ತಿ.ನರಸೀಪುರದಲ್ಲಿ ಶಂಕರ್, ಸುನೀಲ್ ನಡುವೆ ಜಿದ್ದಾಜಿದ್ದಿ
ಮೈಸೂರು, ಮಾರ್ಚ್ 11 : ಮೈಸೂರು ಜಿಲ್ಲೆಯಲ್ಲಿರುವ ವಿಧಾನಸಭಾ ಕ್ಷೇತ್ರಗಳ ಪೈಕಿ ಇದೀಗ ತಿ. ನರಸೀಪುರ ವಿಧಾನಸಭಾ ಕ್ಷೇತ್ರದತ್ತ ಎಲ್ಲರ ಚಿತ್ತಹರಿಯುತ್ತಿದ್ದು, ಕುತೂಹಲ ಮನೆ ಮಾಡಿದೆ. ಈಗಾಗಲೇ ಈ ಕ್ಷೇತ್ರ ಲೋಕೋಪಯೋಗಿ ಸಚಿವ ಎಚ್.ಸಿ. ಮಹದೇವಪ್ಪ ಅವರದ್ದಾಗಿದ್ದು, ಮುಂದಿನ ಚುನಾವಣೆಗೆ ಅವರ ಪುತ್ರ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸುವುದು ಖಚಿತವಾಗಿದೆ.
ಹಾಗೆ ನೋಡಿದರೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಗೆಲ್ಲಬಹುದಾದ ಅಭ್ಯರ್ಥಿಗಳ ಆಯ್ಕೆಯಲ್ಲಿ ನಿರತವಾಗಿವೆ. ಈಗಾಗಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಪಟ್ಟಣದಲ್ಲಿ ನಡೆದ ಪಕ್ಷ ಸಂಘಟನಾ ಕಾರ್ಯಕ್ರಮದಲ್ಲಿ ಎಸ್. ಶಂಕರ್ ಅವರನ್ನು ಅಧಿಕ ಮತಗಳ ಅಂತರದಿಂದ ಗೆಲ್ಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡುವ ಮೂಲಕ ಅವರೇ ಪಕ್ಷದ ಅಭ್ಯರ್ಥಿ ಎಂಬ ಸುಳಿವು ನೀಡಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಸಚಿವ ಮಹದೇವಪ್ಪ ಅಥವಾ ಅವರ ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್ ಖಚಿತವಾಗಿದ್ದು, ಜೆಡಿಎಸ್‌ನಿಂದ ಜಿಲ್ಲಾ ಪಂಚಾಯತ್ ಸದಸ್ಯ ಎಂ. ಅಶ್ವಿನ್ ಕುಮಾರ್‌ಗೆ ಈಗಾಗಲೇ ಟಿಕೆಟ್ ಘೋಷಣೆಯಾಗಿದೆ.

ಬಿಜೆಪಿ ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಾಜಿ ಶಾಸಕ ಭಾರತೀಶಂಕರ್, ಜಿ.ಪಂ.ಸದಸ್ಯ ಪುಟ್ಟಬಸವಯ್ಯ ಅವರು ಇದೀಗ ದಿಢೀರ್ ಆಗಿ ಪಕ್ಷಕ್ಕೆ ಸೇರ್ಪಡೆಯಾಗಿರುವ ಎಸ್. ಶಂಕರ್ ಅವರಿಗೆ ಟಿಕೆಟ್ ನೀಡುವ ಸುಳಿವು ನೀಡಿದ್ದರಿಂದ ಭ್ರಮನಿರಸನರಾಗಿದ್ದಾರೆ. ಇದರಿಂದ ಬಿಜೆಪಿಯಲ್ಲಿ ಒಂದಷ್ಟು ಬದಲಾವಣೆಗಳಾಗುವ ಸಾಧ್ಯತೆ ಹೆಚ್ಚಾಗಿದೆ. ಕೆಲವರ ಪ್ರಕಾರ ಎಸ್. ಶಂಕರ್ ರಾಜಕೀಯದಲ್ಲಿ ಅನನುಭವಿಯಾದರೂ ಚಾಣಾಕ್ಷ ನಡೆ ಇಡುವುದರಲ್ಲಿ ಎತ್ತಿದ ಕೈಯಾದ್ದರಿಂದ ಇತರೆ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ ಪೈಪೋಟಿ ನೀಡುತ್ತಾರೆಂಬುದು ಕೆಲವರ ಅಭಿಪ್ರಾಯ.
ಈ ಮೊದಲು ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ವಲಸೆ ಬಂದ ಮಾಜಿ ಶಾಸಕ ಭಾರತೀಶಂಕರ್ ಅವರಿಗೆ ಬಿಜೆಪಿ ಪಕ್ಷದ ಟಿಕೆಟ್ ಸಿಗಲಿದೆ ಎಂಬುದು ಅನೇಕರ ಮತ್ತು ಅವರ ಅಭಿಮಾನಿಗಳ ಲೆಕ್ಕಾಚಾರವಾಗಿತ್ತು. ಆದರೆ ಎಸ್. ಶಂಕರ್ ಅವರ ಚಟುವಟಿಕೆ ಗಮನಿಸಿದ ಯಡಿಯೂರಪ್ಪ ಅವರನ್ನೇ ಏಕಾಏಕಿ ಅಭ್ಯರ್ಥಿಯಾಗಿಸಿರುವುದು ಹಲವರ ಅಚ್ಚರಿಗೆ ಮತ್ತು ಅಸಮಾಧಾನಕ್ಕೆ ಕಾರಣವಾಗಿದೆ.

ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಗೊಳ್ಳುತ್ತಿರುವುದು ಶಂಕರ್‌ಗೆ ವರದಾನವಾಗಲಿದೆ. ರಾಜಕೀಯದಲ್ಲಿ ನೈಪುಣ್ಯತೆ ಹೊಂದಿರುವ ಮಾಜಿ ಶಾಸಕ ಕೆ.ಎಂ. ಚಿಕ್ಕಮಾದನಾಯಕರವರ ಬೆಂಬಲ ಸಹ ಇಲ್ಲಿ ಶಂಕರ್‌ಗೆ ಮತಗಳಿಕೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ.
ಬನ್ನೂರು ಗ್ರಾಮದಲ್ಲಿ ಒಕ್ಕಲಿಗ ಹಾಗೂ ನಾಯಕ ಜನಾಂಗದ ಮತಗಳು ನಿರ್ಣಾಯಕ ಪಾತ್ರವನ್ನು ವಹಿಸುತ್ತವೆ. ಅಂತೆಯೇ ಒಕ್ಕಲಿಗ ಮತಗಳನ್ನು ಸುನೀತಾ ವೀರಪ್ಪಗೌಡ, ನಾಯಕ ಜನಾಂಗದ ಮತಗಳನ್ನು ಚಿಕ್ಕಮಾದನಾಯಕರು ಬಿಜೆಪಿ ಪಕ್ಷದೆಡೆಗೆ ಸೆಳೆಯುವುದರಲ್ಲಿ ಅನುಮಾನವೇ ಇಲ್ಲ ಎಂಬುದು ರಾಜಕೀಯ ವಿಶ್ಲೇಷಕರ ಲೆಕ್ಕಾಚಾರವಾಗಿದೆ.

ಇದೆಲ್ಲದರ ನಡುವೆ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದು ಹೊಸ ಮುಖಗಳಿಗೆ ಮನ್ನಣೆ ನೀಡಲು ಮುಂದಾಗಿರುವುದು, ಸಚಿವ ಮಹದೇವಪ್ಪ ಕ್ಷೇತ್ರದ ಜನತೆಗೆ ಗಗನ ಕುಸುಮವಾಗಿದೆ. ಸುನೀಲ್ ಬೋಸ್ ಮರಳುದಂಧೆಯಲ್ಲಿ ಸಿಲುಕಿ ನ್ಯಾಯಾಲಯದ ನಿಂದನೆಗೆ ಗುರಿಯಾಗಿರುವುದರಿಂದ ಮಹದೇವಪ್ಪ ಅಥವಾ ಸುನೀಲ್ ಬೋಸ್‌ಗೆ ಹಿನ್ನಡೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಇನ್ನು ಜೆಡಿಎಸ್ ಪಕ್ಷದ ಅಶ್ವಿನ್ ಕುಮಾರ್ ಜಿ.ಪಂ. ಸದಸ್ಯರಾಗಿ ಕ್ಷೇತ್ರದ ಪರಿಚಯ ಹೊಂದಿದ್ದರಾದರೂ ಶಂಕರ್‌ಗೆ ಬೆನ್ನೆಲುಬಾಗಿ ಘಟಾನುಘಟಿ ರಾಜಕಾರಣಿಗಳು ನಿಲ್ಲುವುದರಿಂದ ಅಶ್ವಿನ್ ಶ್ರಮಕ್ಕೆ ಪ್ರತಿಫಲ ದೊರಕುವುದು ಕನಸಿನ ಮಾತೇ ಸರಿ. ಇಲ್ಲಿ ಅಶ್ವಿನ್ ರಿಗೆ ಸ್ವಪಕ್ಷದ ಕಾರ್ಯಕರ್ತರೇ ಟಾಂಗ್ ನೀಡುವ ಸಾಧ್ಯತೆ ನಿಚ್ಚಳವಾಗಿ ಕಂಡುಬರುತ್ತಿದೆ.

ರಾಜಕೀಯದಲ್ಲಿ ಚಾಣಾಕ್ಷರಾಗಿರುವ ಸಚಿವ ಮಹದೇವಪ್ಪ ತಾವೇ ಅಭ್ಯರ್ಥಿಯಾಗಿ ಸ್ಪರ್ಧೆಗಿಳಿಯುತ್ತಾರೋ ಅಥವಾ ಪುತ್ರ ಸುನೀಲ್ ಬೋಸ್‌ರನ್ನು ಅಖಾಡಕ್ಕೆ ಇಳಿಸುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
ಹಲವರ ವಿರೋಧದ ನಡುವೆಯೂ ಜೆಡಿಎಸ್ ಟಿಕೆಟ್ ಗಿಟ್ಟಿಸಿಕೊಂಡು ಚುನಾವಣಾ ಕಣದಲ್ಲಿರುವ ಅಶ್ವಿನ್ ಕುಮಾರ್, ತಮ್ಮ ಮೇಲೆ ನಂಬಿಕೆ ಇರಿಸಿ ಟಿಕೆಟ್ ನೀಡಿದ ಕುಮಾರಸ್ವಾಮಿ ಯವರಿಗೆ ಗೆಲುವಿನ ಉಡುಗೊರೆ ನೀಡುವರೇ ಎಂಬುದನ್ನೂ ಕಾದು ನೋಡಬೇಕಿದೆ.
-
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ












Click it and Unblock the Notifications