ದಾಸರಹಳ್ಳಿಯಲ್ಲಿ ತ್ರಿಕೋನ ಸ್ಪರ್ಧೆ; ಕಮಲ ಮುದುಡಿ ಕೇಕೆ ಹಾಕಿದ ದಳಪತಿ! ಈ ಬಾರಿ ಯಾರಿಗೆ ಗೆಲುವು?
ಬೆಂಗಳೂರು,ಏಪ್ರಿಲ್30: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ರಾಜ್ಯ ರಾಜಕಾರಣದ ಬಳಿಕ ರಾಜ್ಯ ರಾಜಧಾನಿ ಚುನಾವಣೆ ಮೇಲೆ ಕಣ್ಣೀಟ್ಟಿರುವ ರಾಜಕೀಯ ಪಕ್ಷಗಳು ಹಲವು ತಂತ್ರಗಾರಿಕೆಯನ್ನ ನಡೆಸಿದ್ದು, ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಚುಕ್ಕಾಣಿ ಹಿಡಿಯಲು ಮೂರು ಪಕ್ಷಗಳ ಅಭ್ಯರ್ಥಿಗಳ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ.
ಏಷ್ಯಾದ ಎರಡನೇ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿಒಂದಾಗಿರುವ ಪೀಣ್ಯವನ್ನು ಒಳಗೊಂಡಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಶೇ 90ರಷ್ಟು ವಲಸಿಗರೇ ನೆಲೆಸಿರುವ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ದೊಡ್ಡ ಮಟ್ಟದ ಹಣಾಹಣಿಗೆ ವೇದಿಕೆ ಸಜ್ಜಾಗೊಂಡಿದೆ.
ಅತಿ ಹೆಚ್ಚು ಗಾರ್ಮೆಂಟ್ಸ್, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳೇ ಹೆಚ್ಚಿರುವ ಪೀಣ್ಯ ಕೈಗಾರಿಕಾ ಪ್ರದೇಶದಲ್ಲಿ ಮಹಿಳಾ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಇವರಲ್ಲಿ ಬಹುತೇಕರು ದಾಸರಹಳ್ಳಿ ಕ್ಷೇತ್ರದ ಮತದಾರರು. ಕೈಗಾರಿಕಾ ಸಾಮ್ರಾಜ್ಯ ವನ್ನು ಹೊಂದಿರುವ ಈ ಕ್ಷೇತ್ರದ ಜನಪ್ರತಿನಿಧಿ ಆಯ್ಕೆಯಲ್ಲಿ ಮಹಿಳಾ ಮತದಾರರೇ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ ಎಂದು ಹೇಳಲಾಗಿದೆ.

ಇನ್ನೂ ಕ್ಷೇತ್ರ ಪುನರ್‌ವಿಂಗಡಣೆಗೆ ಮೊದಲು ದಾಸರಹಳ್ಳಿ ಉತ್ತರಹಳ್ಳಿ ಕ್ಷೇತ್ರದಲ್ಲಿತ್ತು. 1989ರ ಬಳಿಕ ಒಂದು ಬಾರಿಯೂ ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಗೆದ್ದಿಲ್ಲ. ನಂತರ 1994 ರಿಂದ ಸತತವಾಗಿ ಬಿಜೆಪಿಯ ಅಭ್ಯರ್ಥಿಗಳೇ ಆಯ್ಕೆಯಾಗಿದ್ದರು. ಹಾಗಾಗಿ ಕ್ಷೇತ್ರವು ಕಮಲ ಪಾಳಯದ ಭದ್ರಕೋಟೆಯಾಗಿತ್ತು. ನಂತರ ಉತ್ತರಹಳ್ಳಿ ಕ್ಷೇತ್ರದಿಂದ ಬೇರ್ಪಟ್ಟ ನಂತರ ನಡೆದ 2008 ಮತ್ತು 2013ರ ಚುನಾವಣೆಯಲ್ಲೂ ಬಿಜೆಪಿಯದ್ದೇ ಪ್ರಾಬಲ್ಯ ಹೆಚ್ಚಾಗಿತ್ತು.
