Transfer: ಆಡಳಿತಕ್ಕೆ ಮೇಜರ್ ಸರ್ಜರಿ: ಐಎಎಸ್ ಅಧಿಕಾರಿಗಳ ವರ್ಗಾವಣೆ; ಯಾರು ಎಲ್ಲಿಗೆ?

ಬೆಂಗಳೂರು: ರಾಜ್ಯ ಸರ್ಕಾರವು ಐದು ಹಿರಿಯ ಐಎಎಸ್‌ ಅಧಿಕಾರಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ, ಕೆಲವರಿಗೆ ಹೆಚ್ಚುವರಿ ಜವಾಬ್ದಾರಿಗಳನ್ನು ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್‌) ಸರ್ಕಾರದ ಅಧೀನ ಕಾರ್ಯದರ್ಶಿ ಟಿ. ಮಹಾಂತೇಶ್ ಈ ಕುರಿತು ಅಧಿಸೂಚನೆ ಹೊರಡಿಸಿದ್ದಾರೆ.

Transfer government Transfers 5 Senior IAS Officers Assigns New Responsibilities to several officials

Transfer: 5 IAS ಅಧಿಕಾರಿಗಳ ವರ್ಗಾವಣೆ

ವರ್ಗಾವಣೆ ಆದೇಶದಂತೆ, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರಾಗಿದ್ದ ಅಮ್ಲಾನ್ ಆದಿತ್ಯ ಬಿಸ್ವಾಸ್ ಅವರನ್ನು ಕಾರ್ಮಿಕ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ಈ ಹಿಂದೆ ಕಾರ್ಮಿಕ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿದ್ದ ಸಲ್ಮಾ ಕೆ. ಫಾಹಿಮ್ ಅವರ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅವರನ್ನು ನಿಯೋಜಿಸಲಾಗಿದೆ.

ಕ್ಯಾಪ್ಟನ್ ಡಾ. ರಾಜೇಂದ್ರ ಕೆ. (KN: 2010) ಅವರು ಈವರೆಗೆ ಸ್ಥಳ ನಿಯೋಜನೆಯ ನಿರೀಕ್ಷೆಯಲ್ಲಿದ್ದರು. ಇದೀಗ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರನ್ನಾಗಿ ನೇಮಕ ಮಾಡಲಾಗಿದೆ.

ಪಂಕಜ್ ಕುಮಾರ್ ಪಾಂಡೆ (KN: 2000) ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ (RDPR) ಸರ್ಕಾರದ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ಈ ಹುದ್ದೆಯ ಹೆಚ್ಚುವರಿ ಹೊಣೆಗಾರಿಕೆಯಿಂದ ಡಾ. ಸಮೀರ್ ಶುಕ್ಲಾ ಅವರನ್ನು ಮುಕ್ತಗೊಳಿಸಲಾಗಿದೆ.

Transfer: ಆಡಳಿತಕ್ಕೆ ಮೇಜರ್ ಸರ್ಜರಿ

ಇದರ ಜೊತೆಗೆ ಆಡಳಿತಕ್ಕೆ ಮೇಜರ್ ಸರ್ಜರಿ ತರುವ ನಿಟ್ಟಿನಲ್ಲಿ ಪಂಕಜ್ ಕುಮಾರ್ ಪಾಂಡೆ ಅವರಿಗೆ ಡಿಪಿಎಆರ್‌ನ (ಇ-ಆಡಳಿತ) ಪ್ರಧಾನ ಕಾರ್ಯದರ್ಶಿ ಹುದ್ದೆಯ ಸಮಕಾಲೀನ ಹೆಚ್ಚುವರಿ ಪ್ರಭಾರವನ್ನೂ ಮುಂದುವರಿಸಲಾಗಿದೆ.

ಸಲ್ಮಾ ಕೆ. ಫಾಹಿಮ್ (KN: 2006) ಅವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ. ವರ್ಗಾವಣೆಯಾಗಿರುವ ಮನೋಜ್ ಜೈನ್ ಅವರ ಸ್ಥಾನಕ್ಕೆ ಅವರನ್ನು ನಿಯೋಜಿಸಲಾಗಿದೆ.

ಇದೇ ವೇಳೆ, ಕಾರ್ಮಿಕ ಇಲಾಖೆಯ ಆಯುಕ್ತರಾಗಿದ್ದ ಡಾ. ರಾಗಪ್ರಿಯಾ ಆರ್. ಅವರನ್ನು ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವ್ಯವಸ್ಥಾಪಕ ನಿರ್ದೇಶಕರಾಗಿ (MD) ನೇಮಕ ಮಾಡಲಾಗಿದೆ.

ಸರ್ಕಾರದ ಈ ಆದೇಶದ ಮೂಲಕ ಬೆಂಗಳೂರು ವಿಭಾಗದ ಪ್ರಾದೇಶಿಕ ಆಡಳಿತ, ಕಾರ್ಮಿಕ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಇ-ಆಡಳಿತ ವಿಭಾಗಗಳಲ್ಲಿ ಪ್ರಮುಖ ಆಡಳಿತಾತ್ಮಕ ಬದಲಾವಣೆಗಳು ನಡೆದಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+