Turkey earthquake: ಭೂಕಂಪ ಪೀಡಿತ ಟರ್ಕಿಯಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭ
ಭೂಕಂಪ ಪೀಡಿತ ಟರ್ಕಿಯಲ್ಲಿ ಸಿಲುಕಿರುವ ರಾಜ್ಯದ ಜನರಿಗಾಗಿ ಸಹಾಯವಾಣಿ ಆರಂಭಿಸಲಾಗಿದೆ. ಸೋಮವಾರ ಟರ್ಕಿ, ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೂಕಂಪದಲ್ಲಿ 5,000 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.
ಬೆಂಗಳೂರು, ಫೆಬ್ರವರಿ. 07: ಭೂಕಂಪ ಪೀಡಿತ ಪ್ರದೇಶ ಟರ್ಕಿಯಲ್ಲಿ ಇರುವ ರಾಜ್ಯದ ಜನರಿಗಾಗಿ ಮಾಹಿತಿ ಮತ್ತು ಸಹಾಯಕ್ಕೆ ಅನುಕೂಲ ಮಾಡಲು ರಾಜ್ಯ ಸರ್ಕಾರ ಮಂಗಳವಾರ ಸಹಾಯವಾಣಿ ಆರಂಭಿಸಿದೆ.
ಟರ್ಕಿ ಮತ್ತು ಸಿರಿಯಾದ ಭೂಕಂಪನ ಪ್ರದೇಶಗಳಲ್ಲಿ ಸಿಲುಕಿರುವ ಕನ್ನಡಿಗರಿಗಾಗಿ ಸಹಾಯವಾಣಿ ಆರಂಭಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಸಂಜೆಯಷ್ಟೇ ಮಾಹಿತಿ ನೀಡಿದ್ದರು.
ರಾಜ್ಯ ತುರ್ತು ಕಾರ್ಯಾಚರಣೆಯ ಸಹಾಯವಾಣಿ ಸಂಖ್ಯೆಗಳು 080-1070, 080-22340676 ಆಗಿದ್ದು, ಕಂದಾಯ ಇಲಾಖೆ-ವಿಪತ್ತು ನಿರ್ವಹಣೆ ಇದನ್ನು ನಿರ್ವಹಿಸಲಿವೆ. ಟರ್ಕಿಯಲ್ಲಿ ಇರುವ ರಾಜ್ಯದ ಜನರಿಗೆ ಮಾಹಿತಿ ಮತ್ತು ಸಹಾಯವನ್ನು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಕ ನೀಡುವುದಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.

ಈ ಕುರಿತು ಮಾಹಿತಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ. ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ" ಎಂದಿದ್ದರು.
ಇನ್ನು, ಟರ್ಕಿಯ ಅಂಕಾರಾದಲ್ಲಿರುವ ಭಾರತದ ರಾಯಭಾರ ಕಚೇರಿಯ ಸಹಾಯವಾಣಿ ಸಂಖ್ಯೆಯನ್ನು ಸಹ ಹಂಚಿಕೊಂಡಿದೆ. ರಾಯಭಾರ ಕಚೇರಿಯ ಪ್ರಥಮ ಕಾರ್ಯದರ್ಶಿ ಸಮಂತ್ ರೋಹನ್ ರಾಜೇಂದ್ರ ಇಮೇಲ್: [email protected] ಮೊಬೈಲ್ ಸಂಖ್ಯೆ +90-530 314 2203 ಮತ್ತು ದೂರವಾಣಿ ಸಂಖ್ಯೆ +90-312 438 2195-98 ಆಗಿದೆ. ಇದರ ಜೊತೆಗೆ ಕಾನ್ಸುಲರ್ ಅಧಿಕಾರಿ ಬಾಬಿ ರಾವತ್ ಅವರ ಇಮೇಲ್ [email protected] ಮೊಬೈಲ್ ಸಂಖ್ಯೆ 90-535 490 4071 ಆಗಿದ್ದು, ಇವರನ್ನು ಸಂಪರ್ಕಿಸಬಹುದಾಗಿದೆ.

ಸೋಮವಾರ 7.8 ರ ತೀವ್ರತೆಯ ಭೂಕಂಪವು 5,000 ಕ್ಕೂ ಹೆಚ್ಚು ಜನರನ್ನು ಬಲಿಪಡೆದಿದೆ. ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಾವಿರಾರು ಕಟ್ಟಡಗಳನ್ನು ನೆಲಸಮಗೊಂಡಿವೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಭಾರತ ಸೇರಿದಂತೆ ಅನೇಕ ದೇಶಗಳು ಸಹಾಯಹಸ್ತ ಚಾಚಿವೆ. ಭಾರತದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಮಂಗಳವಾರ ಟರ್ಕಿಗೆ ತೆರಳಿ ಅಲ್ಲಿನ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಸರ್ಕಾರಿ PU ಕಾಲೇಜುಗಳ ಮೂಲಸೌಕರ್ಯ ಅಭಿವೃದ್ಧಿಗೆ ಬರೋಬ್ಬರಿ 9,383 ರೂ. ಲಕ್ಷ ಅನುದಾನ ಮಂಜೂರು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications