ಸುಧಾರಿಸದ ಡಿಕೆಶಿ ಆರೋಗ್ಯ; ಮುಂದುವರೆದ ಚಿಕಿತ್ಸೆ
Recommended Video
ಬೆಂಗಳೂರು, ಸೆಪ್ಟೆಂಬರ್ 16 : ಇಡಿ ವಶದಲ್ಲಿರುವ ಮಾಜಿ ಸಚಿವ, ಕಾಂಗ್ರೆಸ್ ನಾಯಕ ಡಿ. ಕೆ. ಶಿವಕುಮಾರ್ ಆರೋಗ್ಯ ಸುಧಾರಿಸಿಲ್ಲ. ಎರಡು ದಿನದಿಂದ ಅವರು ಆಸ್ಪತ್ರೆಯಲ್ಲಿದ್ದು, ಚಿಕಿತ್ಸೆ ಮುಂದುವರೆದಿದೆ.
ಡಿ. ಕೆ. ಶಿವಕುಮಾರ್ರನ್ನು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಶನಿವಾರ ಸಂಜೆ ಇಡಿ ಅಧಿಕಾರಿಗಳು ದಾಖಲು ಮಾಡಿದ್ದಾರೆ. ಜ್ವರ, ಅಧಿಕ ರಕ್ತದೊತ್ತಡದಿಂದ ಅವರು ಬಳಲುತ್ತಿದ್ದಾರೆ. ಶುಗರ್ ಸಹ ನಿಯಂತ್ರಣಕ್ಕೆ ಬಂದಿಲ್ಲ.
ಭಾನುವಾರ ಇಸಿಜಿ ಮಾಡಿದ ಬಳಿಕ ವೈದ್ಯರು ಸಾಮಾನ್ಯ ವಾರ್ಡ್ನಿಂದ ಹೃದ್ರೋಗ ನಿಗಾ ಘಟಕಕ್ಕೆ ಡಿ. ಕೆ. ಶಿವಕುಮಾರ್ರನ್ನು ಸ್ಥಳಾಂತರ ಮಾಡಿದ್ದಾರೆ. ಚಿಕಿತ್ಸೆ ಮುಂದುವರೆದಿದ್ದು, ವೈದ್ಯರ ಭೇಟಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ.
ಅನಾರೋಗ್ಯದ ಹಿನ್ನಲೆಯಲ್ಲಿ ಭಾನುವಾರ ಡಿ. ಕೆ. ಶಿವಕುಮಾರ್ ವಿಚಾರಣೆ ನಡೆಸಲು ಇಡಿ ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಇಂದು ಆರೋಗ್ಯ ಸುಧಾರಿಸಿದರೆ ಮಧ್ಯಾಹ್ನದ ನಂತರ ವಿಚಾರಣೆ ನಡೆಸುವ ಸಾಧ್ಯತೆ ಇದೆ. ಮಂಗಳವಾರ ಅವರ ಇಡಿ ಕಸ್ಟಡಿ ಅಂತ್ಯಗೊಳ್ಳಲಿದೆ.

ಆರೋಗ್ಯದ ಮೇಲೆ ನಿಗಾ
ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಡಿ. ಕೆ. ಶಿವಕುಮಾರ್ರನ್ನು ಶನಿವಾರ ಸಂಜೆ ದಾಖಲು ಮಾಡಲಾಗಿದೆ. ಡಿ. ಕೆ. ಶಿವಕುಮಾರ್ ಪರ ವೈದ್ಯ ಡಾ. ರಂಗನಾಥ್ ಅವರ ಜೊತೆಗಿದ್ದಾರೆ. ಜ್ವರ, ಅಧಿಕ ರಕ್ತದೊತ್ತಡದಿಂದ ಡಿ. ಕೆ. ಶಿವಕುಮಾರ್ ಬಳಲುತ್ತಿದ್ದು, ಶುಗರ್ ಸಹ ನಿಯಂತ್ರಣಕ್ಕೆ ಬಂದಿಲ್ಲ.

ಜಾಮೀನು ಅರ್ಜಿಗೆ ಆಕ್ಷೇಪಣೆ
ಇಡಿ ವಿಶೇಷ ನ್ಯಾಯಾಲಯದಲ್ಲಿ ಡಿ. ಕೆ. ಶಿವಕುಮಾರ್ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇಂದು ಇಡಿ ಜಾಮೀನು ಅರ್ಜಿಗೆ ಆಕ್ಷೇಪಣೆಯನ್ನು ಸಲ್ಲಿಸಲಿದೆ. ಅರ್ಜಿಯ ವಿಚಾರಣೆ ನ್ಯಾಯಾಲಯದಲ್ಲಿ ನಡೆಯಲಿದೆ.

