ಟೀಯೆಸ್ಸಾರ್ ಸ್ಮಾರಕ ಪ್ರಶಸ್ತಿ ಪ್ರಕಟ

ಬೆಂಗಳೂರು, ಆ.8 : ಕರ್ನಾಟಕ ಸರ್ಕಾರ 2012 ಮತ್ತು 2013 ನೇ ಸಾಲಿನ ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿ ಹಾಗೂ ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಅಕ್ಟೋಬರ್ ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

2012 ನೇ ಸಾಲಿನ ಟೀಯೆಸ್ಸಾರ್ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಎನ್. ಅರ್ಜುನ ದೇವ ಹಾಗೂ 2013 ನೇ ಸಾಲಿನ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಈಶ್ವರ ದೈತೋಟ ಅವರನ್ನು ಆಯ್ಕೆಮಾಡಲಾಗಿದೆ.

TSR

2012ನೇ ಸಾಲಿನ ಮೊಹರೆ ಹನುಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗಾಗಿ ಬೆಳಗಾವಿಯ ನಾಡೋಜ ಪತ್ರಿಕೆಯ ಸಂಪಾದಕರಾದ ರಾಘವೇಂದ್ರ ಜೋಶಿ ಹಾಗೂ 2013 ನೇ ಸಾಲಿಗಾಗಿ ಮೈಸೂರಿನ ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಕೆ.ಬಿ. ಗಣಪತಿ ಅವರನ್ನು ಆಯ್ಕೆ ಮಾಡಲಾಗಿದೆ.

ಕರ್ನಾಟಕ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಅರಳಿ ನಾಗರಾಜ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ವಿಜೇತರನ್ನು ಆಯ್ಕೆಮಾಡಿದೆ. ಎಲ್ಲಾ ಪ್ರಶಸ್ತಿ ವಿಜೇತರಿಗೆ ಒಂದು ಲಕ್ಷ ರೂ. ನಗದು ಹಾಗೂ ಸ್ಮರಣಿಕೆಯನ್ನು ನೀಡಲಾಗುತ್ತದೆ. ಅಕ್ಟೋಬರ್ ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+