ಸಿದ್ಧಗಂಗಾ ಸ್ವಾಮೀಜಿ ಆರೋಗ್ಯ ಸ್ಥಿರ, ಚಿಂತೆ ಬೇಡ

Written By:
Subscribe to Oneindia Kannada

ತುಮಕೂರು, ಜೂನ್, 24: ನಡೆದಾಡುವ ದೇವರು ಡಾ. ಶ್ರೀ ಶಿವಕುಮಾರಸ್ವಾಮೀಜಿ ಆರೋಗ್ಯ ಸ್ಥಿರವಾಗಿದೆ. ಎರಡು ದಿನಗಳಿಂದ ಕೊಂಚ ಏರು ಪೇರು ಕಂಡುಬಂದಿದ್ದು ಇದೀಗ ಶ್ರೀಗಳು ಸಂಪೂರ್ಣ ಸುಧಾರಿಸಿಕೊಂಡಿದ್ದಾರೆ. 109ನೇ ವಸಂತದಲ್ಲಿರುವ ಸ್ವಾಮೀಜಿ ವಯೋಸಹಜ ಬಳಲಿಕೆಯನ್ನು ಎದುರಿಸುತ್ತಿದ್ದಾರೆ.

ಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಯಾವುದೆ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿಗೆ ಚಿಕಿತ್ಸೆ ನೀಡಲಾಗುತ್ತಿದೆ.[ಶಿವಕುಮಾರ ಶ್ರೀಗಳಿಗೆ ಪದ್ಮಭೂಷಣ ಪ್ರದಾನ]

tumkur

ಶ್ರೀಗಳನ್ನು ಪರೀಕ್ಷಿಸಿದ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎಸ್.ಕೆ ವೆಂಕಟರಮಣ ಅವರು ಶ್ರೀಗಳು ಜ್ವರದಿಂದ ಬಳಲುತ್ತಿದ್ದು ಅವರಿಗೆ ಯಾವುದೇ ಗಂಭೀರ ಸಮಸ್ಯೆ ಇಲ್ಲ ಎಂದು ಹೇಳಿದ್ದಾರೆ.[ತ್ರಿವಿಧ ದಾಸೋಹಿಗೆ ಕೋಟಿ ವಂದನೆ]

ಸ್ವಾಮೀಜಿ ಎರಡು ದಿನಗಳಿಂದ ತುಮಕೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಶುಕ್ರವಾರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದ್ದು ಜನರಲ್ ಚೆಕ್ ಅಪ್ ಮಾಡಲಾಗಿದೆ. ಭಕ್ತರು ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಮಠದ ಅಧಿಕಾರಿಗಳು ತಿಳಿಸಿದ್ದಾರೆ.

ಬಿಜಿಎಸ್ ಆಸ್ಪತ್ರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡಿಯೂರಪ್ಪ ಭೇಟಿ ನೀಡಿ ಶ್ರೀಗಳ ಆರೋಗ್ಯ ವಿಚಾರಿಸಿದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Tumkur: Now, Tumkur Siddaganga seer shivakumara swamiji Health in stable condition. Founder of the Sri Siddaganga Education Society Dr. Sri Sri Sri Shivakumara Swamiji(109) suffering from fever. Swamiji admitted to Bengaluru BGS hospital.
Please Wait while comments are loading...