ಇಂದು ಮಧ್ಯಾಹ್ನ ವಿಚಾರಣೆ
ಶನಿವಾರ ಸಂಜೆ ಇಡಿ ಡಿ. ಕೆ. ಶಿವಕುಮಾರ್ರನ್ನು ಆಸ್ಪತ್ರೆಗೆ ದಾಖಲು ಮಾಡಿತ್ತು. ಭಾನುವಾರ ಅವರ ವಿಚಾರಣೆ ನಡೆಸಲು ಸಾಧ್ಯವಾಗಿಲ್ಲ. ಆರೋಗ್ಯ ಸುಧಾರಣೆ ಆದಲ್ಲಿ ಸೋಮವಾರ ಮಧ್ಯಾಹ್ನ ಇಡಿ ಕಚೇರಿಗೆ ಕರೆದುಕೊಂಡು ಹೋಗಿ ವಿಚಾರಣೆ ನಡೆಸಲಾಗುತ್ತದೆ.

ಇಡಿ ಕಸ್ಟಡಿ ಅಂತ್ಯ
ಶುಕ್ರವಾರ ಇಡಿ ವಿಶೇಷ ನ್ಯಾಯಾಲಯ ಡಿ. ಕೆ. ಶಿವಕುಮಾರ್ ಇಡಿ ಕಸ್ಟಡಿ ಅವಧಿಯನ್ನು 4 ದಿನಗಳ ಕಾಲ ವಿಸ್ತರಣೆ ಮಾಡಿ ಆದೇಶ ಹೊರಡಿಸಿತ್ತು. ಸೆ. 17ರ ಮಂಗಳವಾರ ಕಸ್ಟಡಿ ಅಂತ್ಯಗೊಳ್ಳಲಿದ್ದು, ಪುನಃ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ.
-
ಏಪ್ರಿಲ್ 6ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಕಾವೇರಿ ನೀರಿನ ಬಾಕಿ ಬಿಲ್ ಕಟ್ಟುವವರಿಗಾಗಿ ಇಂದಿನಿಂದಲೇ 'ಒಟಿಎಸ್' ಆರಂಭ; 5.11 ಲಕ್ಷ ಮಂದಿಗೆ ಬಿಲ್ ಜತೆ ನೋಟಿಸ್ -
Bengaluru: ನಸುಕಿನ ಜಾವ 3 ಗಂಟೆಗೆ ರಾಪಿಡೋ ರೈಡರ್ ತೋರಿದ ಮಾನವೀಯತೆಗೆ ಮಹಿಳೆ ಫಿದಾ, Video Viral -
ಧನುಷ್ ಜೊತೆ ಸ್ನೇಹ ಕಳೆದುಕೊಂಡಿದ್ದು ನನ್ನ ಜೀವನದ ದೊಡ್ಡ ನಷ್ಟ: ಪತ್ನಿ ನಯನತಾರ ಜೊತೆಗಿನ ಮನಸ್ತಾಪಕ್ಕೆ ವಿಘ್ನೇಶ್ ಶಿವನ್ ಬೇಸರ -
2026ರ PUC ಫಲಿತಾಂಶಕ್ಕೆ ಕ್ಷಣಗಣನೆ; ಈ ಬಾರಿ ಡಿಜಿಲಾಕರ್ನಲ್ಲೂ ರಿಸಲ್ಟ್ ಲಭ್ಯ, ಚೆಕ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ -
Gold Price April 6: ಚಿನ್ನದ ಬೆಲೆ ಭರ್ಜರಿ 18,000 ರೂ. ಇಳಿಕೆ, ಬಂಗಾರ ಪ್ರಿಯರಿಗೆ ಗುಡ್ನ್ಯೂಸ್ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
ಒರಾಕಲ್ನಲ್ಲಿ ಕೆಲಸ ಕಳೆದುಕೊಂಡ ಟೆಕ್ಕಿ ಊರಿಗೆ ಮರಳಿ ಉಬರ್ ಓಡಿಸುತ್ತಿರುವ ಸ್ಫೂರ್ತಿದಾಯಕ ಕಥೆ Viral -
ವಾರ ಭವಿಷ್ಯ: ಈ ರಾಶಿಯ ಪ್ರೇಮಿಗಳು ಮತ್ತೆ ಒಂದಾಗುತ್ತಾರೆ! ಸೂರ್ಯನಿಗೆ ಅರ್ಘ್ಯದಿಂದ ಭಾಗ್ಯ ಬದಲಾವಣೆ -
ಹುಡುಗಿಯರೇ ಎಚ್ಚರ: ಟಾಕ್ಸಿಕ್ ಗಂಡಸರ ಲಕ್ಷಣಗಳಿವು, ಮೆಚ್ಚಿ ಒಲಿದರೆ ಬಲಿಯಾಗುವಿರಿ -ಡಾ ರೂಪಾ ರಾವ್ ಬರಹ -
Ragi Ambli: ಬೇಸಿಗೆಯ ಬಿಸಿಲಿಗೆ ತಂಪೆರೆಯುವ 'ರಾಗಿ ಅಂಬಲಿ'; ಮನೆಯಲ್ಲೇ ಮಾಡುವ ಸುಲಭ ವಿಧಾನ ಇಲ್ಲಿದೆ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ












Click it and Unblock the Notifications