ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾರಿಗೆ ನೌಕರರ ಮುಷ್ಕರ; ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಏಪ್ರಿಲ್ 8; ಸಾರಿಗೆ ನೌಕರರ ಮುಷ್ಕರ 2ನೇ ದಿನಕ್ಕೆ ಕಾಲಿಟ್ಟಿದೆ. ಕೆಲವು ಸರ್ಕಾರಿ ಬಸ್‌ಗಳು ಸಂಚಾರ ನಡೆಸುತ್ತಿದ್ದು, ಖಾಸಗಿ ವಾಹನಗಳ ಸಂಚಾರ ಹೆಚ್ಚಾಗಿದೆ. ಸರ್ಕಾರ ಮತ್ತು ನೌಕರರ ಪ್ರತಿಷ್ಠೆ ಮುಂದುವರೆದಿದ್ದು, ಬಸ್‌ಗಳ ಸಂಚಾರವಿಲ್ಲದೆ ಜನರು ಪರದಾಟ ನಡೆಸುತ್ತಿದ್ದಾರೆ.

ಗುರುವಾರ ಪ್ರತಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರಿಗೆ ಮುಷ್ಕರದ ಬಗ್ಗೆ ಸರಣಿ ಟ್ವೀಟ್ ಮಾಡಿದ್ದಾರೆ. "ಸರ್ಕಾರ ತನ್ನ ಪ್ರತಿಷ್ಠೆಯನ್ನು ಬದಿಗಿಟ್ಟು ತಕ್ಷಣ ಕೆಎಸ್‌ಆರ್‌ಟಿಸಿ ಕಾರ್ಮಿಕರ ಜೊತೆ ಮಾತುಕತೆ ನಡೆಸಿ ಸಮಸ್ಯೆಯನ್ನು ಸೌಹಾರ್ದತೆಯಿಂದ ಬಗೆಹರಿಸಿ" ಎಂದು ಸಲಹೆ ನೀಡಿದ್ದಾರೆ.

ಮುಷ್ಕರ; 6ನೇ ವೇತನ ಆಯೋಗದ ಬಗ್ಗೆ ಸರ್ಕಾರದ ನಿಲುವೇನು? ಮುಷ್ಕರ; 6ನೇ ವೇತನ ಆಯೋಗದ ಬಗ್ಗೆ ಸರ್ಕಾರದ ನಿಲುವೇನು?

"ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ" ಎಂದು ಸಿದ್ದರಾಮಯ್ಯ ಟ್ವೀಟ್‌ನಲ್ಲಿ ಆರೋಪಿಸಿದ್ದಾರೆ.

6ನೇ ವೇತನ ಆಯೋಗದಂತೆ ವೇತನ ನೀಡಿದ್ರೆ 1 ಗಂಟೆಯಲ್ಲಿ ಮುಷ್ಕರ ವಾಪಸ್6ನೇ ವೇತನ ಆಯೋಗದಂತೆ ವೇತನ ನೀಡಿದ್ರೆ 1 ಗಂಟೆಯಲ್ಲಿ ಮುಷ್ಕರ ವಾಪಸ್

ಏಪ್ರಿಲ್ 7ರಿಂದ ಸಾರಿಗೆ ನೌಕರರು ಕರ್ನಾಟಕದಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಆರಂಭಿಸಿದ್ದಾರೆ. 6ನೇ ವೇತನ ಆಯೋಗದ ಶಿಫಾರಸುಗಳನ್ನು ಪರಿಗಣಿಸಬೇಕು ಎಂಬುದು ನೌಕರರ ಪ್ರಮುಖ ಬೇಡಿಕೆಯಾಗಿದೆ. ಆದರೆ, ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿಲ್ಲ. ಆದ್ದರಿಂದ ಮುಷ್ಕರ ಸದ್ಯಕ್ಕೆ ನಿಲ್ಲುವ ಸೂಚನೆಗಳು ಕಾಣುತ್ತಿಲ್ಲ.

ಸಾರಿಗೆ ನೌಕರರ ಮುಷ್ಕರ; ರೈಲು ಓಡಿಸಲು ಸರ್ಕಾರದ ಪತ್ರ ಸಾರಿಗೆ ನೌಕರರ ಮುಷ್ಕರ; ರೈಲು ಓಡಿಸಲು ಸರ್ಕಾರದ ಪತ್ರ

