ಜಗದೀಶ್ ಶೆಟ್ಟರ್ ವಿರುದ್ಧ ಟ್ರೋಲ್ ಹಾವಳಿ ಶುರು, ಬಿಜೆಪಿ ಸೇರಿದ್ದಕ್ಕೆ ರಿವೇಂಜ್?
ಜಗದೀಶ್ ಶೆಟ್ಟರ್ ಅವರು ತಮ್ಮ ಅಜ್ಞಾತ ವಾಸ ಮುಗಿಸಿ ಇದೀಗ ಮರಳಿ ಬಿಜೆಪಿ ಗೂಡಿಗೆ ಸೇರಿದ್ದಾರೆ. ಟಿಕೆಟ್ ಕೊಟ್ಟಿಲ್ಲ ಅನ್ನೋ ಸಿಟ್ಟಲ್ಲಿ 2023 ಕರ್ನಾಟಕ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಗೆ ಗುಡ್‌ಬೈ ಹೇಳಿ, ಕಾಂಗ್ರೆಸ್‌ಗೆ ಸೇರಿದ್ದರು ಜಗದೀಶ್ ಶೆಟ್ಟರ್. ಆದರೆ ಇದೀಗ, ಭಾರಿ ದೊಡ್ಡ ಸಂಚಲನ ಸೃಷ್ಟಿಯಾಗಿದ್ದು ಜಗದೀಶ್ ಶೆಟ್ಟರ್ ಬಿಜೆಪಿಗೆ ಮರಳಿದ್ದಾರೆ. ಆದ್ರೆ ಹೀಗೆ ಬಿಜೆಪಿಗೆ ವಾಪಸ್ ಹೋಗಿರುವ ಜಗದೀಶ್ ಶೆಟ್ಟರ್ ವಿರುದ್ಧ ಟ್ರೋಲ್ ಶುರುವಾಗಿದೆ!
ಹೌದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಾಸ್ ಹೋದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಟ್ರೊಲ್ ಶುರುವಾಗಿದೆ. ಈ ಮೂಲಕ ಬಿಜೆಪಿಗೆ ಮರಳಿದರು ಕೂಡ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರಿಗೆ ಟ್ರೋಲ್ ಕಾಟ ಹೆಚ್ಚಾಗಿದೆ. ಫೇಸ್ ಬುಕ್, ವಾಟ್ಸಾಪ್ & ಇತರ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್‌ಗಳು ಪೋಸ್ಟ್ ಆಗುತ್ತಿವೆ. ಅದ್ರಲ್ಲೂ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಕೈಕೊಟ್ಟ ವಿಚಾರ ತಿಳಿಯುತ್ತಿದ್ದಂತೆ, ಕಾಂಗ್ರೆಸ್ ಕಾರ್ಯಕರ್ತರು ಇದೇ ವಿಚಾರ ಮುಂದಿಟ್ಟುಕೊಂಡು ವಾಗ್ದಾಳಿ ಹೆಚ್ಚಿಸಿದ್ದಾರೆ.

ಎಲ್ಲೆಲ್ಲೂ ಮಾಜಿ ಸಿಎಂ ಟ್ರೋಲ್
ಅಂದಹಾಗೆ ಜಗದೀಶ್ ಶೆಟ್ಟರ್ ಅವರನ್ನು ಇದೀಗ ಟ್ರೋಲ್ ಮಾಡುವ ಜೊತೆ ಜೊತೆಯಲ್ಲೆ ಬಿಜೆಪಿ ವಿರುದ್ಧವೂ ಈ ಟ್ರೋಲ್‌ಗಳಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಶೆಟ್ಟರ್ ಮರಳಿದರೆ ಅವರನ್ನು ಬಿಜೆಪಿ ನಾಯಕರು ಹೇಗೆ ಕರೆದುಕೊಂಡರು? ಅಂತಾ ಟ್ರೋಲರ್ಸ್ ಪ್ರಶ್ನೆಯನ್ನು ಕೇಳುತ್ತಿದ್ದಾರೆ. ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಜಗದೀಶ್ ಶೆಟ್ಟರ್ ವಿರುದ್ಧ ಇರುವ ಪೋಸ್ಟ್ ಎಲ್ಲೆಲ್ಲೂ ವೈರಲ್ ಆಗುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್ ಕೂಡ ಈ ಕುರಿತಾಗಿ, ಭಾರಿ ಆಕ್ರೋಶ ವ್ಯಕ್ತಪಡಿಸುತ್ತಿದೆ.
ಕಾಂಗ್ರೆಸ್ ಕಾರ್ಯಕರ್ತರ ವಿಜಯೋತ್ಸವ!
ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸೋತರೂ ಕಾಂಗ್ರೆಸ್ ಪಕ್ಷದಿಂದ ಎಂಎಲ್‌ಸಿ ಆಗಿದ್ದ ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟಿದ್ದಾರೆ. ಆದರೆ ಹೀಗೆ ಶೆಟ್ಟರ್ ಬಿಜೆಪಿ ಪಕ್ಷಕ್ಕೆ ವಾಪಸ್ ಆಗಿರುವುದು ಕಾಂಗ್ರೆಸ್ ಕಾರ್ಯಕರ್ತರಿಗೆ ಸಿಟ್ಟು ತರಿಸಿದೆ. ಹೀಗಾಗಿ ಈಗ ಭಾರಿ ಪ್ರತಿಭಟನೆ ಹಾಗೂ ಆಕ್ರೋಶ ಭುಗಿಲೆದ್ದಿದೆ. ಇದೇ ರೀತಿ ಜಗದೀಶ್ ಶೆಟ್ಟರ್, ಕಾಂಗ್ರೆಸ್ ಬಿಟ್ಟು ಮರಳಿ ಬಿಜೆಪಿ ಸೇರಿದ್ದಕ್ಕೆ ಈಗ ಕಾಂಗ್ರೆಸ್ ಕಾರ್ಯಕರ್ತರು ಶೆಟ್ಟರ್ ಫೋಟೋ ಎದುರು ಪಟಾಕಿ ಸಿಡಿಸಿ & ಸಿಹಿ ಹಂಚಿ ಭರ್ಜರಿ ವಿಜಯೋತ್ಸವ ಆಚರಿಸಿದ್ದಾರೆ.
ಹುಬ್ಬಳ್ಳಿ ಚನ್ನಮ್ಮ ಸರ್ಕಲ್‌ನಲ್ಲಿ ಶೆಟ್ಟರ್ ಫೋಟೋ ಎದುರು ಹೀಗೆ ಪಟಾಕಿ ಸಿಡಿಸಿ, ಶೆಟ್ಟರ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ಹೊರಹಾಕಿದ್ರು. ಹಾಗೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಹಾಳು ಮಾಡಲು ಶೆಟ್ಟರ್ ಬಂದಿದ್ದರು ಎಂದು ಕಾಂಗ್ರೆಸ್‌ನ ಕಾರ್ಯಕರ್ತರು ಇದೀಗ ಗಂಭೀರ ಆರೋಪ ಮಾಡಿದ್ದಾರೆ.

