ಪ್ರತಿಷ್ಠಿತ ಕ್ಷೇತ್ರವಾದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಕೈ-ಕಮಲ-ದಳ ಜಿದ್ದಾಜಿದ್ದಿ; ಯಾರಿಗೆ ವಿಜಯಮಾಲೆ?
ಬೆಂಗಳೂರು,ಮೇ2: ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದ್ದು, ಪ್ರತಿಷ್ಠಿತ ಕ್ಷೇತ್ರವಾದ ಮಹಾಲಕ್ಷ್ಮಿ ಲೇಔಟ್‌ನಲ್ಲಿ ಗದ್ದುಗೆಯೇರಲು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನಡುವೆ ನೇರ ಜಿದ್ದಾಜಿದ್ದಿ ಏರ್ಪಟ್ಟಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರವು ಪ್ರತಿಷ್ಠಿತ ಕ್ಷೇತ್ರಗಳಲ್ಲಿ ಒಂದಾಗಿದ್ದು, ನಗರ ಪ್ರದೇಶದಿಂದ ಕೂಡಿರುವ ಈ ಕ್ಷೇತ್ರದಲ್ಲಿ ಹಳೆ ಬಡಾವಣೆಗಳು, ಕೊಳಚೆ ಪ್ರದೇಶಗಳು, ಕೈಗಾರಿಕಾ ಪ್ರದೇಶಗಳು ಹೆಚ್ಚಾಗಿವೆ. ಮಾಗಡಿ, ತುಮಕೂರು, ಕುಣಿಗಲ್, ನೆಲಮಂಗಲ ಹಾಗೂ ಉತ್ತರ ಕರ್ನಾಟಕ ಭಾಗದಿಂದ ಬಂದಿರುವ ವಲಸಿಗರು ಅಧಿಕ ಸಂಖ್ಯೆಯಲ್ಲಿದ್ದಾರೆ. ಇನ್ನೂ ರಾಜಾಜಿನಗರ, ಯಲಹಂಕ, ಉತ್ತರಹಳ್ಳಿ ಕ್ಷೇತ್ರ ವ್ಯಾಪ್ತಿಯಲ್ಲಿದ್ದ ಕೆಲವೊಂದು ಪ್ರದೇಶಗಳ ಸೇರ್ಪಡೆಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರ ರೂಪುಗೊಂಡಿತು.

ಇನ್ನೂ ಕ್ಷೇತ್ರ ಪುನರ್‌ವಿಂಗಡಣೆ ಬಳಿಕ ನಡೆದ ಮೊದಲ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ನೆ.ಲ.ನರೇಂದ್ರಬಾಬು, ಬಿಜೆಪಿಯಿಂದ ಆರ್.ವಿ.ಹರೀಶ್ ಹಾಗೂ ಜೆಡಿಎಸ್‌ನಿಂದ ಕೆ.ಗೋಪಾಲಯ್ಯ ಕಣಕ್ಕಿಳಿದಿದ್ದರು. ನೆ.ಲ.ನರೇಂದ್ರಬಾಬು ಅವರು ಹರೀಶ್ ಅವರನ್ನು 3225 ಮತಗಳ ಅಂತರದಿಂದ ಸೋಲಿಸಿ ಶಾಸಕರಾದರು. ಇನ್ನೂ ಗೋಪಾಲಯ್ಯ ಅವರು ಮೂರನೇ ಸ್ಥಾನ ಪಡೆದಿದ್ದರು. ಕೆ.ಗೋಪಾಲಯ್ಯ, ಪಾಲಿಕೆ ಸದಸ್ಯರಾಗಿದ್ದರು.
2013 ರ ಚುನಾವಣೆಯಲ್ಲಿ ಜೆಡಿಎಸ್‌ನ ಕೆ.ಗೋಪಾಲಯ್ಯ ಅವರು ಕಾಂಗ್ರೆಸ್ ನಿಂದ ನೆ.ಲ.ನರೇಂದ್ರ ಬಾಬು ಹಾಗೂ ಬಿಜೆಪಿಯಿಂದ ಸ್ಪರ್ಧಿಸಿದ್ದ ಮಾಜಿ ಉಪ ಮೇಯರ್ ಎಸ್.ಹರೀಶ್ ಅವರು ಸ್ಪರ್ಧೆ ನಡೆಸಿದ್ದು, 2013 ರಲ್ಲಿ ಮೊದಲ ಬಾರಿಗೆ ಶಾಸಕರಾಗಿದ್ದರು. ಇನ್ನೂ 2018ರಲ್ಲಿ ಮತ್ತೆ ಸ್ಪರ್ಧಿಸಿ ಕೆ ಗೋಪಾಲಯ್ಯ ಗೆಲುವು ಸಾಧಿಸಿದರು. ಆ ಚುನಾವಣೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿಯಿಂದ ಸ್ಪರ್ಧಿಸಿದ್ದ ನೆ.ಲ.ನರೇಂದ್ರಬಾಬು ಎದುರಾಳಿಯಾಗಿದ್ದರು. ಆಗ 41,100 ಮತಗಳ ಅಂತರದಿಂದ ಸುಲಭ ಜಯ ದಾಖಲಿಸಿದರು.
