ತುಮಕೂರು ಲೋಕಸಭಾ ಟಿಕೆಟ್ ಗಾಗಿ ಮಾಧುಸ್ವಾಮಿ, ವಿ ಸೋಮಣ್ಣ ಪೈಪೋಟಿ- ಯಾರಿಗೆ ಸಿಗಲಿದೆ ಚಾನ್ಸ್?
ಬೆಂಗಳೂರು, ಫೆಬ್ರವರಿ 06: ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಅನುಭವಿಸಿದ ಕಮಲ ಕಲಿಗಳು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ತಯಾರಿ ನಡೆಸಿದ್ದಾರೆ. ಬಿಜೆಪಿ ಯ 13 ಮಾಜಿ ಸಚಿವರು ಸೋಲು ಕಂಡಿರುವ ನಾಯಕರು, ಇದೀಗ ಹಲವು ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲು ತಯಾರಿ ನಡೆಸಿದ್ದಾರೆ.
ಹೌದು, ತುಮಕೂರು ಲೋಕಸಭಾ ಕ್ಷೇತ್ರಕ್ಕಾಗಿ ಮಾಜಿ ಸಚಿವ ವಿ ಸೋಮಣ್ಣ ಸೋಮವಾರ ಹೊಸದಿಲ್ಲಿಯಲ್ಲಿ ಲಾಬಿ ನಡೆಸುತ್ತಿರುವಾಗಲೇ ಮತ್ತೊಬ್ಬ ಮಾಜಿ ಸಚಿವ ಜೆ.ಸಿ.ಮಾಧು ಸ್ವಾಮಿ ನಾನೂ ಕೂಡ ಟಿಕೆಟ್‌ಗೆ ಪ್ರಬಲ ಆಕಾಂಕ್ಷಿ ಎಂದು ಹೇಳಿದ್ದಾರೆ.

ಹಾಲಿ ಸಂಸದರಾದ ಜಿ.ಎಸ್.ಬಸವರಾಜು ಬೆಂಬಲಕ್ಕಿದ್ದು, ಪಕ್ಷದ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಒಪ್ಪಿಗೆ ಪಡೆಯುತ್ತಿದ್ದೇನೆ ಎಂದು ಸೋಮಣ್ಣ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು. ಸಂಸದರು ಮತ್ತು ಸ್ಥಳೀಯ ಮುಖಂಡರು ನನ್ನನ್ನು ಒಪ್ಪಿಕೊಂಡಿದ್ದಾರೆ ಮತ್ತು ಅದನ್ನು ಹೈಕಮಾಂಡ್ ನಿರ್ಧರಿಸುತ್ತದೆ ಮತ್ತು ಅದರ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ ಎಂದು ಮಾಜಿ ಸಚಿವ ವಿ ಸೋಮಣ್ಣ ಹೇಳಿದ್ದಾರೆ.
ಇನ್ನೂ ಲೋಕಸಭೆ ಚುನಾವಣೆಗೆ ಬಿಜೆಪಿಯ ಮೈತ್ರಿಕೂಟದ ಜೆಡಿಎಸ್‌ನ ಪ್ರಮುಖ ನಾಯಕರಾದ ಎಚ್‌ಡಿ ದೇವೇಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಅವರನ್ನು ವಿ ಸೋಮಣ್ಣ ಅವರು ವಿಶ್ವಾಸಕ್ಕೆ ತೆಗೆದುಕೊಳ್ಳುವ ನಿಟ್ಟಿನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಕುರಿತು ಮಾತನಾಡಿದ್ದಾರೆ ಎನ್ನಲಾಗಿದೆ.
