Karnataka Bus Strike: ಇಂದು ರಾಜ್ಯಾದ್ಯಂತ ಬಸ್ ಸಂಚಾರ ಬಂದ್: ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು, ಆಗಸ್ಟ್ 04: ಸರ್ಕಾರ ಹಾಗೂ ಸಾರಿಗೆ ಇಲಾಖೆ ನೌಕರರ ಜಟಾಪಟಿ ಮುಂದುವರೆದೆ. ಸರ್ಕಾರಿ ನೌಕರರನ್ನು ಇಂದು ಮನವೊಲಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ. ಆದರೆ, ಸಿಎಂ ಸಿದ್ದರಾಮಯ್ಯ ಮನವೊಲಿಕೆಗೆ ಜಗ್ಗದ ಸಾರಿಗೆ ನೌಕರರು ಇಂದು (ಆಗಸ್ಟ್ 5) ರಿಂದ ರಾಜ್ಯಾದ್ಯಂತ ಮುಷ್ಕರ ಮಾಡುವುದಾಗಿ ತಿಳಿಸಿದ್ದಾರೆ.
ಈ ಕುರಿತು ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಸುಬ್ಬರಾವ್ ಮಾತನಾಡಿ, ಸರ್ಕಾರ ನಮ್ಮ ಬೇಡಿಕೆಯನ್ನು ಈಡೇರಿಸಿಲ್ಲ. ಎರಡು ಬೇಡಿಕೆಯಲ್ಲಿ ಒಂದು ಬೇಡಿಕೆ ಭಾಗಶಃ ಪೂರೈಸುತ್ತೇವೆ ಎಂದಿದ್ದಾರೆ. ಇದಕ್ಕೆ ನಮ್ನ ಸಮ್ಮತಿ ಇಲ್ಲ, ನಾವು ಇಂದು ಮುಷ್ಕರ ಮಾಡ್ತೇವೆ. ಯಾವ ಹೆದರಿಕೆ, ಬೆದರಿಕೆಗೆ ನಾವು ಬಗ್ಗಲ್ಲ ಹೋರಾಟ ಮಾಡ್ತೇವೆ ಎಂದು ಹೇಳಿದ್ದಾರೆ.

ಇಂದು ಬೆಳಗ್ಗೆ 6 ಗಂಟೆಯಿಂದಲೇ ಸಾರಿಗೆ ನೌಕರರ ಮುಷ್ಕರ ನಡೆಯಲಿದೆ. ಯಾವುದೇ ಬಸ್ ಗಳು ಓಡೋದಿಲ್ಲ. ಎಲ್ಲಾ ಬಸ್ ಗಳನ್ನು ಡಿಪೋದಲ್ಲೇ ನಿಲ್ಲಿಸಲಾಗುತ್ತದೆ. ನಾಳೆ ಎಲ್ಲಾ ಬಸ್ ಗಳನ್ನು ಡಿಪೋಗಳಲ್ಲಿ ನಿಲ್ಲಿಸುತ್ತೇವೆ. ಇಂದು ಬೆಳಗ್ಗೆ 6 ಗಂಟೆಯಿಂದಲೇ ಬಸ್ ಗಳನ್ನು ಡಿಪೋದಲ್ಲಿ ನಿಲ್ಲಿಸುತ್ತೇವೆ. ಯಾವುದೇ ನೌಕರರು ನಾಳೆ ಬಸ್ ಓಡಿಸುವುದಿಲ್ಲ. ಯಾವುದೇ ನೌಕರರು ಸರ್ಕಾರದ ಬೆದರಿಕೆಗೆ ಹೆದರಬೇಡಿ. ಶಾಂತವಾಗಿ ಪ್ರತಿಭಟಿಸಿ. ಇಂದು ಬೆಳಗ್ಗೆ 6ಗಂಟೆಯಿಂದ ಸಾರಿಗೆ ನೌಕರರ ಮುಷ್ಕರವನ್ನು ನಡೆಸುವುದಾಗಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಅವರು ಘೋಷಿಸಿದರು.
ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜತೆ ಸಭೆ: ಸಿದ್ದರಾಮಯ್ಯ ಹೇಳಿದ್ದೇನು?