ಸತತ 24 ವರ್ಷಗಳ ಬಳಿಕ ಮೊದಲ ಬಾರಿಗೆ ಸ್ಪರ್ಧೇ ನಡೆಸಿದ್ದ ಪ್ರಾದೇಶಿಕ ಪಕ್ಷ ಜೆಡಿಎಸ್ ನ ಅಭ್ಯರ್ಥಿ ಆರ್ ಮಂಜುನಾಥ್ 2018 ರಲ್ಲಿ ಸ್ಪರ್ಧಿಸಿ ಮೊದಲ ಚುನಾವಣೆಯಲ್ಲೇ ಗೆಲ್ಲುವು ಸಾಧಿಸಿದ್ದರು.

ಇನ್ನೂ 2023ರ ಚುನಾವಣೆ ಚುನಾವಣೆಯಲ್ಲಿ ಭರ್ಜರಿ ಸಿದ್ದತೆಯನ್ನ ನಡೆಸಿರುವ ಬಿಜೆಪಿ ಮತ್ತೆ ಕ್ಷೇತ್ರವನ್ನ ಮರಳಿ ಪಡೆಯಬುದು ಎಂಬ ತವಕದಲ್ಲಿದೆ. ಇನ್ನೂ ಮಕತ ಬುಟ್ಟಿಗೆ ಕೈ ಹಾಕಿರುವ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪ್ರಬಲ ಅಭ್ಯರ್ಥಿಗಳನ್ನ ಕಣಕ್ಕಿಳಿದ್ದು, ಜೆಡಿಎಸ್ ಅಭ್ಯರ್ಥಿಯನ್ನ ಸೋಲಿಸಲು ಬಿಜೆಪಿ ಭರ್ಜರಿ ಪ್ಲಾನ್ ನಡೆಸಿದೆ. ಒಕ್ಕಲಿಗರು, ಪರಿಶಿಷ್ಟ ಜಾತಿ, ಪಂಗಡ ಹಾಗೂ ಹಿಂದುಳಿದ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಹೀಗಾಗಿ, ಪ್ರಮುಖ ಮೂರು ಪಕ್ಷಗಳೂ ಒಕ್ಕಲಿಗ ಸಮುದಾಯದ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿವೆ.
ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ನಡೆದ ಮೊದಲೆರಡು ಚುನಾವಣೆಗಳಲ್ಲಿಎರಡನೇ ಸ್ಥಾನದಲ್ಲಿದ್ದ ಕಾಂಗ್ರೆಸ್, 2018ರಲ್ಲಿ ಮೂರನೇ ಸ್ಥಾನಕ್ಕೆ ಕುಸಿಯಿತು. 2008ರಲ್ಲಿ ಕಾಂಗ್ರೆಸ್‌ನಿಂದ ಕೆ.ಸಿ.ಅಶೋಕ್ ಮತ್ತು ಜೆಡಿಎಸ್‌ನಿಂದ ಅಂದಾನಪ್ಪ, 2013ರಲ್ಲಿ ಕಾಂಗ್ರೆಸ್‌ನ ಬಿ.ಎಲ್.ಶಂಕರ್ ಮತ್ತು ಜೆಡಿಎಸ್‌ನ ಅಂದಾನಪ್ಪ ಬಿಜೆಪಿ ಅಭ್ಯರ್ಥಿ ಮುನಿರಾಜು ವಿರುದ್ಧ ಸೋಲು ಅನುಭವಿಸಿದ್ದರು.
