ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ 5ರಂದು ಸಾರಿಗೆ ನೌಕರರಿಂದ ಬೃಹತ್ ಪ್ರತಿಭಟನೆ

|
Google Oneindia Kannada News

ಬೆಂಗಳೂರು, ನವೆಂಬರ್ 02 : ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರದ ಮೇಲೆ ಒತ್ತಡ ಹಾಕಲು ಸಾರಿಗೆ ನೌಕರರು ಪ್ರತಿಭಟನೆ ನಡೆಸಲಿದ್ದಾರೆ. ನೌಕರರ ಪ್ರತಿಭಟನೆಯಿಂದಾಗಿ ಬಸ್ ಸಂಚಾರಕ್ಕೆ ತೊಂದರೆ ಉಂಟಾಗುವ ಸಾಧ್ಯತೆ ಇದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ (ಸಿಐಟಿಯು) ನೇತೃತ್ವದಲ್ಲಿ ಸ್ವಾತಂತ್ರ ಉದ್ಯಾನದಲ್ಲಿ ನವೆಂಬರ್ 5ರಂದು ಪ್ರತಿಭಟನೆ ನಡೆಸಲಾಗುತ್ತದೆ. ಕೋವಿಡ್‌ನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ 30 ಲಕ್ಷ ರೂ. ಪರಿಹಾರ ನೀಡಬೇಕು ಎಂಬುವುದು ಪ್ರಮುಖ ಬೇಡಿಕೆಯಾಗಿದೆ.

ಸರ್ಕಾರಿ ಬಸ್ ಬಾಡಿಗೆಗೆ; ವಿಶೇಷ ರಿಯಾಯಿತಿ ಲಭ್ಯ ಸರ್ಕಾರಿ ಬಸ್ ಬಾಡಿಗೆಗೆ; ವಿಶೇಷ ರಿಯಾಯಿತಿ ಲಭ್ಯ

ಲಾಕ್ ಡೌನ್ ಬಳಿಕ ಸಾರಿಗೆ ನೌಕರರು ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ. ಆದರೆ ಪರಿಪೂರ್ಣ ಪ್ರಮಾಣದ ಕೆಲಸ ಅವರಿಗೆ ಸಿಗುತ್ತಿಲ್ಲ. ಒಂದು ವೇಳೆ ಕೆಲಸ ಬೇಕಾದರೆ ಘಟಕದ ಅಧಿಕಾರಿಗಳಿಗೆ ಲಂಚ ನೀಡಬೇಕು ಎಂದು ನೌಕರರು ಆರೋಪಿಸಿದ್ದಾರೆ.

ಕರ್ನಾಟಕ; ಆಯ್ದ ಮಾರ್ಗದಲ್ಲಿ ಸರ್ಕಾರಿ ಬಸ್ ದರ ಇಳಿಕೆ ಕರ್ನಾಟಕ; ಆಯ್ದ ಮಾರ್ಗದಲ್ಲಿ ಸರ್ಕಾರಿ ಬಸ್ ದರ ಇಳಿಕೆ

Transport Employees

ಲಾಕ್ ಡೌನ್ ಅವಧಿಯಲ್ಲಿ ವೇತನ ನೀಡುವುದಕ್ಕೆ ನೌಕರರ ರಜೆ ಕಡಿತಗೊಳಿಸಲಾಗಿದೆ. ಹಲವು ಭತ್ಯೆಗಳನ್ನು ರದ್ದು ಮಾಡಲಾಗಿದೆ ಎಂದು ನೌಕರರು ಆರೋಪ ಮಾಡಿದ್ದಾರೆ.

ಬೆಂಗಳೂರು ರಸ್ತೆಗಿಳಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್; ವಿಶೇಷತೆಗಳು ಬೆಂಗಳೂರು ರಸ್ತೆಗಿಳಿದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್; ವಿಶೇಷತೆಗಳು

ಕೋವಿಡ್‌ನಿಂದಾಗಿ ಸಾರಿಗೆ ನೌಕರರು ಮೃತಪಟ್ಟರೆ 30 ಲಕ್ಷ ರೂ. ನೀಡುವುದಾಗಿ ಈ ಹಿಂದೆ ಸಾರಿಗೆ ಸಚಿವ ಲಕ್ಷ್ಮಣ ಸವದಿ ಘೋಷಣೆ ಮಾಡಿದ್ದರು. ಇದುವರೆಗೆ ಅದನ್ನು ನೀಡಲು ಕ್ರಮ ಕೈಗೊಂಡಿಲ್ಲ ಎಂದು ನೌಕರರು ದೂರಿದ್ದಾರೆ.

Recommended Video

Modi ಯಿಂದ ಭಾರತೀಯರಿಗೆ ಮತ್ತೊಂದು Gift | Oneindia Kannada

ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಬಿಎಂಟಿಸಿ, ಕೆಎಸ್ಆರ್‌ಟಿಸಿ ನೌಕರರು ಪಾಲ್ಗೊಳ್ಳುವ ಸಾಧ್ಯತೆ ಇದ್ದು, ಇದರಿಂದಾಗಿ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ.

English summary
Karnataka transport employees decided to protest on November 5 to against government to fulfill various demands.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X