ಸಾರಿಗೆ ನಿಗಮದ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಈಗಾಗಲೇ ಕೆಲವು ಸುತ್ತಿನ ಸಭೆ ನಡೆಸಲಾಗಿದೆ. ಪರಸ್ಪರ ಮಾತುಕತೆ ಮೂಲಕ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯವಿದೆ. ನಾಳೆ ಕರೆದಿರುವ ಚಳವಳಿಯನ್ನು ವಾಪಾಸು ಪಡೆಯುವಂತೆ ಮುಖ್ಯಮಂತ್ರಿ ಅವರು ಮನವಿ ಮಾಡಿದರು. 2016ರಲ್ಲಿ ನಾನು ಮುಖ್ಯಮಂತ್ರಿಯಾಗಿದ್ದಾಗ ವೇತನ ಪರಿಷ್ಕರಣೆ ಮಾಡಿದ್ದೆ. ಆಗ ಶೇ. 12.5 ಹೆಚ್ಚಳ ಮಾಡಲಾಗಿತ್ತು. ಬಳಿಕ 2020 ರಲ್ಲಿ ಕೋವಿಡ್ ಕಾರಣಕ್ಕೆ ಅಂದಿನ ಸರ್ಕಾರ ವೇತನ ಪರಿಷ್ಕರಣೆ ಮಾಡಿಲ್ಲ. ದಿನಾಂಕ 01-03-23 ರಲ್ಲಿ ಹಿಂದಿನ ಸರ್ಕಾರ ಇದ್ದಾಗ ವೇತನ ಪರಿಷ್ಕರಣೆ ಒಪ್ಪಂದವಾಗಿತ್ತು. ಆಗ ಮೂಲವೇತನ 15 ಶೇಕಡಾ ಪರಿಷ್ಕರಣೆ ಮಾಡಲು ತೀರ್ಮಾನವಾಗಿತ್ತು. ಆಗ ನೀವು ಅದನ್ನು ಒಪ್ಪಿಕೊಂಡಿದ್ದೀರಿ.
ವೇತನ ಪರಿಷ್ಕರಣೆ ಕುರಿತಾಗಿ ಶ್ರೀನಿವಾಸ ಮೂರ್ತಿ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿ ದಿನಾಂಕ 01-1-22 ರಿಂದ 28-2-23ರವರೆಗೆ ಬಾಕಿ ವೇತನ ಕೊಡಬಹುದು ಎಂದು ಶಿಫಾರಸು ಮಾಡಿತ್ತು. ಸಾರಿಗೆ ಸಂಘಟನೆಗಳ ಪ್ರತಿನಿಧಿಗಳು ಸಹ ಸಮಿತಿ ಮುಂದೆ ಹಾಜರಾಗಿ ಅಹವಾಲು ಸಲ್ಲಿಸಿದ್ದರು. ಶ್ರೀನಿವಾಸ ಸಮಿತಿಯ ಶಿಫಾರಸ್ಸು ಸರ್ಕಾರ ಒಪ್ಪಿಕೊಂಡಿದೆ. ನೀವು ಸಹ ಸದರಿ ಸಮಿತಿಯ ಶಿಫಾರಸುಗಳನ್ನು ಒಪ್ಪಿಕೊಳ್ಳಬೇಕು. ಸಮಿತಿಯ ಶಿಫಾರಸು ಆಧಾರದಲ್ಲಿ ಈ ಕುರಿತು ದಿನಾಂಕ 01-03-23 ರಿಂದ ಜಾರಿಗೆ ಬರುವಂತೆ ಅಂದಿನ ಸರ್ಕಾರ ಅಧಿಸೂಚನೆ ಸಹ ಹೊರಡಿಸಿತ್ತು. ಆದರೆ ಈಗ 38 ತಿಂಗಳ ಬಾಕಿ ವೇತನ ಪಾವತಿಗೆ ಬೇಡಿಕೆ ಇರಿಸಿರುವುದು ಸಮಂಜಸವಲ್ಲ ಎಂದು ಮುಖ್ಯಮಂತ್ರಿ ಅವರು ಹೇಳಿದರು.
ನಾವು ಅಧಿಕಾರಕ್ಕೆ ಬಂದಾಗ ಎಲ್ಲಾ ನಿಗಮಗಳಿಗೆ ಒಟ್ಟಾರೆ 4ಸಾವಿರ ಕೋಟಿ ಸಾಲ ಇತ್ತು. 2018ರಲ್ಲಿ ಕೇವಲ ರೂ. 14 ಕೋಟಿ ಮಾತ್ರ ಬಾಕಿಯಿತ್ತು. ಪ್ರಸ್ತುತ ಯಾವ ಸಾರಿಗೆ ನಿಗಮ ಸಹ ಲಾಭದಲ್ಲಿಲ್ಲ. ಸರ್ಕಾರ ಯಾರಿಗೂ ಅನ್ಯಾಯ ಮಾಡುವುದಿಲ್ಲ. ಎಲ್ಲಾ ನಿಗಮದವರು ಸಹಕರಿಸಬೇಕು. ಸಾರಿಗೆ ನೌಕರರ ಸಂಘದ ಚುನಾವಣೆ ನಡೆಸುವ ಕುರಿತು ಪರಿಶೀಲನೆ ನಡೆಸಲಾಗುವುದು. ಎಲ್ಲಾ ಅಹವಾಲುಗಳನ್ನು ಮಾತುಕತೆ ಮೂಲಕ ಬಗೆಹರಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಕೆಎಸ್ಆರ್ಟಿಸಿ ಅಧ್ಯಕ್ಷ ಎಸ್.ಆರ್ ಶ್ರೀನಿವಾಸ್, ಎನ್ಡಬ್ಲುಕೆಎಸ್ಆರ್ಟಿಸಿ ಅಧ್ಯಕ್ಷ ರಾಜುಕಾಗೆ, ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.












Click it and Unblock the Notifications