Tungabhadra Reservoir: ತುಂಗಭದ್ರಾ ಜಲಾಶಯದಿಂದ ಕಾಲುವೆಗೆ ನೀರು ಬಿಡುವ ದಿನಾಂಕ ಪ್ರಕಟ: ಡ್ಯಾಂನಲ್ಲಿ ನೀರು ಎಷ್ಟಿದೆ?
ಬೆಂಗಳೂರು, ಮಾರ್ಚ್22: ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ನಿಂತ ಬೆಳೆಗಳಿಗೆ ಯಾವುದೇ ಸಮಸ್ಯೆಯಾಗದಂತೆ ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಿಗೆ ನೀರು ಹರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರೂ ಅದ ನೀರಾವರಿ ಸಲಹಾ ಸಮಿತಿ ಅಧ್ಯಕ್ಷರು ಶಿವರಾಜ್. ಎಸ್. ತಂಗಡಗಿ ಅವರು ಹೇಳಿದ್ದಾರೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ತುಂಗಭದ್ರಾ ನೀರಾವರಿ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಸಚಿವರು, ಪ್ರಸ್ತುತ ಜಲಾಶಯದಲ್ಲಿ ನೀರಿನ ಸಾಮರ್ಥ್ಯ 18 ಟಿಎಂಸಿ, ಇದರಲ್ಲಿ ಡೆಟ್ ಸ್ಟೋರೆಜ್ 2 ಟಿಎಂಸಿ, ಅವಿಯಾಗುವಿಕೆ 1.2 ಟಿಎಂಸಿ, ಈ ಪೈಕಿ ರಾಜ್ಯದ ಪಾಲು 11 ಟಿಎಂಸಿ, ಆಂಧ್ರಪ್ರದೇಶದ ಪಾಲು 4 ಟಿಎಂಸಿ ಇದೆ. ಈ ಹಿನ್ನೆಲೆಯಲ್ಲಿ ಜಲಾಶಯದಲ್ಲಿನ ನೀರಿನ ಲಭ್ಯತೆ ಆಧಾರಿಸಿ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಒಳಗೊಂಡಂತೆ ನೀರಾವರಿಗೆ ಈ ಕೆಳಗಿನಂತೆ ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದರು.

ತುಂಗಭದ್ರಾ ಎಡದಂಡೆ ಮುಖ್ಯಕಾಲುವೆ ಮೂಲಕ ಏಪ್ರಿಲ್.1ರಿಂದ ಏಪ್ರಿಲ್.10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 3000 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು. ಎಡದಂಡೆ ವಿಜಯನಗರ ಕಾಲುವೆಗೆ ಏಪ್ರಿಲ್.11ರಿಂದ ಮೇ 10ರವರೆಗೆ 150 ಕ್ಯೂಸೆಕ್ಸ್ ನಂತೆ ವಿತರಣಾ ಕಾಲುವೆ 1 ರಿಂದ 11ಎ ವರೆಗೆ ಅಥವಾ ಈ ಕಾಲುವೆಯಡಿ ನೀರಿನ ಲಭ್ಯತೆಯು ಇರುವವರೆಗೆ ಮಾತ್ರ ಇದ್ದಲ್ಲಿ ಯಾವುದೇ ಮೊದಲು ಅದು ಅನ್ವಯಿಸುತ್ತದೆ ಎಂದು ಹೇಳಿದರು.
ತುಂಗಭದ್ರಾ ಬಲದಂಡೆ ಕೆಳಮಟ್ಟದ ಕಾಲುವೆಗೆ ಲಭ್ಯ ವಾಗುವ ನೀರಿನಲ್ಲಿ ಏ.1ರಿಂದ ಏ.10ರವರೆಗೆ ಕುಡಿಯುವ ನೀರು ಒಳಗೊಂಡಂತೆ ಹಾಗೂ ನಿಂತ ಬೆಳೆಗಳ ಸಂರಕ್ಷಣೆಗಾಗಿ 450 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು. ಇನ್ನು ರಾಯ ಬಸವಣ್ಣ ಕಾಲುವೆಗೆ ಏ.1ರಿಂದ ಮೇ 31ರವರೆಗೆ ಲಭ್ಯವಾಗುವ ನೀರಿನಲ್ಲಿ 200 ಕ್ಯೂಸೆಕ್ಸ್ ನಂತೆ ನೀರು ಹರಿಸಲಾಗುವುದು ಎಂದು ಸಚಿವ ಶಿವರಾಜ್ ಎಸ್.ತಂಗಡಗಿ ಅವರು ವಿವರಿಸಿದರು. ಕುಡಿಯುವ ನೀರು ಮತ್ತು ನಿಂತ ಬೆಳೆಗಳಿಗೆ ಆದ್ಯತೆ ಕೊಟ್ಟು ನೀರು ಒದಗಿಸಲು ತೀರ್ಮಾನ ಮಾಡಲಾಗಿದೆ. ಈ ಸಂದರ್ಭದಲ್ಲಿ ಯಾವುದೇ ತೊಂದರೆಯಾಗದ ರೀತಿಯಲ್ಲಿ ನಿಷೇಧಾಜ್ಞೆ ಮೂಲಕ ನೀರು ಹರಿಸಲಾಗುವುದು ಎಂದು ತಿಳಿಸಿದರು.
ಈ ಸಮಯದಲ್ಲಿ ಜಿಲ್ಲಾಧಿಕಾರಿಗಳು ಕಲಂ 144ನ್ನು ಅಳವಡಿಸಿ ಸೂಕ್ತ ಪೊಲೀಸ್ ಬಂದೋಬಸ್ತನ್ನು ಪಡೆದು ಕುಡಿಯುವ ನೀರಿನ ಕೆರೆ ಕಟ್ಟೆಗಳನ್ನು ತುಂಬಿಸಿಕೊಳ್ಳಲು ಸಚಿವರು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಶರಣ್ ಪ್ರಕಾಶ್ ಪಾಟೀಲ್, ಮಾಜಿ ಸಚಿವ ಬಿ.ನಾಗೇಂದ್ರ, ಶಾಸಕರಾದ ನಾಗರಾಜ್, ಎಚ್.ಆರ್.ಗವಿಯಪ್ಪ, ಹಂಪನಗೌಡ ಬಾದರ್ಲಿ, ಗಣೇಶ್, ಇನ್ನಿತರರು ಉಪಸ್ಥಿತರಿದ್ದರು.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications