ತುಮಕೂರಲ್ಲಿ 'ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ': 40 ಸ್ಪರ್ಧೆ, 28 ರಾಜ್ಯಗಳ ಕ್ರೀಡಾಪಟುಗಳು ಭಾಗಿ

ತುಮಕೂರು: ರಾಜ್ಯದ ಕಲ್ಪತರು ನಾಡು ತುಮಕೂರು ಇದೇ ಮೊದಲ ಭಾರಿಗೆ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಸಾಕ್ಷಿಯಾಗಲಿದೆ. ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ "24ನೇ ರಾಷ್ಟ್ರೀಯ ಕಿರಿಯರ 20 ವರ್ಷದೊಳಗಿನವರ ಅಥ್ಲೆಟಿಕ್ಸ್ ಫೆಡರೇಷನ್ ಕ್ರೀಡಾಕೂಟ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಆಗಿರುವ ಗೃಹ ಸಚಿವರಾದ ಜಿ.ಪರಮೇಶ್ವರ್ ಮಾಹಿತಿ ನೀಡಿದರು.

ತುಮಕೂರಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಏಪ್ರಿಲ್ 24ರಿಂದ ಮೂರು ದಿನಗಳವರೆಗೆ ತುಮಕೂರು ನಗರದಲ್ಲಿ "24ನೇ ರಾಷ್ಟ್ರೀಯ ಕಿರಿಯರ 20 ವರ್ಷದೊಳಗಿನವರ ಅಥ್ಲೆಟಿಕ್ಸ್ ಫೆಡರೇಷನ್ ಕ್ರೀಡಾಕೂಟ" ನಡೆಯಲಿದೆ. ಮೊದಲ ಬಾರಿಗೆ ನಡೆಯುತ್ತಿರುವುದು ಹೆಮ್ಮೆಯ ವಿಷಯ ಎಂದರು.

Tumakur

ಹೊಸದಾಗಿ ಅಭಿವೃದ್ಧಿಪಡಿಸಿರುವ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ವಿಶ್ವದರ್ಜೆಯ ಸಿಂಥೆಟಿಕ್ ಟ್ರ್ಯಾಕ್ ಮತ್ತು ಅಂತಾರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ರಾಷ್ಟ್ರೀಯ ಮಟ್ಟದ ಇಂತಹ ಚಾಂಪಿಯನ್ ಶಿಪ್ ಕ್ರೀಡಾಕೂಟ ನಡೆಯುತ್ತಿದ್ದು, ತುಮಕೂರು ಈಗ ವಿಶ್ವದ ಗಮನ ಸೆಳೆಯುತ್ತಿದೆ ಎಂದು ಸಚಿವರು ಹರ್ಷ ವ್ಯಕ್ತಪಡಿಸಿದರು.

40 ಸ್ಪರ್ಧೆ, 1500 ಕ್ರೀಡಾಪಟುಗಳು ಭಾಗಿ

ತುಮಕೂರಿಗೆ ಈ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು 28 ರಾಜ್ಯಗಳಿಂದಲೂ ಬಾಲಕ/ಬಾಲಕಿಯರು ಸೇರಿ ಸುಮಾರು 1500 ಕ್ರೀಡಾಪಟುಗಳು ಆಗಮಿಸಲಿದ್ದಾರೆ. ತಮ್ಮ ರಾಜ್ಯವನ್ನು ಪ್ರತಿನಿಧಿಸಿ 40 ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಲಿದ್ದಾರೆ.

ಇಲ್ಲಿಂದ ವಿಶ್ವ ಚಾಂಪಿಯನ್‌ಶಿಪ್ ಅಥ್ಲೆಟಿಕ್ ಆಯ್ಕೆ

ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಮತ್ತು ರಿಲಾಯನ್ಸ್ ಫೌಂಡೇಶನ್ ತಂಡಗಳು ಕರ್ನಾಟಕದ ಬಲಿಷ್ಠ ತಂಡಗಳಾಗಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪ್ರತಿನಿಧಿಸುತ್ತಿವೆ. ಆಗಸ್ಟ್ 5 ರಿಂದ 9ರವರೆಗೆ ಅಮೆರಿಕಾದ ಒರೆಗಾನ್ ಸ್ಟೇಟ್‌ನಲ್ಲಿ ನಡೆಯುವ ವಿಶ್ವ ಚಾಂಪಿಯನ್‌ಶಿಪ್ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಭಾರತದಿಂದ ಪ್ರತಿನಿಧಿಸುವ ಕ್ರೀಡಾಪಟುಗಳನ್ನು ಇಲ್ಲಿ ಆಯ್ಕೆ ಮಾಡುವ ಅತ್ಯಂತ ಪ್ರಮುಖ ಕ್ರೀಡಾಕೂಟ ಇದಾಗಿದೆ ಎಂದು ತಿಳಿಸಿದರು.

24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಪ್ರತಿಷ್ಠಿತ ಕ್ರೀಡಾಕೂಟವನ್ನು ತುಮಕೂರಿನಲ್ಲಿ ನಡೆಸಲು ಅವಕಾಶ ಕಲ್ಪಿಸಿದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾದ ಮುಖ್ಯಸ್ಥರಿಗೆ ಧನ್ಯವಾದ. ತುಮಕೂರಿನಲ್ಲಿ ಇಂತಹ ಪ್ರತಿಷ್ಠಿತ ಕ್ರೀಡಾಕೂಟ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಜಿಲ್ಲೆಯ ಯುವ ಪ್ರತಿಭೆಗಳಿಗೆ ಇದೊಂದು ಸುವರ್ಣಾವಕಾಶವಾಗಿದೆ ಎಂದು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+