Tv9 Exit Poll Results: ಕಾಂಗ್ರೆಸ್‌ ಕೈ ಹಿಡಿದ ಕನ್ನಡಿಗರು, ಬಿಜೆಪಿಗೆ ಎಷ್ಟು ಸ್ಥಾನ?

ಬೆಂಗಳೂರು, ಮೇ 10: ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಮತದಾನ ಅಂತ್ಯಗೊಂಡಿದೆ. ರಾಜ್ಯಾದ್ಯಂತ ಸುಮಾರು ಶೇಕಡಾ 65ರಷ್ಟು ಮತದಾನವಾಗಿದ್ದು, ಇದೀಗ ಕರ್ನಾಟಕ ಜನತೆಯ ಚಿತ್ತ ಫಲಿತಾಂಶದ ಮೇಲಿದೆ.

ಮೇ 13 ರಂದು ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಜನ ಯಾರಿಗೆ ಬಹುಮತ ನೀಡಿದ್ದಾರೆ ಎನ್ನುವುದರ ಕುರಿತು ಟಿವಿ 9 ಮತ್ತು ಸಿ ವೋಟರ್ ಚುನಾವಣೋತ್ತರ ಸಮೀಕ್ಷೆ ನಡೆಸಿದೆ. ಮತದಾನ ಮಾಡಿದ ಮತದಾರರಿಂದ ಮಾಹಿತಿ ಪಡೆದು ನಡೆಸಿದ ಈ ಸಮೀಕ್ಷೆಯಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರಕ್ಕೆ ಬರಬಹುದು ಎನ್ನುವುದನ್ನು ಅಂದಾಜಿಸಲಾಗಿದೆ.

Tv9 C-Voters Exit Poll Results 2023

ಟಿ.ವಿ 9 ಮತ್ತು ಸಿ ವೋಟರ್ ನಡೆಸಿದ ಚುನಾವಣೋತ್ತರ ಸಮೀಕ್ಷೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ 100-112 ಸ್ಥಾನಗಳನ್ನು ಪಡೆದಿದ್ದರೆ, ಬಿಜೆಪಿ 83-95 ಸ್ಥಾನಗಳನ್ನು ಪಡೆದಿದೆ ಇನ್ನು ಜೆಡಿಎಸ್‌ 21-29 ಸ್ಥಾನಗಳನ್ನು ಪಡೆದಿದ್ದು, ಇತರರು 02-06 ಸ್ಥಾನಗಳನ್ನು ಪಡೆಯಲಿದೆ ಎಂದು ಟಿವಿ 9 ಮತ್ತು ಸಿ ವೋಟರ್ ಚುನಾವಣೋತ್ತರ ಸಮೀಕ್ಷೆಯಲ್ಲಿ ತಿಳಿಸಿದೆ.

ಟಿವಿ 9 ಮತ್ತು ಸಿ ವೋಟರ್ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಕಾಂಗ್ರೆಸ್‌ ಮೇಲುಗೈ ಸಾಧಿಸಿದ್ದು, ಹಳೇ ಮೈಸೂರು ಭಾಗದಲ್ಲಿನ 55 ಸ್ಥಾನಗಳ ಪೈಕಿ ಕಾಂಗ್ರೆಸ್‌ 28ರಿಂದ 32 ಸ್ಥಾನ ಪಡೆಯುವುದಾಗಿ ಸಮೀಕ್ಷೆ ತಿಳಿಸಿದೆ. ಇನ್ನು ಜೆಡಿಎಸ್ 19 ಸ್ಥಾನಗಳನ್ನು ಪಡೆಯಲಿದ್ದು, ಬಿಜೆಪಿ ಕೇವಲ 4 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಇನ್ನು ಕಿತ್ತೂರು ಕರ್ನಾಟಕದಲ್ಲಿ ಬಿಜೆಪಿಗೆ ಹೆಚ್ಚು ಬಲ ವ್ಯಕ್ತವಾಗಿದ್ದು, 50 ಸ್ಥಾನಗಳ ಪೈಕಿ ಸಮೀಕ್ಷೆ ಪ್ರಕಾರ ಬಿಜೆಪಿ 24-28 ಸ್ಥಾನಗಳನ್ನು ಪಡೆಯಲಿದ್ದು, ಕಾಂಗ್ರೆಸ್‌ 22-26 ಸ್ಥಾನಗಳನ್ನು ಪಡೆಯಲಿದೆ. ಇನ್ನು ಜೆಡಿಎಸ್‌ 01 ಸ್ಥಾನ ಹಾಗೂ ಇತರೆ 01 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಸಮೀಕ್ಷಾ ವರದಿ ತಿಳಿಸಿದೆ.

ಕಲ್ಯಾಣ ಕರ್ನಾಟಕ ಭಾಗದಲ್ಲಿ ಒಟ್ಟು 31 ಸ್ಥಾನಗಳಲ್ಲಿ ಕಾಂಗ್ರೆಸ್‌ 13-17 ಸ್ಥಾನಗಳನ್ನು ಪಡೆಯಲಿದ್ದು, ಬಿಜೆಪಿ 11-15 ಸ್ಥಾನಗಳನ್ನು ಪಡೆಯಲಿದೆ. ಇನ್ನು ಜೆಡಿಎಸ್‌ 0-2 ಸ್ಥಾನ ಹಾಗೂ ಇತರೆ 0-3 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಟಿವಿ 9 ಮತ್ತು ಸಿ ವೋಟರ್ ಚುನಾವಣೋತ್ತರ ಸಮೀಕ್ಷೆಯಲ್ಲಿ ತಿಳಿಸಿದೆ.

ಇನ್ನು ಬೃಹತ್‌ ಬೆಂಗಳೂರು ನಗರದಲ್ಲಿ ಬಿಜೆಪಿ 15-19 ಸ್ಥಾನಗಳಲ್ಲಿ ಗೆಲ್ಲಲಿದ್ದು, ಕಾಂಗ್ರೆಸ್‌ 11-15 ಸ್ಥಾನಗಳಲ್ಲಿ ಗೆಲ್ಲಲಿದೆ. ಜೆಡಿಎಸ್‌ 1-4 ಸ್ಥಾನ ಹಾಗೂ ಇತರೆ 0-1 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ ಎಂದು ಟಿವಿ 9 ಮತ್ತು ಸಿ ವೋಟರ್ ಚುನಾವಣೋತ್ತರ ಸಮೀಕ್ಷಾ ವರದಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+