್ಲಿ ಎಚ್ಚರ, ಪೊಲೀಸರಿಂದ ದಂಡ ಪ್ರಯೋಗ

ಬೆಂಗಳೂರು, ಜುಲೈ 23: ವಾಹನ ಚಾಲನೆ ಮಾಡುವಾಗ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರ ಮೇಲೆ ದಂಡ ಪ್ರಯೋಗ ಮಾಡಲಾಗುತ್ತದೆ. ಇದಕ್ಕಾಗಿ ಆಗಸ್ಟ್ ತಿಂಗಳಿನಲ್ಲಿ ಕರ್ನಾಟಕದಲ್ಲಿ ಪೊಲೀಸರು ವಿಶೇಷ ಕಾರ್ಯಾಚರಣೆಯನ್ನು ಮಾಡಲಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅಲೋಕ್ ಕುಮಾರ್, ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಸಂಚಾರ ಮತ್ತು ರಸ್ತೆ ಸುರಕ್ಷತೆ ಮಾಹಿತಿ ನೀಡಿದ್ದಾರೆ. ಈ ಕುರಿತು ಆದೇಶವನ್ನು ಅವರು ಹೊರಡಿಸಿದ್ದು, ಇದು ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಘಟಕಗಳಲ್ಲಿ ವಿಶೇಷ ಕಾರ್ಯಾಚರಣೆ ನಡೆಸುವ ಕುರಿತು ಎಂಬ ವಿಷಯವನ್ನು ಒಳಗೊಂಡಿದೆ.

Traffic Rule Violation Police To Conduct Drive From August

ಆದೇಶದ ವಿವರ: ಈ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು ಕಣ್ಣು ಕುಕ್ಕುವ ಎಲ್‌ಇಡಿ ದೀಪಗಳನ್ನು ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ವಿಶೇಷ ಕಾರ್ಯಾಚರಣೆ ನಡೆಸುವಂತೆ ಸೂಚಿಸಲಾಗಿದೆ.

ಈ ಕುರಿತು ಸದರಿ ಕಾರ್ಯಾಚರಣೆಗೆ ಆಸಕ್ತಿ ತೋರಿಸಿರುವ ಘಟಕಗಳಾದ ಬೆಂಗಳೂರು ನಗರ, ಮಂಗಳೂರು ನಗರ, ಹುಬ್ಬಳ್ಳಿ-ಧಾರವಾಡ ನಗರ, ಮೈಸೂರು ನಗರ, ಚಾಮರಾಜನಗರ, ಉತ್ತರ ಕನ್ನಡ ಜಿಲ್ಲೆ, ರಾಯಚೂರು, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚು ಪ್ರಕರಣಗಳನ್ನು ದಾಖಲು ಮಾಡಿರುವುದನ್ನು ಶ್ಲಾಘಿಸಲಾಗಿದೆ ಎಂದು ಹೇಳಿದೆ.

ಇದೇ ರೀತಿ, ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ (Wrong side driving), ಫುಟ್ ಪಾತ್ ಮೇಲೆ ವಾಹನ ಚಾಲನೆ (Driving on Foot path) ಬಗ್ಗೆ, ವಿಶೇಷ ಕಾರ್ಯಾಚರಣೆ ಮಾಡುವುದು, ಇದರ ಜೊತೆಗೆ Defective Number Plate ಮೇಲೆ ಸಹ 1ನೇ ಆಗಸ್ಟ್ 2024 ರಿಂದ ವಿಶೇಷ ಕಾರ್ಯಾಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ಸೂಚಿಸಲಾಗಿದೆ.

ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ (Wrong side driving) ವಾಹನ ಚಾಲನೆ ಮಾಡುವವರ ಮೇಲೆ ಬಿಎನ್ಎಎಸ್ 281 ಅಡಿಯಲ್ಲಿ ಮತ್ತು 184 IMV ಕಾಯ್ದೆಯಡಿ ಹಾಗೂ FIR ದಾಖಲು ಮಾಡಲು ಕ್ರಮ ಜರುಗಿಸುವುದು ಎಂದು ಎಚ್ಚರಿಕೆ ನೀಡಲಾಗಿದೆ.

ಆದ್ದರಿಂದ, ಬೆಂಗಳೂರು ನಗರ ಸೇರಿದಂತೆ ನಗರ ಪ್ರದೇಶಗಳಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು ಹಾಗೂ ಫುಟ್ ಪಾತ್‌ ಮೇಲೆ ಮೋಟಾರು ಸೈಕಲ್‌ಗಳ ಚಾಲನೆ ಮಾಡುವುದು ಬಹಳ ಸಾಮಾನ್ಯವಾಗಿರುತ್ತದೆ. ಅದಕ್ಕಾಗಿ ಮೇಲೆ ಉಲ್ಲೇಖಿಸಿದ ವಿಷಯದ ಕುರಿತು ವಿಶೇಷ ಕಾರ್ಯಾಚರಣೆ ಮಾಡುವುದು ಹಾಗೂ ಇದರ ಬಗ್ಗೆ ಜನರಲ್ಲಿ ಮುಂಚಿತವಾಗಿ ಸಾಮಾಜಿಕ ಜಾಲತಾಣ, ಕರಪತ್ರ ಹಾಗೂ ಧ್ವನಿ ವರ್ಧಕ ಉಪಕರಣಗಳ ಮೂಲಕ ತಿಳುವಳಿಕೆ ನೀಡುವ ಬಗ್ಗೆ ಕ್ರಮ ವಹಿಸುವುದು ಎಂದು ಹೇಳಿದೆ.

ಈ ಮೇಲೆ ನಮೂದಿಸಿರುವ ಅಂಶಗಳ ಕುರಿತು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ಕುರಿತು ದಿನಾಂಕ 31/08/2024 ರೊಳಗಾಗಿ ಪಾಲನಾ ವರದಿಯನ್ನು ಈ ಕಛೇರಿಗೆ ಸಲ್ಲಿಸವಂತೆ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+