ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರಿಗೆ ನೌಕರರ ಮುಷ್ಕರ ಸೋಮವಾರ ಅಂತ್ಯ?

|
Google Oneindia Kannada News

ಬೆಂಗಳೂರು, ಏಪ್ರಿಲ್ 11; ಕರ್ನಾಟಕದಲ್ಲಿ ಸಾರಿಗೆ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿದ್ದಾರೆ. ಭಾನುವಾರ ಮುಷ್ಕರ 5ನೇ ದಿನಕ್ಕೆ ಕಾಲಿಟ್ಟಿದ್ದು, ಕೆಲವು ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿವೆ.

ಸೋಮವಾರ ಸಾರಿಗೆ ನೌಕರರ ಮುಷ್ಕರ ಅಂತ್ಯಗೊಳ್ಳುವ ನಿರೀಕ್ಷೆ ಇದೆ. ಮುಷ್ಕರದ ನಡುವೆಯೂ ಹಲವು ಜಿಲ್ಲೆಗಳಲ್ಲಿ ನೌಕರರು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಕಳೆದ ಮೂರು ದಿನಗಳಿಗೆ ಹೋಲಿಕೆ ಮಾಡಿದರೆ ಭಾನುವಾರ ಸರ್ಕಾರಿ ಬಸ್‌ಗಳ ಸಂಚಾರ ಹೆಚ್ಚಾಗಿದೆ.

ಸಾರಿಗೆ ಮುಷ್ಕರ; ಮಾಸಿಕ ಪಾಸು ಪಡೆದವರಿಗೆ ಸಿಹಿ ಸುದ್ದಿ ಸಾರಿಗೆ ಮುಷ್ಕರ; ಮಾಸಿಕ ಪಾಸು ಪಡೆದವರಿಗೆ ಸಿಹಿ ಸುದ್ದಿ

ಮಾಧ್ಯಮಗಳ ಜೊತೆ ಮಾತನಾಡಿದ ಕೆಎಸ್ಆರ್‌ಟಿಸಿ ಸಂಚಾರ ವಿಭಾಗದ ಮುಖ್ಯ ವ್ಯವಸ್ಥಾಪಕ ಪ್ರಭಾಕರ್ ರೆಡ್ಡಿ, "ನಾಳೆಯಿಂದ ರಾಜ್ಯದಲ್ಲಿ ಮೊದಲಿನಂತೆ ಬಸ್ ಸಂಚಾರ ಆರಂಭವಾಗುವ ಮುನ್ಸೂಚನೆ ಸಿಕ್ಕಿದೆ" ಎಂದು ಹೇಳಿದ್ದಾರೆ.

ರಾಮನಗರ: ಮುಷ್ಕರ ನಿರತ ಸಾರಿಗೆ ನೌಕರರಿಗೆ ವರ್ಗಾವಣೆ ಶಿಕ್ಷೆ ರಾಮನಗರ: ಮುಷ್ಕರ ನಿರತ ಸಾರಿಗೆ ನೌಕರರಿಗೆ ವರ್ಗಾವಣೆ ಶಿಕ್ಷೆ

 Transport Employees Strike May End On April 12th

"ಮುಷ್ಕರದ ನಡುವೆಯೂ ನೌಕರರು ಸ್ವಯಂ ಪ್ರೇರಿತರಾಗಿ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಭಾನುವಾರ ಸುಮಾರು 2 ಸಾವಿರ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದು, ಶೇ 20ರಷ್ಟು ಬಸ್‌ಗಳ ಸಂಚಾರ ಆರಂಭವಾಗಿದೆ. ರಾಜ್ಯದ ಎಲ್ಲಾ ಡಿಪೋಗಳಲ್ಲೂ ಒಂದಷ್ಟು ನೌಕರರು ಕರ್ತವ್ಯಕ್ಕೆ ಬಂದಿದ್ದಾರೆ" ಎಂದರು.

ಸಾರಿಗೆ ಮುಷ್ಕರ; ನೌಕರರಿಗೆ ಮತ್ತೊಂದು ಕರೆ ಕೊಟ್ಟ ಯಡಿಯೂರಪ್ಪ ಸಾರಿಗೆ ಮುಷ್ಕರ; ನೌಕರರಿಗೆ ಮತ್ತೊಂದು ಕರೆ ಕೊಟ್ಟ ಯಡಿಯೂರಪ್ಪ

"ದಿನದಿಂದ ದಿನಕ್ಕೆ ಬಸ್‌ಗಳ ಸಂಚಾರ ಹೆಚ್ಚಾಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಬಸ್‌ಗಳ ಸಂಚಾರ ಹೆಚ್ಚಾಗಿದೆ. ನಾಳೆ ಬೆಳಗ್ಗೆಯಿಂದ ಎಂದಿನಂತೆ ರಸ್ತೆಗಿಳಿಯುವ ಸಾಧ್ಯತೆ ಇದೆ" ಎಂದು ತಿಳಿಸಿದರು.

"ಕರ್ತವ್ಯಕ್ಕೆ ಬಾರದ ನೌಕರರ ಸಂಬಳಕ್ಕೆ ಸಾರಿಗೆ ನಿಗಮಗಳು ಕತ್ತರಿ ಹಾಕುತ್ತಿವೆ. ಈಗಲೂ ಸಮಯ ಮೀರಿಲ್ಲ. ಕೆಲಸಕ್ಕೆ ಆಗಮಿಸುವಂತೆ ನೌಕರರಿಗೆ ಈಗಲೂ ಮನವಿ ಮಾಡುತ್ತಿದ್ದೇವೆ" ಎಂದು ಪ್ರಭಾಕರ್ ರೆಡ್ಡಿ ಹೇಳಿದರು.

Recommended Video

ಆರೋಗ್ಯ ಸಚಿವರ ಸ್ವಕ್ಷೇತ್ರದಲ್ಲಿ ಕೋವಿಡ್ ರೂಲ್ಸ್ ಉಲ್ಲಂಘನೆ | Oneindia Kannada

English summary
Transport employees strike in Karnataka may end on April 12th 2021. Employees strike entered 5th day in Karnataka.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X