Tulu: ತುಳುವಿಗೆ ಐತಿಹಾಸಿಕ ಮಾನ್ಯತೆ; ಸಿದ್ದರಾಮಯ್ಯ ಪೋಸ್ಟ್ ಬೆನ್ನಲ್ಲೇ ಜೋರಾದ ‘ಕ್ರೆಡಿಟ್’ ಚರ್ಚೆ

ಕರ್ನಾಟಕ ಕಾಂಗ್ರೆಸ್ ಸರ್ಕಾರವು ತುಳು ಭಾಷೆಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಘೋಷಿಸಿದೆ. ಆದರೆ, ತುಳು ವಿಷಯದಲ್ಲಿ ಇದೀಗ ಕ್ರೆಡಿಟ್ ಚರ್ಚೆ ಜೋರಾಗಿದೆ. ಬಿಜೆಪಿಯ ಹಲವು ನಾಯಕರು ನಾವೂ ಸಹ ನಮ್ಮ ಅಧಿಕಾರದ ಅವಧಿಯಲ್ಲಿ ತುಳು ಭಾಷೆಯನ್ನು ಕರ್ನಾಟಕದ ಎರಡನೇ ಹೆಚ್ಚುವರಿ ಅಧಿಕೃತ ಆಡಳಿತ ಭಾಷೆಯಾಗಿ ಮಾಡುವ ನಿಟ್ಟಿನಲ್ಲಿ ಪ್ರಯತ್ನ ಮಾಡಿರುವುದಾಗಿ ಹೇಳಿದ್ದಾರೆ. ಇದೀಗ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋಶಿಯಲ್ ಮೀಡಿಯಾ ಪೋಸ್ಟ್‌ ವೈರಲ್ ಆಗಿದೆ.

ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, "ಮಾತ ತುಳುವೆರೆಗ್‌ ಎನ್ನ ಮೋಕೆದ ಸೊಲ್ಮೆಲು ❤" (ಎಲ್ಲ ತುಳುವರಿಗೂ ನನ್ನ ಪ್ರೀತಿಯ ವಂದನೆಗಳು) ತುಳುವಿನ ಗೌರವದ ಹೆಜ್ಜೆಗೆ ಅಂದು ನಾನು ಮುಖ್ಯಮಂತ್ರಿಯಾಗಿ ಹಾಕಿದ ಅಡಿಪಾಯ, ಇಂದು ಸಾಕಾರಗೊಂಡಿದ್ದನ್ನು ನೋಡಿ ಖುಷಿಯಾಗುತ್ತಿದೆ. ನಿನ್ನೆಯಿಂದ ತುಳು ಭಾಷಿಗರು ವ್ಯಕ್ತಪಡಿಸುತ್ತಿರುವ ಸಂತಸಕ್ಕೆ ರಾಜ್ಯದ ಕಾಂಗ್ರೆಸ್ ಸರ್ಕಾರ ಕಾರಣವಾಗಿರುವ ಬಗ್ಗೆ ನನಗೆ ಹೆಮ್ಮೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Tulu Gets Historic Recognition in Karnataka Credit Debate Intensifies After Siddaramaiah s Post

ತುಳು ಭಾಷೆಗೆ ಅಧಿಕೃತ ಭಾಷೆಯ ಸ್ಥಾನಮಾನ ನೀಡುವ ನಿಟ್ಟಿನಲ್ಲಿ ನಮ್ಮ ಸರ್ಕಾರದ ಅವಧಿಯಲ್ಲಿ ಮಹತ್ವದ ಹೆಜ್ಜೆಯಿರಿಸಲಾಗಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾಗಿದ್ದ ಕೆ.ಎಂ. ಗಾಯತ್ರಿ ಅವರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಿ, ಆಂಧ್ರಪ್ರದೇಶದಲ್ಲಿ ಪ್ರಾದೇಶಿಕ ಭಾಷೆಗೆ ನೀಡಿರುವ ಅಧಿಕೃತ ಭಾಷಾ ಸ್ಥಾನಮಾನದ ಮಾದರಿಯನ್ನು ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದ್ದೆ.

ಆ ಅಧ್ಯಯನ ಮತ್ತು ವರದಿಯ ಮೂಲಕ ರೂಪುಗೊಂಡ ಪ್ರಕ್ರಿಯೆ ಮುಂದುವರಿದು, ಇದೀಗ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿ ತುಳುವನ್ನು ರಾಜ್ಯದ ಎರಡನೇ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡಲು ಸಚಿವ ಸಂಪುಟ ನಿರ್ಣಯ ಕೈಗೊಂಡಿರುವುದು ಸಂತಸದ ಸಂಗತಿ.

ಭಾಷೆ ಎಂದರೆ ಕೇವಲ ಸಂವಹನದ ಮಾಧ್ಯಮವಲ್ಲ. ಅದು ಜನರ ಇತಿಹಾಸ, ಸಂಸ್ಕೃತಿ, ಪರಂಪರೆ ಮತ್ತು ಅಸ್ಮಿತೆಯ ಪ್ರತೀಕ. ತುಳು ಭಾಷಿಗರ ಬಹುದಿನಗಳ ಬೇಡಿಕೆಗೆ ಸ್ಪಂದಿಸಿ, ಅದಕ್ಕೆ ಸಾಂಸ್ಥಿಕ ಗೌರವ ದೊರಕುವ ನಿಟ್ಟಿನಲ್ಲಿ ಅಂದು ಆರಂಭಿಸಿದ ಪ್ರಯತ್ನ ಇಂದು ಐತಿಹಾಸಿಕ ನಿರ್ಣಯವಾಗಿ ರೂಪುಗೊಂಡಿದೆ. ತುಳುವಿನ ಶ್ರೀಮಂತ ಪರಂಪರೆಗೆ ಗೌರವ ಸಲ್ಲಿಸುವ ರಾಜ್ಯ ಸಚಿವ ಸಂಪುಟದ ನಿರ್ಧಾರವನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Tulu Gets Historic: ತುಳು ಭಾಷೆಗೆ ಐತಿಹಾಸಿಕ ಗೌರವ - ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ

ತುಳು ಕೇವಲ ಒಂದು ಭಾಷೆಯಲ್ಲ, ಕರಾವಳಿಯ ಶ್ರೀಮಂತ ಸಂಸ್ಕೃತಿ, ಪರಂಪರೆ ಹಾಗೂ ಅಸ್ಮಿತೆಯ ಜೀವನಾಡಿ. ತುಳು ಭಾಷೆಯ ಐತಿಹಾಸಿಕ ಮಹತ್ವವನ್ನು ಗೌರವಿಸಿ, ಕರ್ನಾಟಕ ಸರ್ಕಾರ ರಾಜ್ಯದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ತುಳುವನ್ನು ಘೋಷಿಸಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ಅನ್ವಯವಾಗುವಂತೆ ತೀರ್ಮಾನಿಸಲಾಗಿದೆ. ಈ ಮೂಲಕ ಕರಾವಳಿ ಜನರ ಬಹುದಿನಗಳ ಕನಸು ನನಸಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಒಟ್ಟಾರೆ ತುಳು ಭಾಷೆಗೆ ಕರ್ನಾಟಕದ 2ನೇ ಹೆಚ್ಚುವರಿ ಆಡಳಿತ ಭಾಷೆಯಾಗಿ ಘೋಷಣೆ ಮಾಡಿದ ಬೆನ್ನಲ್ಲೇ ಕ್ರೆಡಿಟ್ ವಾರ್ ಸಹ ಜೋರಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+