ಸಂಘರ್ಷಕ್ಕೆ ಕಾರಣ ಕೊಟ್ಟ ಸಿದ್ದರಾಮಯ್ಯ

ಸಂಘರ್ಷಕ್ಕೆ ಕಾರಣ ಕೊಟ್ಟ ಸಿದ್ದರಾಮಯ್ಯ

ಸಾರಿಗೆ ನೌಕರರ ಮುಷ್ಕರದ ಬಗ್ಗೆ ಟ್ವೀಟ್ ಮಾಡಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, "ಕಳೆದ ಬಾರಿ ಕೆಎಸ್‌ಆರ್‌ಟಿಸಿ‌ ನೌಕರರ‌ ಮುಷ್ಕರದ ಸಂದರ್ಭದಲ್ಲಿ ಅವರ ಬೇಡಿಕೆಗಳ ಬಗ್ಗೆ ಸಮ್ಮತಿಸಿದಾಗಲೇ ಅದರ ಪರಿಣಾಮವನ್ನು ರಾಜ್ಯ ಬಿಜೆಪಿ ಸರ್ಕಾರ ಯೋಚಿಸಿ ನಿರ್ಧಾರ ಕೈಗೊಳ್ಳಬೇಕಿತ್ತು. ಆ‌ ಕ್ಷಣದಲ್ಲಿ ಸುಳ್ಳು ಆಶ್ವಾಸನೆ ನೀಡಿ ನಂತರ ಮಾತು ತಪ್ಪಿರುವುದೇ ಈಗಿನ ಸಂಘರ್ಷಕ್ಕೆ ಕಾರಣ" ಎಂದು ಆರೋಪಿಸಿದ್ದಾರೆ.

ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

ಸರ್ಕಾರವೇ ಹೊಣೆ ಎಂದ ಸಿದ್ದರಾಮಯ್ಯ

"ಕೊರೊನಾ ರೋಗದಿಂದ ತತ್ತರಿಸಿಹೋಗಿರುವ ರಾಜ್ಯದ ಜನತೆ ಕೆಎಸ್‌ಆರ್‌ಟಿಸಿ‌ ನೌಕರರ ಮುಷ್ಕರದಿಂದಾಗಿ ದುಪ್ಪಟ್ಟು ಕಷ್ಟ-ನಷ್ಟಕ್ಕೀಡಾಗುತ್ತಿರುವುದಕ್ಕೆ ರಾಜ್ಯದ ಅಸಮರ್ಥ-ಭ್ರಷ್ಟ ಬಿಜೆಪಿ ಸರ್ಕಾರವೇ ಹೊಣೆಯಾಗಿದೆ" ಎಂದು ಸಿದ್ದರಾಮಯ್ಯ ದೂರಿದ್ದಾರೆ.

ಸಂಘರ್ಷ ದುರಾದೃಷ್ಟಕರ

"ಕಾರ್ಮಿಕ‌ ಸಂಘದ ನಾಯಕರ ಜೊತೆ ಕೂತು ಅವರ ಮ‌ನವೊಲಿಸಿ ಸಮಸ್ಯೆಯನ್ನು ಬಗೆಹರಿಸಬೇಕಾದ ರಾಜ್ಯ ಬಿಜೆಪಿ ಸರ್ಕಾರ ಖಾಸಗಿ ಬಸ್ ಓಡಿಸುವ, ಎಸ್ಮಾ ಜಾರಿಗೊಳಿಸುವ ಬೆದರಿಕೆಯೊಡ್ಡಿ‌‌ ಸಂಘರ್ಷಕ್ಕೆ ದಾರಿಮಾಡಿಕೊಡುತ್ತಿರುವುದು ದುರದೃಷ್ಟಕರ" ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯ ಸರ್ಕಾರ ದಿವಾಳಿಯಾಗಿದೆ

"ಕೆಎಸ್‌ಆರ್‌ಟಿಸಿ ನೌಕರರ ಬೇಡಿಕೆಗಳನ್ನು ಈಡೇರಿಸಲಾಗದಿರುವುದಕ್ಕೆ ರಾಜ್ಯ ಬಿಜೆಪಿ ಸರ್ಕಾರ ನೀಡುತ್ತಿರುವ ಆರ್ಥಿಕ ಸಂಕಷ್ಟ ಸ್ವಯಂಕೃತ ಅಪರಾಧ. ತನ್ನ ದುರಾಡಳಿತ ಮತ್ತು ಕೇಂದ್ರದ ಗುಲಾಮಗಿರಿಯಿಂದಾಗಿ ರಾಜ್ಯ ಸರ್ಕಾರ ದಿವಾಳಿಯಾಗಿದೆ" ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

Recommended Video

ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ಮುಷ್ಕರ...ಆನೇಕಲ್‌ ಭಾಗದಲ್ಲಿ ಸರ್ಕಾರಿ ಬಸ್‌ ಸಂಚಾರ ಸ್ಥಗಿತ | Oneindia Kannada

English summary
Transport employees strike in Karnataka enter the 2nd day. Workers demanding salary system as per the 6th pay commission. Opposition leader Siddaramaiah tweet on strike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X