ಕನ್ನಡ ಭಾಷೆ ಕಲಿಸುವ ನಿಯಮ ತಿದ್ದುಪಡಿಗೆ ಟಿಎಸ್ ನಾಗಾಭರಣ ಆಕ್ಷೇಪ
ಬೆಂಗಳೂರು, ಜೂ.09: ರಾಜ್ಯದ ಶಾಲೆಗಳಲ್ಲಿ ಕನ್ನಡ ಕಲಿಸುವ ವಿಚಾರವಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನಿರಾಕ್ಷೇಪಣ ಪತ್ರ ವಿತರಣೆ ಮತ್ತು ನಿಯಂತ್ರಣ) ನಿಯಮ 2022ರ ಕರಡು ಅಧಿಸೂಚನೆಗೆ ತಂದಿರುವ ತಿದ್ದುಪಡಿ ವಿರುದ್ಧ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಟಿ.ಎಸ್.ನಾಗಾಭರಣ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಈ ಕುರಿತು ಡಾ.ಟಿ.ಎಸ್.ನಾಗಾಭರಣ ಗುರುವಾರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ರಾಜ್ಯ ಸರ್ಕಾರ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ. ಕನ್ನಡ ಭಾಷೆಗೆ ಧಕ್ಕೆ ಉಂಟಾಗುವ ನಿಟ್ಟಿನಲ್ಲಿ ಕರಡು ಅಧಿಸೂಚನೆಗೆ ತಿದ್ದುಪಡಿ ತಂದಿರುವುದು ಸರಿಯಾದ ಕ್ರಮವಲ್ಲ. ಕೂಡಲೇ ತಿದ್ದುಪಡಿ ನಿರ್ಧಾರದಿಂದ ಹಿಂದೆ ಸರಿಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಆಗಿದ್ದೇನು?:
ರಾಜ್ಯದ ಎಲ್ಲ ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್ಇ, ಐಸಿಎಸ್ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕೆಂಬ ನಿಯಮ ಇತ್ತು. ಈಗ ರಾಜ್ಯ ಸರ್ಕಾರ ಆ ಕರಡು ಅಧಿಸೂಚನೆಗೆ ತಿದ್ದುಪಡಿ ತಂದಿದೆ. ಅದರ ಪ್ರಕಾರ, ಇನ್ನು ಮುಂದೆ ಕನ್ನಡವನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಸಲು ತಿದ್ದುಪಡಿ ಮೂಲಕ ಅವಕಾಶ ನೀಡಲಾಗಿದೆ. ಇದು ಕನ್ನಡ ವಿರೋಧಿ ಕ್ರಮವಾಗಿದೆ. ಸರ್ಕಾರದ ತಂದ ತಿದ್ದುಪಡಿಯಂತೆ ನಿಯಮಾವಳಿ ರೂಪಿಸಿದ್ದೆ ಆದಲ್ಲಿ ಕನ್ನಡಕ್ಕೆ ಕನ್ನಡ ನೆಲದಲ್ಲಿಯೇ ತೀವ್ರ ಹಿನ್ನಡೆಯಾಗಲಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ರೂಪಿಸಿರುವ ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನಿರಾಕ್ಷೇಪಣ ಪತ್ರ ವಿತರಣೆ ಮತ್ತು ನಿಯಂತ್ರಣ) ನಿಯಮ 2022 ಕರಡು ಅಧಿಸೂಚನೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಟಿ.ಎಸ್.ನಾಗಾಭರಣ ಅವರು ಆಕ್ಷೇಪಣೆ ಸಲ್ಲಿಸಿದ್ದಾರೆ.
