ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜನವರಿ 30ರಂದು ಸಾರಿಗೆ ನೌಕರರ ಮುಷ್ಕರ

|
Google Oneindia Kannada News

ಬೆಂಗಳೂರು, ಜನವರಿ 11 : ಕನ್ನಡಪರ ಸಂಘಟನೆಗಳು ಜನವರಿ 25ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಜನವರಿ 30ರಂದು ಸಾರಿಗೆ ಸಂಸ್ಥೆಗಳ ನೌಕರರು ಬಂದ್ ನಡೆಸುವ ಸಾಧ್ಯತೆ ಇದೆ.

ಮಹದಾಯಿ ವಿವಾದ ಬಗೆ ಹರಿಸುವಂತೆ ಒತ್ತಾಯಿಸಿ ಜನವರಿ 25ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಸಾರಿಗೆ ಸಂಸ್ಥೆಗಳ ನೌಕರರು ಜನವರಿ 30ರಂದು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬಂದ್‌ ನಡೆಸಲಿವೆ.

ಎಐಟಿಯುಸಿ ಕಾರ್ಯದರ್ಶಿ ನಾಗರಾಜ್ ಈ ಕುರಿತು ಮಾಹಿತಿ ನೀಡಿದ್ದಾರೆ. 'ಜ.30ರಂದು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉಪವಾಸ ಸತ್ಯಾಗ್ರಹ ಆರಂಭಿಸಲು ಸಾರಿಗೆ ಇಲಾಖೆಯ ಸಿಬ್ಬಂದಿ ನಿರ್ಧರಿಸಿದ್ದಾರೆ' ಎಂದು ಹೇಳಿದ್ದಾರೆ.

ವಾಟಾಳ್ ಕರೆ ನೀಡಿದ್ದ ಕರ್ನಾಟಕ ಬಂದ್ ದಿನಾಂಕ ಬದಲುವಾಟಾಳ್ ಕರೆ ನೀಡಿದ್ದ ಕರ್ನಾಟಕ ಬಂದ್ ದಿನಾಂಕ ಬದಲು

ksrtc

'ಈ ಹಿಂದೆ ಸಾರಿಗೆ ಮುಷ್ಕರ ನಡೆಸಿದಾಗ ನೀಡಿದ್ದ ಭರವಸೆಗಳನ್ನು ಈಡೇರಿಸಲು ಸರ್ಕಾರ ವಿಫಲವಾಗಿದೆ. ಆದ್ದರಿಂದ, ಉಪವಾಸ ಸತ್ಯಾಗ್ರಹ ನಡೆಸಲು ನೌಕರರ ಸಂಘಟನೆಗಳು ತೀರ್ಮಾನಿಸಿವೆ' ಎಂದು ತಿಳಿಸಿದರು.

ಸೇಲಂ, ಮಡಿಕೇರಿಗೆ ಕೆಎಸ್ಆರ್‌ಟಿಸಿ ಫ್ಲೈ ಬಸ್ ಸೇವೆ ಆರಂಭಸೇಲಂ, ಮಡಿಕೇರಿಗೆ ಕೆಎಸ್ಆರ್‌ಟಿಸಿ ಫ್ಲೈ ಬಸ್ ಸೇವೆ ಆರಂಭ

ಮುಷ್ಕರ ನಡೆಸಲು ನೌಕರರು ತೀರ್ಮಾನಿಸಿದ್ದಾರೆ. ಇದರಿಂದ ಅಂದು ಬಸ್ ಸೇವೆ ಸ್ಥಗಿತಗೊಂಡು, ಸಾರ್ವಜನಿಕರಿಗೆ ತೊಂದರೆ ಆದರೆ ಅದಕ್ಕೆ ನಾವು ಹೊಣೆಯಲ್ಲ ಎಂದು ಸ್ಪಷ್ಟಪಡಿಸಿದರು.

ಮಹದಾಯಿ ನದಿ ನೀರು ಹಂಚಿಕೆ ವಿವಾದ ಬಗೆಹರಿಸಬೇಕು ಎಂದು ಒತ್ತಾಯಿಸಿ ಜನವರಿ 27ರಂದು ಕನ್ನಡ ಒಕ್ಕೂಟ ಕರ್ನಾಟಕ ಬಂದ್‌ಗೆ ಕರೆ ನೀಡಿತ್ತು. ಆದರೆ, ಗುರುವಾರ ಜ.27ರ ಬದಲು ಜ.25ರಂದು ಬಂದ್ ನಡೆಸುತ್ತೇವೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ.

English summary
The All India Trade Union Congress (AITUC) has called for a transport strike on January 30, 2018. KSRTC, BMTC bus service may stop on bandh day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X