ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವೈದ್ಯರ ಸಲಹೆ; ಡಿಸಿಎಂ ಲಕ್ಷ್ಮಣ ಸವದಿ ಕ್ವಾರಂಟೈನ್‌

|
Google Oneindia Kannada News

ಬೆಂಗಳೂರು, ಏಪ್ರಿಲ್ 17; ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ವೈದ್ಯರ ಸಲಹೆಯಂತೆ ಕ್ವಾರಂಟೈನ್ ಆಗಿದ್ದಾರೆ. ಈ ಕುರಿತು ಅವರು ಫೇಸ್ ಬುಕ್ ಮೂಲಕ ಮಾಹಿತಿ ನೀಡಿದ್ದಾರೆ.

ಶನಿವಾರ ಫೇಸ್ ಬುಕ್ ಸ್ಟೇಟಸ್ ಹಾಕಿರುವ ಸಚಿವರು, "ಬಸವಕಲ್ಯಾಣ ಉಪಚುನಾವಣೆಯ ಪ್ರಚಾರದಲ್ಲಿ ನಾನು ಕೆಲವು ದಿನಗಳ ಕಾಲ ತೊಡಗಿದ್ದ ಸಂದರ್ಭದಲ್ಲಿ ನನ್ನೊಂದಿಗೆ ಭಾಗವಹಿಸಿದ್ದ ಕೆಲವರಿಗೆ ಕೋವಿಡ್ ಸೋಂಕು ತಗುಲಿದ್ದು ಕಂಡುಬಂದಿದೆ" ಎಂದು ಹೇಳಿದ್ದಾರೆ.

ನಿಖಿಲ್ ಕುಮಾರಸ್ವಾಮಿಗೂ ಕೋವಿಡ್ ಸೋಂಕು ದೃಢ ನಿಖಿಲ್ ಕುಮಾರಸ್ವಾಮಿಗೂ ಕೋವಿಡ್ ಸೋಂಕು ದೃಢ

"ಅಷ್ಟೇಅಲ್ಲ, ನನ್ನ ಗನ್‍ಮ್ಯಾನ್‍ಗೂ ಕೂಡಾ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ನಾನು ವೈದ್ಯರ ಸಲಹೆ ಪಡೆದಿದ್ದು, ಕೆಲವು ದಿನಗಳ ಕಾಲ ನನಗೆ ಕ್ವಾರಂಟೈನ್ ಆಗಲು ವೈದ್ಯರು ಸೂಚಿಸಿದ್ದಾರೆ" ಎಂದು ಸಚಿವರು ತಿಳಿಸಿದ್ದಾರೆ.

'ಮಿಷನ್ ಕೋವಿಡ್ ಸುರಕ್ಷಾ' ಯೋಜನೆಯಡಿ ಕೋವಾಕ್ಸಿನ್ ಉತ್ಪಾದನೆ ಹೆಚ್ಚಳ 'ಮಿಷನ್ ಕೋವಿಡ್ ಸುರಕ್ಷಾ' ಯೋಜನೆಯಡಿ ಕೋವಾಕ್ಸಿನ್ ಉತ್ಪಾದನೆ ಹೆಚ್ಚಳ

Transport Minister Lakshman Savadi Under Quarantine

'ಆ ಪ್ರಕಾರ ನಾನು ಮುನ್ನೆಚ್ಚರಿಕೆ ವಹಿಸುತ್ತಿದ್ದೇನೆ. ಈಗಾಗಲೇ ನಾನು ಕೋವಿಡ್ ಲಸಿಕೆಯನ್ನೂ ಹಾಕಿಸಿಕೊಂಡಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡಬೇಕಿಲ್ಲ" ಎಂದು ಸಚಿವರು ಸ್ಪಷ್ಟನೆಯನ್ನು ನೀಡಿದ್ದಾರೆ.

ಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲುಸಿಎಂ ಯಡಿಯೂರಪ್ಪ ಅವರಿಗೆ ಕೊರೊನಾ; ಆಸ್ಪತ್ರೆಗೆ ದಾಖಲು

ಬಸವಕಲ್ಯಾಣ, ಬೆಳಗಾವಿ ಮತ್ತು ಮಸ್ಕಿ ಕ್ಷೇತ್ರದ ಉಪ ಚುನಾವಣೆ ಪ್ರಚಾರದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ತೊಡಗಿಸಿಕೊಂಡಿದ್ದರು. ಶನಿವಾರ ಮೂರು ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.

Recommended Video

#Covid19update : ಒಂದೇ ದಿನ ದೇಶದಲ್ಲಿ 2,73,810 ಜನರಿಗೆ ಕೊರೊನಾ ಸೋಂಕು! | Oneindia Kannada

ಉಪ ಚುನಾವಣೆ ಪ್ರಚಾರದಲ್ಲಿ ತೊಡಗಿದ್ದ ಹಲವು ನಾಯಕರಿಗೆ ಕೋವಿಡ್ ಸೋಂಕು ತಗುಲಿದೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹ ಆಸ್ಪತ್ರೆಗೆ ದಾಖಲಾಗಿದ್ದಾರೆ.

English summary
Deputy chief minister of Karnataka and transport minister Lakshman Savadi under quarantine as per the doctor advise. Minister gun man tested positive for COVID 19.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X