ಕರ್ನಾಟಕ ಶಿಕ್ಷಣ ಸಂಸ್ಥೆಗಳ (ನಿರಾಕ್ಷೇಪಣ ಪತ್ರ ವಿತರಣೆ ಮತ್ತು ನಿಯಂತ್ರಣ) ನಿಯಮ 2022 ಕರಡು ಅಧಿಸೂಚನೆಯಲ್ಲಿ ಕನ್ನಡ ಭಾಷಾ ಕಲಿಕಾ ಕಾಯ್ದೆ 2015ರ ಅನುಸಾರ ಕನ್ನಡ ಭಾಷೆಯನ್ನು ಸಿಬಿಎಸ್‌ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ದ್ವಿತೀಯ ಅಥವಾ ತೃತೀಯವಾಗಿ ಕಲಿಸುವ ಅವಕಾಶ ನೀಡಲಾಗಿದೆ ಎಂದು ತಿಳಿಸಲಾಗಿದೆ.
ರಾಜ್ಯದ ಎಲ್ಲ ಕೇಂದ್ರೀಯ ಪಠ್ಯಕ್ರಮದ ಸಿಬಿಎಸ್ಇ, ಐಸಿಎಸ್ಇ ಮತ್ತು ಅಂತಾರಾಷ್ಟ್ರೀಯ ಮಂಡಳಿ (ಐಬಿ) ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸಬೇಕೆಂದು ಈವರೆಗೆ ಇದ್ದ ನಿಯಮಕ್ಕೆ ತಿದ್ದುಪಡಿ ತಂದು ಇನ್ನು ಮುಂದೆ ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕನ್ನಡ ಕಲಿಯಬೇಕೆಂದು ಅಧಿಸೂಚನೆಯಲ್ಲಿ ತಿಳಿಸಿರುವುದು ಸರಿಯಾದ ಕ್ರಮವಲ್ಲ. ಕರಡು ಅಧಿಸೂಚನೆಯಲ್ಲಿ ತಿಳಿಸಿದಂತೆ ನಿಯಮಾವಳಿ ರೂಪಿಸಿದರೆ ಕನ್ನಡಕ್ಕೆ ತೀವ್ರ ಹಿನ್ನಡೆಯಾಗಲಿದೆ. ಜೊತೆಗೆ ಸಿಬಿಎಸ್‌ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಯುತ್ತಿರುವ ಮಕ್ಕಳ ಭವಿಷ್ಯಕ್ಕೂ ಸಮಸ್ಯೆಯಾಗಲಿದೆ. ಅಲ್ಲದೆ, ಈ ಶಾಲೆಗಳ ಮೇಲಿನ ಸರ್ಕಾರದ ನಿಯಂತ್ರಣ ಇನ್ನಷ್ಟು ಕೈತಪ್ಪಲು ದಾರಿಯಾಗಲಿದೆ ಎಂಬುದನ್ನು ತಾವು ಮನಗಾಣಬೇಕು ಎಂದು ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡ ಕಲಿಕೆಗೆ ವಿನಾಯಿತಿ
ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಕನ್ನಡ ಕಲಿಕೆಗೆ ವಿನಾಯಿತಿ ನೀಡುವುದರಿಂದ ಶಿಕ್ಷಣದಲ್ಲಿ ಕನ್ನಡ ಕಲಿಕೆಗೆ ಹಿನ್ನಡೆಯುಂಟಾಗುತ್ತದೆ. ಕರ್ನಾಟಕದಲ್ಲಿ ಕನ್ನಡವನ್ನು ಕಲಿಸಿದಿದ್ದಲ್ಲಿ ಬೇರೆ ರಾಜ್ಯ-ದೇಶಗಳಲ್ಲಿ ಕಲಿಸಲಾದೀತೆ? ಹೀಗಾಗಿ ಪ್ರಾಧಿಕಾರ ಈ ಅಧಿಸೂಚನೆಯ "ನಿಯಮ 6 (2)ಕ್ಕೆ" ಆಕ್ಷೇಪಣೆ ಸಲ್ಲಿಸುತ್ತಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