ಇನ್ನೂ ಜೆಡಿಎಸ್ ತೊರೆದು ಬಿಜೆಪಿ ಸೇರಿದ ಕೆ.ಗೋಪಾಲಯ್ಯ ಉಪಚುನಾವಣೆಯಲ್ಲಿ ಗೆದ್ದು ಮಂತ್ರಿಯಾಗಿದ್ದು, ಕ್ಷೇತ್ರದಲ್ಲಿ ಪಕ್ಷಕ್ಕಿಂತ ವೈಯಕ್ತಿಕ ವರ್ಚಸ್ಸು ಬೆಳೆಸಿಕೊಂಡಿರುವ ಕೆ.ಗೋಪಾಲಯ್ಯ, ಪ್ರತಿ ಚುನಾವಣೆಯಲ್ಲೂ ತಮ್ಮ ಗೆಲುವಿನ ಅಂತರವನ್ನು ಹೆಚ್ಚಿಸಿಕೊಳ್ಳುತ್ತಲೇ ಇದ್ದಾರೆ. ಮೊದಲಿಗೆ ಕೈ ಪಡೆಯ ಭದ್ರಕೋಟೆಯಾಗಿದ್ದ ಕ್ಷೇತ್ರವು ಗೋಪಾಲಯ್ಯ ಅವರ ಪ್ರವೇಶದಿಂದ ತೆನೆ ಪಕ್ಷದ ಪಾಲಾಯಿತು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಮಹಾಲಕ್ಷ್ಮಿ ಲೇಔಟ್ ನಲ್ಲಿ ಕಮಲ ಅರಳಿಸಿದ್ದ ಗೋಪಾಲಯ್ಯ ಅವರು ಈ ಬಾರಿಯೂ ಗೆಲ್ಲುವ ವಿಶ್ವಾಸದಲ್ಲಿದ್ದು, ಗೋಪಾಲಯ್ಯ ಅವರ ಗೆಲುವಿಗೆ ಬ್ರೇಕ್ ಹಾಕಲು ಕಾಂಗ್ರೆಸ್ ಪ್ರಯತ್ನ ಪಟ್ಟಿದ್ದು, ಜೆಡಿಎಸ್ ಭದ್ರಕೋಟೆಯಾಗಿರುವ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರವನ್ನ ವಶಪಡಿಸಿಕೊಳ್ಳಲು ದಳಪತಿ ರಣತಂತ್ರ ರೂಪಿಸಿದ್ದಾರೆ.
ಒಕ್ಕಲಿಗರ ಮತದಾರರು ಹೆಚ್ಚಾಗಿರುವ ಈ ಕ್ಷೇತ್ರದಲ್ಲಿ ಲಿಂಗಾಯತ ಹಾಗೂ ಬ್ರಾಹ್ಮಣ ಮಕತದಾರರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಕಣದಲ್ಲಿರುವ ಅಭ್ಯರ್ಥಿಗಳ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಇನ್ನೂ ಈ ಬಾರೀ ಒಕ್ಕಲಿಗ ಸಮುದಾಯದಿಂದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕಷದಿಂದ ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಹಾಲಿ ಶಾಸಕರು ಹಾಗೂ ಬಿಜೆಪಿ ಅಭ್ಯರ್ಥಿಯಾದ ಕೆ ಗೋಪಾಲಯ್ಯ ಕಣದಲ್ಲಿದ್ದು, ಕಾಂಗ್ರೆಸ್ ನಿಂದ ಬಿಬಿಎಂಪಿ ಮಾಜಿ ಸದಸ್ಯ ಕೇಶವಮೂರ್ತಿ ಹಾಗೂ ಜೆಡಿಎಸ್‌ನಿಂದ ಕೆ.ಸಿ.ರಾಜಣ್ಣ ಸ್ಪರ್ಧಿಸಿದ್ದು, ಜೆಡಿಎಸ್ ಕೋಟೆಯನ್ನ ಮತ್ತೆ ಮರಳಿ ಪಡೆಯಲು ದಳಪತಿಗಳು ಒಕ್ಕಲಿಗ ನಾಯಕನಿಗೆ ಟಿಕೆಟ್ ನೀಡಿದ್ದಾರೆ.
ಇನ್ನೂ ಆಮ್ ಆದ್ಮಿ ಪಕ್ಷದಿಂದ ಚುನಾವಣಾ ಅಖಾಡದಲ್ಲಿರುವ ಶಾಂತಲಾ ದಾಮ್ಲೆ ಸುಶಿಕ್ಷಿತ ಮತದಾರರನ್ನು ಸೆಳೆಯುತ್ತಿದ್ದಾರೆ. ಸತತ ಮೂರು ಚುನಾವಣೆಗಳಲ್ಲಿ ಗೆಲುವು ಸಾಧಿಸಿದ್ದ ಕೆ ಗೋಪಾಲಯ್ಯ ಅವರನ್ನ ಸೋಲಿಸಲು ಬಿಜೆಪಿ ಹಾಗೂ ಜೆಡಿಎಸ್ ಪಣ ತೊಟ್ಟಿದ್ದು, ವೈಯಕ್ತಿಕ ವರ್ಚಸ್ಸು ಹೊಂದಿರುವ ಕೆ ಗೋಪಾಲಯ್ಯ ಗೆಲ್ಲುವು ಸಾಧಿಸುವ ಸಾಧ್ಯತೆ ಹೆಚ್ಚಾಗಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications