ತುಮಕೂರು ಬಿಸಿಎಂ ಹಾಸ್ಟೇಲ್​ಗಳಿಗೆ ಸಿದ್ದಗಂಗಾ ಮಠದ ಅಕ್ಕಿ: ಅಧಿಕಾರಿ ಅಮಾನತು

ತುಮಕೂರು, ಫೆಬ್ರವರಿ 21: ತುಮಕೂರು ಜಿಲ್ಲೆಯ ಬಿಸಿಎಂ ಹಾಸ್ಟೆಲ್​ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಜಿಲ್ಲೆಯ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ಸಾಲದ ರೂಪದಲ್ಲಿ ಹಾಸ್ಟೆಲ್​ಗಳು ಪಡೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಹೌದು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಸರಿಯಾದ ಸಮಯಕ್ಕೆ ಅಕ್ಕಿ ವಿತರಣೆ ಆದರೂ, ಕಲ್ಯಾಣಾಧಿಕಾರಿ ಗೀತಮ್ಮ ಹಾಸ್ಟೆಲ್​ಗಳಿಗೆ ಅಕ್ಕಿಯನ್ನು ಎತ್ತುವಳಿ ಮಾಡಲು ಹಿಂದೇಟು ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆಯುಕ್ತ ಕೆ.ಎ ದಯಾನಂದರಿಂದ ಅಮಾನತು ಮಾಡಿ ಆದೇಶ ಹೊಡಿಸಿದ್ದಾರೆ.

Tumkur Bcm Hostel: Backward Classes Welfare Department Officer Suspended

ಬಿಸಿಎಂ ಹಾಸ್ಟೆಲ್​ಗಳಿಗೆ ಕರ್ನಾಟಕ ಸರ್ಕಾರದಿಂದ ಅಕ್ಕಿ ಪೂರೈಕೆಯಾಗಿಲ್ಲ. ಹೀಗಾಗಿ ಸಿದ್ದಗಂಗಾ ಮಠದಿಂದ ಅಕ್ಕಿಯನ್ನು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಾಲವಾಗಿ ಪಡೆದಿದೆ ಎಂದು ವರದಿಯಾಗಿತ್ತು. ಬಗ್ಗೆ ಮಠದ ಆಡಳಿತಾಧಿಕಾರಿ ವಿಶ್ವನಾಥ್ ಸ್ಪಷ್ಟನೆ ನೀಡಿದ್ದು, ಮಠದಿಂದ ಅಕ್ಕಿಯನ್ನು ಸಾಲವಾಗಿ ನೀಡಿದ್ದು ನಿಜ ಎಂದು ಹೇಳಿದ್ದರು. ಇದೀಗ ಕರ್ತವ್ಯ ಲೋಪದ ಹಿನ್ನೆಲೆ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಗೀತಮ್ಮ ಅವರನ್ನು ಅಮಾನತು ಮಾಡಲಾಗಿದೆ.

ಹಾಸ್ಟೆಲ್‌ ಗಳಿಗೆ ಸಮಯಕ್ಕೆ ಸರಿಯಾಗಿ ಅಕ್ಕಿ ಪೂರೈಕೆ ಆಗಿಲ್ಲ. ಹೀಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಕಳೆದ ಎರಡ್ಮೂರು ತಿಂಗಳಿನಿಂದ ಅಕ್ಕಿಯನ್ನು ಸಾಲವಾಗಿ ಪಡೆಯುತ್ತಿತ್ತು. ಸುಮಾರು 80 ಚೀಲ ಅಕ್ಕಿಯನ್ನು ಶ್ರೀಮಠ ಸಾಲವಾಗಿ ನೀಡಿದೆ. ಬಿಸಿಎಂ ಹಾಸ್ಟೆಲ್​ಗಳಿಗೆ ಮಠದಿಂದ ಅಕ್ಕಿ ಸಾಲವಾಗಿ ಕೊಟ್ಟಿರುವುದು ನಿಜ. ಕಳೆದ ಎರಡು ಮೂರು ತಿಂಗಳ ಹಿಂದೆ ಅಕ್ಕಿ ಕೊಟ್ಟಿದ್ದೇವೆ. ಬಿಸಿಎಂ ಹಾಸ್ಟೆಲ್, ಶಾಲೆಗಳಿಗೆ ಅಕ್ಕಿ ಪೂರೈಕೆ ವಿಳಂಬವಾಗಿ ಮಠದಿಂದ ಪಡೆದುಕೊಂಡಿದ್ದಾರೆ. ಹಲವು ಬಾರಿ ಸಾಲ ತೆಗೆದುಕೊಂಡು ಹೋಗಿದ್ದಾರೆ. ನಮಗೆ ಅದರ ಲೆಕ್ಕ ಇಲ್ಲ ಎಂದು ಮಠದ ಆಡಳಿತಾಧಿಕಾರಿ ವಿಶ್ವನಾಥ್ ಅವರು ಹೇಳಿದರು.

ಆದೇಶದಲ್ಲಿ ಏನಿದೆ?

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಶ್ರೀಮತಿ ಗೀತಮ್ಮ, ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು, ತುಮಕೂರು ತಾಲ್ಲೂಕು, ತುಮಕೂರು ಜಿಲ್ಲೆ ಇವರನ್ನು ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳು 1957 ರ ನಿಯಮ 10 (1) (ಡಿ)ರನ್ವಯ ತಕ್ಷಣದಿಂದ ಅನ್ವಯಿಸುವಂತೆ ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿ ಆದೇಶಿಸಿದೆ.

ಸದರಿ ಅಧಿಕಾರಿಗಳು ಅಮಾನತ್ತಿನ ಅವಧಿಯಲ್ಲಿ ಸಕ್ಷಮ ಪ್ರಾಧಿಕಾರದ ಅನುಮತಿಯನ್ನು ಪಡೆಯದೆ ಕೇಂದ್ರ ಸ್ಥಾನವನ್ನು ಬಿಡತಕ್ಕದ್ದಲ್ಲ ಅಧಿಕಾರಿಗಳು ಅಮಾನತ್ತಿನ ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ನಿಯಮಗಳು 1957 ರ ನಿಯಮ 98 ರನ್ವಯ ಜೀವನಾಂಶ ಭತ್ಯೆ ಪಡೆಯಲು ಅರ್ಹರಿರುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+