ಲೋಕಸಭೆ ಚುನಾವಣೆಗೆ ಶೆಟ್ಟರ್ ಸ್ಪರ್ಧೆ?
ಇಷ್ಟೆಲ್ಲದರ ಮಧ್ಯೆ ಈಗ ಕಾಂಗ್ರೆಸ್‌ಗೆ ಕೈಕೊಟ್ಟು ಬಿಜೆಪಿ ಸೇರಿರುವ ಜಗದೀಶ್ ಶೆಟ್ಟರ್ ಅವರು ಮುಂದಿನ ಲೋಕಸಭೆ ಚುನಾವಣೆ ಅಂದ್ರೆ, 2024ರ ಲೋಕಸಭೆಯಲ್ಲಿ ಸ್ಪರ್ಧಿಸುತ್ತಾರಾ ಎಂಬ ಕುತೂಹಲ ಮೂಡಿದೆ. ಮತ್ತೊಂದು ಕಡೆ ಜಗದೀಶ್ ಶೆಟ್ಟರ್ ಅವರಿಗೆ ಮುಂದಿನ ಲೋಕಸಭೆ ಚುನಾವಣೆಯಲ್ಲಿ, ಮಧ್ಯ ಕರ್ನಾಟಕ ಅಥವಾ ಉತ್ತರ ಕರ್ನಾಟಕದ ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್ ಸಿಗಬಹುದು ಎಂಬ ಮಾತು ಓಡಾಡುತ್ತಿವೆ. ಆದರೆ ಈ ಬಗ್ಗೆ ಇನ್ನು ಅಧಿಕೃತವಾದ ಮಾಹಿತಿ ಹೊರಬಿದ್ದಿಲ್ಲ.
ದಿಢೀರ್ ಹೀಗೆ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಬಿಟ್ಟು ಮತ್ತೊಮ್ಮೆ ಬಿಜೆಪಿಯ ಬಾಗಿಲನ್ನು ತಟ್ಟಿರುವುದು ಕಾಂಗ್ರೆಸ್ ನಾಯಕರಿಗೂ ಆಘಾತ ಕೊಟ್ಟಿದೆ. 2023ರ ಕರ್ನಾಟಕ ವಿಧಾನಸಭೆಯ ಚುನಾವಣೆ ವೇಳೆ ಜಗದೀಶ್ ಶೆಟ್ಟರ್ ಅವ್ರನ್ನ ಅದ್ಧೂರಿಯಾಗಿ ಕಾಂಗ್ರೆಸ್‌ಗೆ ಸೇರಿಸಿಕೊಂಡಿದ್ದರು. ಆದರೆ ಕೆಲ ತಿಂಗಳಲ್ಲಿ ಜಗದೀಶ್ ಶೆಟ್ಟರ್ ಕಾಂಗ್ರೆಸ್‌ಗೆ ಗುಡ್ ಬೈ ಹೇಳಿ, ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ದೊಡ್ಡ ಆಘಾತ ನೀಡಿದ್ದಾರೆ. ಮತ್ತೊಂದು ಕಡೆ ಕಾಂಗ್ರೆಸ್‌ನ ಮತ್ತಷ್ಟು ಲೀಡರ್ಸ್ ಈಗ ಬಿಜೆಪಿ ಕಡೆ ಚಿತ್ತ ನೆಟ್ಟಿದ್ದಾರೆ ಎಂಬ ಮಾತುಗಳು ಕೂಡ ಕೇಳಿಬರುತ್ತಿವೆ.











Click it and Unblock the Notifications