ಇತ್ತ ಮಾಧು ಸ್ವಾಮಿ ಅವರಿಗೆ ಮಾಜಿ ಸಿಎಂಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬೆಂಬಲ ನೀಡಿದ್ದಾರೆ. ಸೋಮವಾರ ಸೋಮಣ್ಣ ಅವರ ಉಮೇದುವಾರಿಕೆಯನ್ನು ಬೆಂಬಲಿಸುತ್ತೀರಾ ಎಂಬ ಪ್ರಶ್ನೆಗೆ, ಪಕ್ಷದ ಹೈಕಮಾಂಡ್ ಹೆಸರನ್ನು ಅಂತಿಮಗೊಳಿಸುವವರೆಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮಧುಸ್ವಾಮಿ ಹೇಳಿದರು. ಬಿಜೆಪಿಯಲ್ಲಿ ಹಲವು ಮಾನದಂಡಗಳಿದ್ದು, ಅದು ಅಷ್ಟು ಸುಲಭವಲ್ಲ. ನಾನು ಆಕಾಂಕ್ಷಿ ಮತ್ತು ಚುನಾವಣೆಯಲ್ಲಿ ಸ್ಪರ್ಧಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರು ಗೆದ್ದಿಲ್ಲ. 2019ರಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿದ್ದ ದೇವೇಗೌಡರು ಸೋಲನುಭವಿಸಿದರೆ, ನಿವೃತ್ತ ಐಪಿಎಸ್ ಅಧಿಕಾರಿ ಪಿ ಕೋದಂಡರಾಮಯ್ಯ ಕೂಡ ಈ ಹಿಂದೆ ಇದೇ ರೀತಿಯ ಅದೃಷ್ಟವನ್ನು ಎದುರಿಸಿದ್ದರು. ಇದು ಪುನರಾವರ್ತನೆಯಾಗುತ್ತದೆ ಎಂದರ್ಥವಲ್ಲ, ಆದರೆ ತುಮಕೂರಿನ ಜನರು ಹೊರಗಿನವರನ್ನು ಸುಲಭವಾಗಿ ಒಪ್ಪಿಕೊಳ್ಳುವುದಿಲ್ಲ ಎಂಬುದು ನನ್ನ ಅನುಭವವಾಗಿದೆ ಎಂದು ಮಾಧುಸ್ವಾಮಿ ತಿಳಿಸಿದ್ದಾರೆ.
ಬಸವರಾಜು ಅವರ ಉಮೇದುವಾರಿಕೆಯನ್ನು ವಿರೋಧಿಸಿರುವ ಮಧು ಸ್ವಾಮಿ, ಇದು ಹಾಲಿ ಸಂಸದರ ವೈಯಕ್ತಿಕ ಅಭಿಪ್ರಾಯ. ಅಭ್ಯರ್ಥಿಯಾಗುವಂತೆ ಹೈಕಮಾಂಡ್‌ಗೆ ಮನವಿ ಮಾಡಿದ್ದೇನೆ. ನಾನು ಯಾವ ರೀತಿಯಲ್ಲಿ ಅನರ್ಹನಾಗಿದ್ದೇನೆ ಪ್ರಶ್ನಿಸಿದ್ದಾರೆ. ಸೋಮಣ್ಣ ಅವರು ತುಮಕೂರು ಕ್ಷೇತ್ರದಲ್ಲಿ ಅಲ್ಪಸಂಖ್ಯಾತರಾಗಿರುವ ವೀರಶೈವ ಉಪಪಂಗಡದಿಂದ ಬಂದವರಾಗಿದ್ದರೆ, ಮಾಧು ಸ್ವಾಮಿ ಇಲ್ಲಿ ಪ್ರಬಲವಾಗಿರುವ ನೊಳಂಬ ಲಿಂಗಾಯತ ಪಂಗಡಕ್ಕೆ ಸೇರಿದವರು ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಒಟ್ನಲಿ, ಮಾಜಿ ಸಚಿವರಾದ ವಿ ಸೋಮಣ್ಣ ಹಾಗೂ ಜೆ ಸಿ ಮಾಧುಸ್ವಾಮಿ ಅವರು ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ಗಾಗಿ ತೀವ್ರ ಪೈಪೋಟಿ ನಡೆಸಿದ್ದು, ಇತ್ತ ವಿ ಸೋಮಣ್ಣ ಅವರಿಗೆ ಹೈಕಮಾಂಡ್ ನಾಯಕರು ತುಮಕೂರು ಟಿಕೆಟ್ ನೀಡುವ ಭರವಸೆ ನೀಡಿದ್ದಾರೆ, ಇತ್ತ ಯಡಿಯೂರಪ್ಪ ಅವರ ಜೊತೆಗೆ ಉತ್ತಮ ಸಂಬಂಧ ಹೊಂದಿರುವ ಮಾಧುಸ್ವಾಮಿ ಅವರು ಸಹ ಟಿಕೆಟ್ ಸಿಗುವ ನಿರೀಕ್ಷೆಯಲ್ಲಿದ್ದು, ಹೈಕಮಾಂಡ್ ಯಾರಿಗೆ ಮಣೆ ಹಾಕುತ್ತೆ ಎಂಬುದನ್ನ ಕಾದುನೋಡ್ಬೇಕಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ..












Click it and Unblock the Notifications