ಈ ಅಧಿಸೂಚನೆಯಲ್ಲಿರುವ ನಿಯಮ 6 (2)ರ ಅಡಿಯಲ್ಲಿ ಕನ್ನಡ ಭಾಷಾ ಕಲಿಕಾ ಅಧಿನಿಯಮ, 2015(ಕರ್ನಾಟಕ ಅಧಿನಿಯಮ 22, 2015)ರ ನಿಬಂಧನೆಗಳ ಪ್ರಕಾರ ಕನ್ನಡ ಭಾಷೆಯನ್ನು 2ನೇ ಅಥವಾ 3ನೇ ಭಾಷೆಯಾಗಿ ಕಲಿಸಲಾಗುತ್ತದೆ ಎಂದಿದೆ. ಇದಕ್ಕೆ ಪರ್ಯಾಯವಾಗಿ ಕನ್ನಡ ಭಾಷಾ ಕಲಿಕೆಯ ಅಧಿನಿಯಮ, 2015 (ಕರ್ನಾಟಕ ಅಧಿನಿಯಮ 22, 2015)ರ ನಿಬಂಧನೆಗಳ ಪ್ರಕಾರ ರಾಜ್ಯದ ಎಲ್ಲ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ಎಲ್ಲ ತರಗತಿಗಳಲ್ಲಿ ಕಡ್ಡಾಯ ಭಾಷೆಯಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸತಕ್ಕದು ಎಂದು ಬದಲಾವಣೆ ಮಾಡುವಂತೆ ಪ್ರಾಧಿಕಾರ ತಿಳಿಸಿದೆ.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆಕ್ಷೇಪಣೆಯನ್ನು ಪರಿಗಣಿಸಿ ಇಲಾಖೆ ನಿಯಮಾವಳಿಯನ್ನು ಬದಲಾವಣೆ ಮಾಡದಿದ್ದಲ್ಲಿ ಪ್ರಾಧಿಕಾರ ಕನ್ನಡ-ಕನ್ನಡಿಗರ ಹಿತರಕ್ಷಣೆಯ ಸಲುವಾಗಿ ಹೋರಾಟದ ದಾರಿ ತುಳಿಯುವುದು ಅನಿವಾರ್ಯವಾಗುತ್ತದೆ. ರಾಜ್ಯದ ಅಧಿಕೃತ ಭಾಷೆಯ ಸಾರ್ವಭೌಮತೆಯನ್ನು ಎತ್ತಿಹಿಡಿಯುವ ಸಲುವಾಗಿ ಸಿಬಿಎಸ್‌ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ಕನ್ನಡ ಭಾಷೆಯನ್ನು ದ್ವಿತೀಯ ಅಥವಾ ತೃತೀಯ ಭಾಷೆಯಾಗಿ ಕಲಿಯಬೇಕೆಂಬ ಹೊಸ ಕರಡು ನಿಯಮಾವಳಿಯನ್ನು ಹಿಂಪಡೆದು, ಮೊದಲಿನ ಕನ್ನಡ ಕಲಿಕಾ ಅಧಿನಿಯಮ-2015 (ಸರ್ಕಾರ ಅಧಿಸೂಚನೆ ಸಂಖ್ಯೆ: ಇಡಿ 274 ಪಿಜಿಸಿ 2017, ದಿನಾಂಕ:21-10-2017)ರಂತೆ, 1 ರಿಂದ 10ನೇ ತರಗತಿಯವರೆಗೆ ಹಂತ ಹಂತವಾಗಿ ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯನ್ನಾಗಿ ಮಾತ್ರ ಕಡ್ಡಾಯವಾಗಿ ಕಲಿಯುವ ಬಗ್ಗೆ ಸೂಕ್ತ ಕ್ರಮಕೈಗೊಳ್ಳಲು ಪ್ರಾಧಿಕಾರದಿಂದ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ.
