ವಾಹನ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ ಬರೆದರೆ ಹುಷಾರ್
Recommended Video
ಬೆಂಗಳೂರು, ಫೆಬ್ರವರಿ 3: ವಾಹನ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ಹೆಸರು, ಚಿಹ್ನೆಗಳನ್ನು ಬರೆಯುವುದು ಕಾನೂನು ಬಾಹಿರವಾಗಿದೆ.
ಚುನಾಯಿತ ಪ್ರತಿನಿಧಿಗಳೇ ಆಗಿರಲಿ, ಸಾರ್ವಜನಿಕರೇ ಆಗಿರಲಿ ಯಾರೂ ಕೂಡ ತಮ್ಮ ಖಾಸಗಿ ವಾಹನಗಳ ಮೇಲೆ ಹೆಸರು, ಚಿಹ್ನೆಗಳನ್ನು ಬರೆಸಿಕೊಂಡರೆ ಅಂತಹರ ವಿರುದ್ಧ ಕ್ರಮ ಕೈಗೊಳ್ಳಲು ಸಾರಿಗೆ ಇಲಾಖೆ ಮುಂದಾಗಿದೆ.
ವಾಹನ ನೋಂದಣಿ ಫಲಕಗಳ ಮೇಲೆ ಅನಧಿಕೃತಾವಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗದ ಹೆಸರನ್ನು ಹೋಲುವಂತಹ ರಾಷ್ಟ್ರೀಯ, ರಾಜ್ಯ, ಮಾನವ ಹಕ್ಕುಗಳ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದು ಕೇಂದ್ರ ಮೋಟಾರು ವಾಹನಗಳ ನಿಯಮದ ಪ್ರಕಾರ ಕಾನೂನು ಬಾಹಿರ.

ಅಂತಹ ಫಲಕಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರಿಗೆ ಸೂಚನೆ ನೀಡಲಾಗಿತ್ತು. ಆದರೂ ಅಂತಹ ಅನಧಿಕೃತ ನೋಂದಣಿ ಫಲಕಗಳನ್ನು ಪ್ರದರ್ಶಿಸಿಕೊಂಡು ರಸ್ತೆಯಲ್ಲಿ ಓಡಾಡುವಂತಹ ವಾಹನಗಳನ್ನು ಗಮನಿಸಿದ ಹೈಕೋರ್ಟ್ ಚುನಾಯಿತ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಮೇಲೆ ಯಾವುದೇ ಹೆಸರು , ಚಿಹ್ನೆ, ಲಾಂಛನ ಹಾಗೂ ಸಂಘ ಸಂಸ್ಥೆಗಳ ಹೆಸರನ್ನು ಹಾಕಿಕೊಳ್ಳುವುದನ್ನು ನಿಷೇಧಿಸಿದೆ.
ಹಾಗಾಗಿ ಚುನಾಯಿತ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ತಮ್ಮ ಖಾಸಗಿ ವಾಹನಗಳ ಅನಧಿಕೃತ ನೋಂದಣಿ ಫಲಕಗಳನ್ನು ಕೂಡಲೇ ತೆರವುಗೊಳಿಸುವಂತೆ ತಿಳಿಸಲಾಗಿದೆ. ಅಲ್ಲದೆ ಅನಧಿಕೃತ ನೋಂದಣಿ ಫಲಕಗಳನ್ನು ಅಳವಡಿಸಿಕೊಂಡಿರುವ ವಾಹನಗಳು ಕಂಡು ಬಂದಲ್ಲಿ ಸಾರ್ವಜನಿಕರು ಅಂತಹ ನೋಂದಣಿ ಫಲಕ ಸಮೇತ ವಾಹನದ ಭಾವಚಿತ್ರವನ್ನು 9449863459ಗೆ ಕಳುಹಿಸಬಹುದು. ಅಂತಹ ವಾಹನದ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ತಿಳಿಸಿದೆ.
-
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು?












Click it and Unblock the Notifications