ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏ. 7ರಿಂದ ಸರ್ಕಾರಿ ಬಸ್ ಸಂಚಾರವಿಲ್ಲ; ಕೋಡಿಹಳ್ಳಿ ಚಂದ್ರಶೇಖರ್

|
Google Oneindia Kannada News

ಬೆಂಗಳೂರು, ಮಾರ್ಚ್ 30; "ರಾಜ್ಯ ಸರ್ಕಾರ ಎಸ್ಮಾ ಜಾರಿಗೊಳಿಸಿದರೂ ನಾವು ಭಯ ಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗುವುದು ಖಂಡಿತ" ಎಂದು ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

Recommended Video

ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತ-ಸರ್ಕಾರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಎಚ್ಚರಿಕೆ | Oneindia Kannada

ಬೆಂಗಳೂರಿನಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, "ಏಪ್ರಿಲ್ 1 ರಿಂದ 6ರ ತನಕ ಸಾರಿಗೆ ಸಂಸ್ಥೆಗಳ ನೌಕರರು ಕೈಗೆ ಕಪ್ಪು ಪಟ್ಟಿ ಕಟ್ಟಿಕೊಂಡು ಕೆಲಸ ಮಾಡಲಿದ್ದಾರೆ" ಎಂದರು.

ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ ಸಾರಿಗೆ ನೌಕರರ ಮುಷ್ಕರಕ್ಕೆ ರಾಜ್ಯ ಸರ್ಕಾರ ಸೆಡ್ಡು, ಖಾಸಗಿ ಬಸ್‌ಗಳಿಗೆ ಅವಕಾಶ

"ಏಪ್ರಿಲ್ 2ರಂದು ಸಾರ್ವಜನಿಕ ಪ್ರದೇಶಗಳಲ್ಲಿ ಕಾಫಿ, ಟೀ, ಬಜ್ಜಿ, ಬೋಂಡಾಗಳನ್ನು ಮಾರುವ ಮೂಲಕ ಸಾರ್ವಜನಿಕರು ಮತ್ತು ಸರ್ಕಾರದ ಗಮನ ಸೆಳೆಯಲಿದ್ದಾರೆ" ಎಂದು ಹೇಳಿದರು.

ಕರ್ನಾಟಕ ಬಜೆಟ್ 2021: ಸಾರಿಗೆ ವಲಯಕ್ಕೆ ನೀಡಿದ ಕೊಡುಗೆಗಳೇನು? ಕರ್ನಾಟಕ ಬಜೆಟ್ 2021: ಸಾರಿಗೆ ವಲಯಕ್ಕೆ ನೀಡಿದ ಕೊಡುಗೆಗಳೇನು?

 Transport Employees Strike From April 7 Says Kodihalli Chandrashekar

"ರಾಜ್ಯ ಸರ್ಕಾರ ಎಸ್ಮಾ ಜಾರಿ ಮಾಡಿದರೂ ನಾವು ಭಯಪಡುವುದಿಲ್ಲ. ಏಪ್ರಿಲ್ 7ರಿಂದ ಕರ್ನಾಟಕದಾದ್ಯಂತ ಬಸ್ ಸಂಚಾರ ಸ್ಥಗಿತವಾಗಲಿದೆ. ಜನರು ಸಹಕಾರ ನೀಡಬೇಕು" ಎಂದು ಮನವಿ ಮಾಡಿದರು.

ರಾಜ್ಯದಲ್ಲಿ ಮತ್ತೆ ಬಸ್ ಸಂಚಾರ ಸ್ಥಗಿತಕ್ಕೆ ಸಾರಿಗೆ ನೌಕರರ ಪ್ಲಾನ್ ರಾಜ್ಯದಲ್ಲಿ ಮತ್ತೆ ಬಸ್ ಸಂಚಾರ ಸ್ಥಗಿತಕ್ಕೆ ಸಾರಿಗೆ ನೌಕರರ ಪ್ಲಾನ್

"ಸಾರಿಗೆ ಇಲಾಖೆ ಏಪ್ರಿಲ್ 1ರಂದು ನಮ್ಮನ್ನು ಮತ್ತೊಂದು ಸುತ್ತಿನ ಮಾತುಕತೆಗೆ ಆಹ್ವಾನಿಸಿದೆ. ಅಂದು ನಮ್ಮ ಬೇಡಿಕೆಗಳನ್ನು ಈಡೇರಿಸಿದರೆ ನಾವು ಮುಷ್ಕರವನ್ನು ಕೈಬಿಡಲು ಸಿದ್ಧ" ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

"ಸಾರಿಗೆ ನೌಕರರನ್ನು 6ನೇ ವೇತನ ಆಯೋಗದ ಅಡಿ ತರಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ" ಎಂದು ಕೋಡಿಹಳ್ಳಿ ಚಂದ್ರಶೇಖರ್ ಸ್ಪಷ್ಟಪಡಿಸಿದರು.

ಕರ್ನಾಟಕ ಸರ್ಕಾರ ಸಹ ಸಾರಿಗೆ ನೌಕರರ ಮುಷ್ಕರದ ಬಗ್ಗೆ ಸಭೆಗಳನ್ನು ನಡೆಸುತ್ತಿದೆ. ಖಾಸಗಿ ಬಸ್, ವಾಹನಗಳನ್ನು ಬಸ್‌ಗಳಿಗೆ ಪರ್ಯಾಯವಾಗಿ ಓಡಿಸಲು ಚಿಂತನೆಯನ್ನು ನಡೆಸುತ್ತಿದೆ.

ಏಪ್ರಿಲ್ 7ರಂದು ಬಸ್ ಸಂಚಾರ ಸ್ಥಗಿತಗೊಂಡರೆ ಜನರು ಪರದಾಟ ನಡೆಸಬೇಕಾಗುತ್ತದೆ. ದೂರ ಪ್ರಯಾಣ ಮಾಡುವ ಜನರು ಬಸ್‌ಗಳ ಲಭ್ಯತೆ ನೋಡಿಕೊಳ್ಳುವುದು ಉತ್ತಮ.

English summary
Transport employees will go for strike from April 7, 2021. All government bus will not run said Kodihalli Chandrashekar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X