ಅಲ್ಲದೇ ಸಿಬಿಎಸ್ಇ, ಐಸಿಎಸ್ಇ ಮತ್ತು ಐಬಿ ಶಾಲೆಗಳಲ್ಲಿ ಕನ್ನಡವನ್ನು ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಯುತ್ತಿರುವ ಮಕ್ಕಳ ಶೈಕ್ಷಣಿಕ ಭವಿಷ್ಯಕ್ಕೂ ಸಮಸ್ಯೆಯಾಗಲಿದೆ. ಮುಖ್ಯವಾಗಿ ಶಾಲೆಗಳ ಮೇಲಿನ ಸರ್ಕಾರದ ನಿಯಂತ್ರಣ ಇನ್ನಷ್ಟು ಕೈತಪ್ಪಲು ದಾರಿಯಾಗಲಿದೆ. ಇವೆಲ್ಲ ಅಂಶಗಳನ್ನು ಸರ್ಕಾರ ಮನಗಾಣಬೇಕು ಎಂದು ಹೇಳಿದ್ದಾರೆ.
ಹೊರ ರಾಜ್ಯ, ವಿದೇಶಗಳಲ್ಲಿ ಕನ್ನಡ ಕಲಿಸಲಾದೀತೆ?
ಆಡಳಿತದಲ್ಲಿರುವ ಸರ್ಕಾರ ಈ ರೀತಿ ತಿದ್ದುಪಡಿ ತಂದು ಕನ್ನಡ ಭಾಷೆಗೆ ತೊಂದರೆ ಉಂಟು ಮಾಡಿದರೆ ಕನ್ನಡ ನೆಲದಲ್ಲಿ ಕನ್ನಡಕ್ಕೆ ಅಗೌರವ ತೋರಿದಂತಾಗುತ್ತದೆ. ಈ ನೆಲ್ಲದಲ್ಲೇ ಕನ್ನಡ ಭಾಷೆಗೆ ಅಗತ್ಯ ಸ್ಥಾನ ಸಿಗದಿದ್ದರೆ ಹೇಗೆ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಾದೇಶಿಕ ಭಾಷೆಯನ್ನು ಆಯಾ ನೆಲದಲ್ಲಿ ಕಲಿಸಲು ಆಗದಿದ್ದರೆ, ನೆರೆ ರಾಜ್ಯ ಇಲ್ಲವೇ ವಿದೇಶಗಳಲ್ಲಿ ಕನ್ನಡ ಕಲಿಸಲು ಸಾಧ್ಯವಾಗುತ್ತದೆಯೇ? ಎಂದು ಅವರು ಪತ್ರದಲ್ಲಿ ಖಾರವಾಗಿ ಪ್ರಶ್ನಿಸಿದ್ದಾರೆ.
ಹೋರಾಟದ ಎಚ್ಚರಿಕೆ:
ರಾಜ್ಯ ಸರ್ಕಾರ ಕೂಡಲೇ ಕರಡು ಅಧಿಸೂಚನೆಗೆ ತಂದ ತಿದ್ದುಪಡಿ ಹಿಂದಪಡೆಯಬೇಕು. ಈ ನೆಲದ ಎಲ್ಲ ಶಾಲೆಗಳಲ್ಲಿ ಕನ್ನಡವನ್ನು ಎಲ್ಲ ತರಗತಿಗಳಲ್ಲಿ ಕಡ್ಡಾಯವಾಗಿ ಪ್ರಥಮ ಅಥವಾ ದ್ವಿತೀಯ ಭಾಷೆಯಾಗಿ ಕಲಿಸುವಂತೆ ಬದಲಾವಣೆ ಮಾಡಬೇಕು. ಆ ಮೂಲಕ ಕನ್ನಡ ಅಸ್ಮಿತೆ ಕಾಪಾಡಬೇಕು. ಈ ಸಂಬಂಧ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಕನ್ನಡಿಗರ ಪರ ಮತ್ತು ನಾಡು -ನುಡಿ ಹಿತರಕ್ಷಣೆಗಾಗಿ ಹೋರಾಟ ಹಾದಿ ತುಳಿಯುವುದು ಅನಿವಾರ್ಯವಾಗಲಿದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.
Recommended Video
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications