ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೌಕರರ ಬೇಡಿಕೆ ಕಡ್ಡಿ ಮುರಿದಂತೆ ತುಂಡು ಮಾಡಿದ ರಾಮಲಿಂಗಾ ರೆಡ್ಡಿ

|
Google Oneindia Kannada News

ಬೆಂಗಳೂರು, ಜುಲೈ 25 : 'ರಾಜ್ಯ ಸರ್ಕಾರಿ ಸಾರಿಗೆ ನೌಕರರ ಯೂನಿಯನ್‌ಗಳು ಹಠಮಾರಿ ಧೋರಣೆ ಅನುಸರಿಸುತ್ತಿವೆ. ನಾವು ಸಹ ಪರ್ಯಾಯ ವ್ಯವಸ್ಥೆ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ. ಅವರು ಹೇಳಿದಂತೆ ಶೇ 30 ರಿಂದ 35 ರಷ್ಟು ವೇತನ ಪರಿಷ್ಕರಣೆ ಸಾಧ್ಯವೇ ಇಲ್ಲ' ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಮುಷ್ಕರದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, 'ಸರ್ಕಾರ ಶೇ 10ರಷ್ಟು ವೇತನ ಹೆಚ್ಚಳ ಮಾಡಲು ಒಪ್ಪಿಗೆ ನೀಡಿದೆ. ಇದರಿಂದಲೇ ನಿಗಮಗಳಿಗೆ ವರ್ಷಕ್ಕೆ 400 ಕೋಟಿ ಹೆಚ್ಚುವರಿ ಹೊರೆಯಾಗಲಿದೆ. ಶೇ 30ರಷ್ಟು ವೇತನ ಪರಿಷ್ಕರಣೆ ಮಾಡುವುದು ಸಾಧ್ಯವಿಲ್ಲದ ಮಾತು' ಎಂದರು. [ರಸ್ತೆ ಸಾರಿಗೆ ನಿಗಮದ ನೌಕರರ ಮುಷ್ಕರ ಏಕೆ, ಏನು?]

'ಸರ್ಕಾರ ಪರ್ಯಾಯ ವ್ಯವಸ್ಥೆ ಬಗ್ಗೆ ಚಿಂತನೆ ನಡೆಸುತ್ತಿದೆ. 80 ಸಾವಿರ ಮ್ಯಾಕ್ಸಿಕ್ಯಾಬ್ ಗಳನ್ನು ಪರ್ಯಾಯವಾಗಿ ಬಳಸಿಕೊಳ್ಳಲು ಉದ್ದೇಶಿಸಲಾಗಿದೆ. ಕಾರ್ಮಿಕ ಸಂಘಟನೆಗಳ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ' ಎಂದು ಹೇಳಿದರು.[ಮುಷ್ಕರ ಕೈ ಬಿಡಲು ನೌಕರರಿಗೆ ಸಿದ್ದರಾಮಯ್ಯ ಮನವಿ]

ಶೇ 35ರಷ್ಟು ವೇತನ ಪರಿಷ್ಕರಣೆ ಸೇರಿದಂತೆ 42 ಬೇಡಿಕೆಗಳನ್ನು ನೌಕರರು ಮುಂದಿಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಕೇ ಶೇ 10ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಹೇಳಿದ್ದಾರೆ. ಆದರೆ, ಶೇ 35ರಷ್ಟು ವೇತನ ಪರಿಷ್ಕರಣೆಗೆ ನೌಕರರು ಬೇಡಿಕೆ ಮುಂದಿಟ್ಟಿದ್ದು, ಮುಷ್ಕರ ನಡೆಸುತ್ತಿದ್ದಾರೆ.[ಗ್ಯಾಲರಿ : ಬಸ್ ಇಲ್ಲದೆ ಜನರ ಪರದಾಟ]

'ಎಸ್ಮಾ ಕಾಯ್ದೆ ಜಾರಿಗೊಳಿಸಲ್ಲ'

'ಎಸ್ಮಾ ಕಾಯ್ದೆ ಜಾರಿಗೊಳಿಸಲ್ಲ'

'ಮುಷ್ಕರ ನಿರತರಾಗಿರುವ ಕಾರ್ಮಿಕ ಸಂಘಟನೆಗಳ ಜತೆ ಮಾತುಕತೆಗೆ ಸರ್ಕಾರ ಸಿದ್ಧವಿದೆ, ಮುಷ್ಕರ ಕೈಬಿಟ್ಟು ಮಾತುಕತೆಗೆ ಬಂದರೆ 10% ರಷ್ಟು ವೇತನ ಹೆಚ್ಚಿಸಲಾಗುತ್ತದೆ. ಎಸ್ಮಾ ಕಾಯ್ದೆಯನ್ನು ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿಲ್ಲ' ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

'ನಮ್ಮಲ್ಲೇ ಹೆಚ್ಚಿನ ವೇತನ'

'ನಮ್ಮಲ್ಲೇ ಹೆಚ್ಚಿನ ವೇತನ'

'ಅಕ್ಕಪಕ್ಕದ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯದಲ್ಲಿಯೇ ಸಿಬ್ಬಂದಿಗಳಿಗೆ ಹೆಚ್ಚಿನ ವೇತನ ನೀಡಲಾಗುತ್ತಿದೆ. ಶೇ 10ರಷ್ಟು ಏರಿಕೆಯಿಂದಲೇ ಸರ್ಕಾರಕ್ಕೆ ಹೆಚ್ಚಿನ ಹೊರೆಯಾಗುತ್ತದೆ. ಶೇ 30 ರಿಂದ 35ರಷ್ಟು ವೇತನ ಹೆಚ್ಚಳ ಮಾಡುವುದು ಸಾಧ್ಯವೇ ಇಲ್ಲ' ಎಂದು ಸಚಿವರು ತಿಳಿಸಿದರು.

'ಶೇ 8ರಷ್ಟು ವೇತನ ಹೆಚ್ಚಿಸಿದ್ದೇವೆ'

'ಶೇ 8ರಷ್ಟು ವೇತನ ಹೆಚ್ಚಿಸಿದ್ದೇವೆ'

'ಇತ್ತೀಚೆಗೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಆರ್ಥಿಕ ಸ್ಥಿತಿಗಳನ್ನು ನೋಡಿಕೊಂಡು ಶೇ 8ರಷ್ಟು ವೇತನ ಹೆಚ್ಚಿಸಲಾಗಿದೆ. ಎಲ್ಲಾ ಸಾರಿಗೆ ನಿಗಮಗಳ ನೌಕರರಿಗೆ ವೇತನ ಹೆಚ್ಚಳ ಮಾಡಲು ಅನುಮತಿ ನೀಡಲಾಗಿದೆ. ನಿಗಮದ 1,15,694 ನೌಕರರಿಗೆ ವೇತನ ಹೆಚ್ಚಳವಾಗಲಿದೆ' ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಮತ್ತೊಂದು ಸುತ್ತಿನ ಸಭೆ

ಮತ್ತೊಂದು ಸುತ್ತಿನ ಸಭೆ

'ಶೇ 10ರಷ್ಟು ವೇತನ ಹೆಚ್ಚಳ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಇದಕ್ಕಿಂತ ಹೆಚ್ಚು ಮಾಡುವುದು ಅಸಾಧ್ಯ. ನೌಕರರ ಜೊತೆ ಮತ್ತೊಂದು ಸುತ್ತಿನ ಸಭೆ ನಡೆಸಲಾಗುತ್ತದೆ' ಎಂದು ರಾಮಲಿಂಗಾ ರೆಡ್ಡಿ ಹೇಳಿದರು.

ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರು ಕರೆ ನೀಡಿರುವ
ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಅದರೆ, ಖಾಸಗಿ ಬಸ್ಸುಗಳ ಸಂಚಾರ ಎಂದಿನಂತೆ ಇದೆ.

English summary
Transport employees demanding for 35 percent of salary hike. Transport minister Ramalinga Reddy said it is impossible.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X