ಎಂ.ಕೃಷ್ಣ ಅವರಿಗೆ ಗನ್‌ಮ್ಯಾನ್ ಆಗಿದ್ದ ಆರ್.ಮಂಜುನಾಥ್ ಎರಡು ಬಾರಿ ಪಾಲಿಕೆ ಚುನಾವಣೆಗೆ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಸೋತಿದ್ದರು. ಬಳಿಕ ಜೆಡಿಎಸ್‌ಗೆ ಸೇರ್ಪಡೆಯಾಗಿ 2018ರಲ್ಲಿ ಬಿಜೆಪಿಯ ಮುನಿರಾಜು ಅವರನ್ನು ಸೋಲಿಸಿ ಶಾಸಕರಾದರು. ಈ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪಿ.ಎನ್.ಕೃಷ್ಣಮೂರ್ತಿ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟುಕೊಳ್ಳಬೇಕಾಯಿತು.
ಇನ್ನೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ನಾಲ್ಕನೇ ಚುನಾವಣೆಯಲ್ಲಿ ಮೂರು ಪಕ್ಷಗಳೂ ಬಲಾಬಲ ಪ್ರದರ್ಶನಕ್ಕೆ ಸಜ್ಜಾಗಿವೆ. ಪ್ರಮುಖವಾಗಿ ಈ ಬಾರಿ ಕ್ಷೇತ್ರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಡಲಿದ್ದು, ಬಿಜೆಪಿ ಹಾಗೂ ಜೆಡಿಎಸ್ ಪೈಪೋಟಿಯಲ್ಲಿ ಕಾಂಗ್ರೆಸ್ ಸಹ ತನ್ನ ಮತ ಬ್ಯಾಂಕ್ ಬಲಪಡಿಸಿಕೊಂಡು ಗೆಲ್ಲುವ ತವಕದಲ್ಲಿದೆ.
ಇನ್ನೂ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹಾಲಿ ಶಾಸಕರಾದ ಆರ್.ಮಂಜುನಾಥ್ ಅವರು ಚುನಾವಣಾ ಕಣದಲ್ಲಿದ್ದು, ಎರಡನೇ ಬಾರಿ ಗೆಲ್ಲುವ ವಿಶ್ವಾಸದಲ್ಲಿದ್ದಾರೆ. ಬಿಜೆಪಿಯ ಎಸ್.ಮುನಿರಾಜು ಮತ್ತು ಕಾಂಗ್ರೆಸ್‌ನ ಜಿ.ಧನಂಜಯ ಅವರು ತೆನೆ ಪಕ್ಷದ ಪ್ರಾಬಲ್ಯ ಕುಗ್ಗಿಸಿ, ಕ್ಷೇತ್ರದ ಚುಕ್ಕಾಣಿ ಹಿಡಿಯುವ ವಿಶ್ವಾಸದಲ್ಲಿದ್ದಾರೆ.
ಒಟ್ಟು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿಅಂತಿಮವಾಗಿ 15 ಮಂದಿ ಅಭ್ಯರ್ಥಿಗಳು ಕಣದಲ್ಲಿಉಳಿದಿದ್ದು, ಕ್ಷೇತ್ರದ ಹಾಲಿ ಶಾಸಕರಾಗಿರುವ ಆರ್.ಮಂಜುನಾಥ್ ಅವರ ಹೆಸರಿನ ಮೂವರು ಪಕ್ಷೇತರ ಅಭ್ಯರ್ಥಿಗಳು ಸ್ಪರ್ಧಿಸಿರುವುದು ಕುತೂಹಲ ಮೂಡಿಸಿದೆ. ಮಂಜುನಾಥ್ ಅವರ ಪಾಲಾಗುವ ಮತಗಳನ್ನು ಛಿದ್ರಿಸಲು ಪ್ರತಿಸ್ಪರ್ಧಿಗಳು ಅದೇ ಹೆಸರಿನ ಮೂವರನ್ನು ಸ್ಪರ್ಧಿಸುವಂತೆ ಮಾಡಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಒಟ್ನಾಲಿ ಕೈಗಾರಿಕಾ ಸಾಮ್ರಾಜ್ಯವಾಗಿರುವ ದಾಸರಹಳ್ಳಿ ಕ್ಷೇತ್ರದ ಅಧಿಪತಿಯನ್ನು ಮತದಾರರೇ ನಿರ್ಧರಿಸಬೇಕಿದೆ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications