SWR: ಏಪ್ರಿಲ್ 2-5 ಬೆಂಗಳೂರು, ಹುಬ್ಬಳ್ಳಿಯಿಂದ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ, ವೇಳಾಪಟ್ಟಿ
ಬೆಂಗಳೂರು; ನೈಋತ್ಯ ರೈಲ್ವೆಯು ಗುಡ್ ಫ್ರೈಡೆ ಮತ್ತು ಈಸ್ಟರ್ ಹಬ್ಬದ ಪ್ರಯುಕ್ತ ಪ್ರಯಾಣಿಕರ ದಟ್ಟಣೆ ನಿವಾರಣೆ ಸಲುವಾಗಿ ಏಪ್ರಿಲ್ ಮೊದಲ ವಾರದ ಬೆಂಗಳೂರು ಎಸ್ಎಂವಿಟಿ ನಿಲ್ದಾಣದಿಂದ ಬೆಳಗಾವಿ ನಿಲ್ದಾಣ ಹಾಗೂ ಹುಬ್ಬಳ್ಳಿ-ಕೊಲ್ಲಂ ವರೆಗೆ ಒಂದು ಸುತ್ತಿನ ವಿಶೇಷ ಎಕ್ಸ್ಪ್ರೆಸ್ ರೈಲು ಕಾರ್ಯಾಚರಣೆ ನಡೆಸಲು ನಿರ್ಧರಿಸಿದೆ.
ಈ ರೈಲುಗಳು ಏಪ್ರಿಲ್ 2 ರಿಂದ 5ರವರೆಗೆ ಸಂಚಾರ ನಡೆಸಲಿವೆ. ಬೆಂಗಳೂರು ಎಸ್ಎಂವಿಟಿ ರೈಲು- ಬೆಳಗಾವಿ ರೈಲು (06503) ಏಪ್ರಿಲ್ 2 ಗುರುವಾರ ಸಂಜೆ 7 ಗಂಟೆಗೆ ಬೆಂಗಳೂರಿನಿಂದ ಹೊರಡುತ್ತದೆ. ಮರುದಿನ ಬೆಳಗ್ಗೆ 7:35ಕ್ಕೆ ಬೆಳಗಾವಿ ತಲುಪಲಿದೆ. ಮರಳಿ ಅದೇ ದಿಕ್ಕಿನಲ್ಲಿ ಬೆಳಗಾವಿ-ಬೆಂಗಳೂರು ಎಸ್ಎಂವಿಟಿ ರೈಲು (06504) ಏಪ್ರಿಲ್ 5ರಂದು ಭಾನುವಾರ ಸಂಜೆ 5:30 ಗಂಟೆಗೆ ಪ್ರಯಾಣ ಆರಂಭಿಸಿ ಏಪ್ರಿಲ್ 6ರಂದು ಬೆಳಗ್ಗೆ 5 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ನಿಲುಗಡೆ ನಿಲ್ದಾಣಗಳು
ಈ ವಿಶೇಷ ಎಕ್ಸ್ಪ್ರೆಸ್ ರೈಲು ಎಸಿ ತ್ರಿ ಟೈರ್, ಎಸಿ ಟು ಟೈರ್, ನಾನ್ ಎಸಿ ಸ್ಲೀಪರ್ ಹಾಗೂ ಜನರಲ್ ಸೇರಿ ಒಟ್ಟು 19 ಬೋಗಿಗಳನ್ನು ಹೊಂದಿರಲಿದೆ. ಎರಡು ಸಂಚಾರ ದಿಕ್ಕುಗಳಲ್ಲಿ ಈ ರೈಲು 'ಚಿಕ್ಕಬಾಣಾವರ, ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆ ನೀಡುತ್ತದೆ.
ಹುಬ್ಬಳ್ಳಿ-ಕೊಲ್ಲಂ ವಿಶೇಷ ರೈಲು ಸೇವೆ
ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಕೊಲ್ಲಂವರೆಗೆ ಒಂದು ಟ್ರಿಪ್ ವಿಶೇಷ ರೈಲು (07347) ಕಾರ್ಯಾಚರಣೆ ಮಾಡಲು ಪ್ಲ್ಯಾನ್ ಮಾಡಲಾಗಿದೆ. ಏಪ್ರಿಲ್ 2ರಂದು ಗುರುವಾರ ಸಂಜೆ 7;5ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮಾರನೇ ದಿನ ಶುಕ್ರವಾರ ಬೆಳಗ್ಗೆ 7 ಗಂಟೆಗೆ ಕೊಲ್ಲಂ ನಿಲ್ದಾಣ ಸೇರುತ್ತದೆ.
ಮರಳಿ ಅದೇ ದಿನಕ್ಕಿನಲ್ಲಿ ಕೊಲ್ಲಂ-ಹುಬ್ಬಳ್ಳಿ ರೈಲು (07348) ಏಪ್ರಿಲ್ 3ರಂದು ಶುಕ್ರವಾರ ರಾತ್ರಿ 10.45ಗಂಟೆಗೆ ಹೊರಟು ಮಾರನೇ ದಿನ ಬೆಳಗ್ಗೆ 10.40ಕ್ಕೆ ಹುಬ್ಬಳ್ಳಿಗೆ ಬಂದು ಸೇರಲಿದೆ. ಈ ರೈಲಿನಲ್ಲಿ ಒಟ್ಟು 17 ಬೋಗಿಗಳು ಇರಲಿವೆ.
ಈ ರೈಲು ಎರಡು ದಿಕ್ಕಿನಲ್ಲಿ ಎಸ್ಎಂಎಂ ಹಾವೇರಿ, ರಾಣಿಬೆನ್ನೂರು, ಹರಿಹರ, ಬೀರೂರು, ಅರಸಿಕೆರೆ, ತುಮಕೂರು ಎಸ್ಎಂವಿಟಿ, ಕೆ.ಆರ್.ಪುರಂ, ಬಂಗಾರಪೇಟೆ, ಇರೋಡ್, ತಿರಪುರ, ಪಲ್ಲಕ್ಕಾಡ್, ಕೊಟ್ಟಾಯಂ, ಆಲುವಾ, ಚೆಂಗಾನೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ ಎಂದು ನೈಋತ್ಯ ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ರೈಲಿನ ಹೆಚ್ಚಿನ ಮಾಹಿತಿ, ವೇಳಾಪಟ್ಟಿಗಾಗಿ ಭಾರತೀಯ ರೈಲ್ವೆ ಇಲಾಖೆ ಅಧಿಕೃತ ವೆಬ್ಸೈಟ್ indianrail.gov.in ಗೆ ಅಥವಾ ಸಹಾಯವಾಣಿ ಸಂಖ್ಯೆ 139ಗೆ ಕರೆ ಮಾಡಬಹುದೆಂದು ತಿಳಿಸಲಾಗಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ?












Click it and Unblock the Notifications