ದೂರು ಕೊಡಲು ಬಂದ ಮಹಿಳೆ ಜೊತೆ ಮಧುಗಿರಿ Dysp ರಾಸಲೀಲೆ ಆರೋಪ: ವಿಡಿಯೋ ವೈರಲ್
ತುಮಕೂರು, ಜನವರಿ 03: ರಾಜ್ಯದ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿಯೇ ತಲೆ ತಗ್ಗಿಸುವಂತ ಅನ್ಯಾಯ ನಡೆದಿದೆ. ನ್ಯಾಯಕ್ಕಾಗಿ ಪೊಲೀಸ್ ಠಾಣೆಗೆ ಬರುವವರಿಗೆ ಪೊಲೀಸರಿಂದಲೇ ಅನ್ಯಾಯವಾಗುತ್ತಿದೆ.
ಹೌದು, ನ್ಯಾಯ ಕೊಡಿಸಬೇಕಾದ ಪೊಲೀಸರೇ ಸ್ತ್ರೀ ಭಕ್ಷಕರಾಗಿದ್ದಾರೆ. ಜಮೀನು ವಿಚಾರಕ್ಕೆ ದೂರು ಕೊಡಲು ಬಂದ ಮಹಿಳೆಯೊಂದಿದೆ ಪೊಲೀಸ್ ಠಾಣೆಯಲ್ಲಿಯೇ ರಾಸಲೀಲೆ ನಡೆಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದಾಗಿ ಇಡೀ ಪೊಲೀಸ್ ಇಲಾಖೆಯೇ ತಲೆ ತಗ್ಗಿಸಿ ನಿಲ್ಲುವಂತಾಗಿದೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ದೂರು ನೀಡಲು ಬಂದ ಮಹಿಳೆಯೊಂದಿಗೆ ಮಧುಗಿರಿ ಉಪವಿಭಾಗದ ಡಿವೈಎಸ್‌ಪಿ ರಾಮಚಂದ್ರಪ್ಪ ರಾಸಲೀಲೆ ನಡೆಸಿರುವ ವಿಡಿಯೋ ವೈರಲ್ ಆಗಿದ್ದು ಇದರ ಬೆನ್ನಲ್ಲೇ ಡಿವೈಎಸ್‌ಪಿ ತಲೆಮರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಜಮೀನು ವ್ಯಾಜ್ಯದ ಬಗ್ಗೆ ಪಾವಗಡ ಮೂಲದ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ಸಂಬಂಧ ವಿಚಾರಿಸುವ ಸಲುವಾಗಿ ಮಹಿಳೆಯನ್ನು ಡಿವೈಎಸ್‌ಪಿ ಕಚೇರಿಗೆ ಕರೆಸಲಾಗಿತ್ತು. ಈ ವೇಳೆ ಮಹಿಳೆಯನ್ನು ಪುಸಲಾಯಿಸಿದ ರಾಮಚಂದ್ರಪ್ಪ ಆಕೆಯನ್ನು ಕಚೇರಿಯ ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕ್ರಿಯೆ ಶುರುಮಾಡಿದ್ದಾರೆ. ಇನ್ನು ಮಹಿಳೆ ಜೊತೆ ಡಿವೈಎಸ್‌ಪಿ ರಾಮಚಂದ್ರಪ್ಪ ಬಲವಂತವಾಗಿ ನಡೆದುಕೊಳ್ಳುತ್ತಿದ್ದುದ್ದನ್ನು ಸೆರೆ ಹಿಡಿದ ವ್ಯಕ್ತಿಯೊಬ್ಬರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾರೆ. ವಿಡಿಯೋ ವೈರಲ್ ಆದ ಬೆನ್ನಲ್ಲೆ ತಲೆಮರೆಸಿಕೊಂಡ ಡಿವೈಎಸ್ ಪಿ ರಾಮಚಂದ್ರಪ್ಪ.ಮೊಬೈಲ್ ಸ್ವೀಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ಧಾರೆ.
ಡಿವೈಎಸ್‌ಪಿ ರಾಮಚಂದ್ರಪ್ಪನ ರಾಸಲೀಲೆಯ ದೃಶ್ಯ ಯಾರೋ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಅಲ್ಲಿ ಮಹಿಳೆಯೊಂದಿಗೆ ಬಲವಂತವಾಗಿ ನಡೆದುಕೊಳ್ಳುತ್ತಿದ್ದ ದೃಶ್ಯಗಳು ಸೆರೆ ಸಿಕ್ಕಿವೆ. ಇದೀಗ ರಾಸಲೀಲೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಮಹಿಳೆ, ಮಕ್ಕಳು ಸೇರಿದಂತೆ ರಾಜ್ಯದ ಜನತೆಯನ್ನು ಸುರಕ್ಷಿತವಾಗಿ ನೋಡಿಕೊಳ್ಳುವುದಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ತವರು ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ ಎಂಬುದು ಇನ್ನೂ ಅಸಹ್ಯಕರವಾಗಿದೆ. ಇಂತಹ ಅಧಿಕಾರಿಗಳು ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ತರುವವರಾಗಿದ್ದಾರೆ. ಈ ಘಟನೆಯಿಂದ ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವಂತಾಗಿದೆ.












Click it and Unblock the Notifications