ಅನ್ನಭಾಗ್ಯ ಕದನ; ಮೋದಿ ಅಕ್ಕಿ' ಅಂತೀರಲ್ಲಾ, ಮೋದಿ ಉತ್ತಿ, ಬಿತ್ತಿ ಬೆಳೆದು ಅಕ್ಕಿ ಕೊಡ್ತಿದ್ದಾರಾ? ಕಾಂಗ್ರೆಸ್ ಕಿಡಿ
ಬೆಂಗಳೂರು, ಜುಲೈ 11: ಅನ್ನಭಾಗ್ಯ ಅಕ್ಕಿ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಕಾಳಗ ಏರ್ಪಟ್ಟಿದೆ. ಕೇಂದ್ರ ಸರ್ಕಾರ ಅಕ್ಕಿ ವಿಚಾರದಲ್ಲಿ ದ್ವೇಷ ರಾಜಕೀಯನ್ನ ನಡೆಸುತ್ತಿದೆ ಎಂದು ರಾಜ್ಯ ಸರ್ಕಾರ ಆರೋಪಿಸಿದ್ದು, ಇದೀಗ ಪ್ರಧಾನಿ ನರೇಂದ್ರ ಮೋದಿ ವಿರುದ್ದ ರಾಜ್ಯ ಕಾಂಗ್ರೆಸ್ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಸರ್ಕಾರ ಸೋಮವಾರದಿಂದ 5 ಕೆಜಿ ಅಕ್ಕಿ ಬದಲು ಹಣ ನೀಡುವುದಕ್ಕೆ ಚಾಲನೆ ನೀಡಿದೆ. ಇದರ ಬೆನ್ನಲ್ಲಿಯೇ ಅನ್ನಭಾಗ್ಯ ಯೋಜನೆಯ ಅಕ್ಕಿ ವಿಚಾರವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಟ್ವೀಟ್ ವಾರ್ ನಡೆಯುತ್ತಿದೆ. ಬಿಜೆಪಿ ನಾಯಕರು "ಮೋದಿ ಅಕ್ಕಿ" ಎನ್ನಲು ಮೋದಿಯೇ ತಮ್ಮ ಜಮೀನಿನಲ್ಲಿ ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿದ್ದಾರೆಯೇ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ.

ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು, ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು, ಅನ್ನಭಾಗ್ಯ ಜಾರಿಗೆ ತಂದಿದ್ದು, ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು ಕಾಂಗ್ರೆಸ್ ಸರ್ಕಾರ. ಆದರೆ, ಬಿಜೆಪಿ ನಾಯಕರು "ಮೋದಿ ಅಕ್ಕಿ" ಎಂದು ಬೊಬ್ಬೆ ಹೊಡೆಯುತ್ತಿರುವುದು ನೋಡಿದರೆ ಮೋದಿಯೇ ತಮ್ಮ ಜಮೀನಿನಲ್ಲಿ ಉತ್ತಿ, ಬಿತ್ತಿ, ಬೆಳೆದು ಅಕ್ಕಿ ತಂದುಕೊಡುತ್ತಿರುವಂತೆ ಭಾಸವಾಗುತ್ತಿದೆ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಅದಲ್ಲದೇ ಗರೀಬ್ ಕಲ್ಯಾಣ್ ಯೋಜನೆ ಡಿಸೆಂಬರ್ ತಿಂಗಳ ನಂತರ ಸ್ಥಗಿತಗೊಳ್ಳಲಿದೆ, ಆಗ ಯಾರ ಅಕ್ಕಿ ಎಂದು ಬೊಬ್ಬೆ ಹೊಡೆಯುತ್ತಾರೆ? ಎಂದು ಕಾಂಗ್ರೆಸ್ ತನ್ನ ಟ್ವೀಟ್‌ನಲ್ಲಿ ಪ್ರಶ್ನಿಸಿದೆ.
👉ಪಡಿತರ ವಿತರಣಾ ಯೋಜನೆಯನ್ನು ಜಾರಿಗೆ ತಂದಿದ್ದು - ಕಾಂಗ್ರೆಸ್
— Karnataka Congress (@INCKarnataka) July 11, 2023
👉ಆಹಾರ ಭದ್ರತಾ ಕಾಯ್ದೆ ಜಾರಿಗೆ ತಂದಿದ್ದು - ಕಾಂಗ್ರೆಸ್
👉ಅನ್ನಭಾಗ್ಯ ಜಾರಿಗೆ ತಂದಿದ್ದು - ಕಾಂಗ್ರೆಸ್
👉 ರಾಜ್ಯದಲ್ಲಿ ಅನ್ನಭಾಗ್ಯ ಜಾರಿಗೆ ಬರುವಾಗ ಕೇಂದ್ರದಲ್ಲಿದ್ದಿದ್ದು - ಕಾಂಗ್ರೆಸ್
ಆದರೆ @BJP4Karnataka ನಾಯಕರು
“ಮೋದಿ ಅಕ್ಕಿ“ ಎಂದು ಬೊಬ್ಬೆ…
ರಾಜ್ಯ BJP ನಾಯಕರಿಗೆ ಧಮ್ ಇಲ್ಲವೇ?; ಗುಂಡೂರಾವ್ ಕಿಡಿ
ಇನ್ನೂ ಬಿಜೆಪಿ ವಿರುದ್ದ ಸಚಿವ ದಿನೇಶ್ ಗುಂಡೂರಾವ್ ಟ್ವೀಟ್ರ್ ಮೂಲಕ ಕಿಡಿಕಾರಿದ್ದು, ಇ-ಹರಾಜು ಮೂಲಕ ಕೇಂದ್ರ ಖಾಸಗಿಯವರಿಗೆ ಅಕ್ಕಿ ಮಾರಾಟ ಮಾಡುತ್ತಿದೆ. ನಾವು ಕೊಡಲು ಒಪ್ಪಿದ ಮೊತ್ತಕ್ಕಿಂತ ಕಡಿಮೆ ಮೊತ್ತದಲ್ಲಿ ಅಕ್ಕಿ ಮಾರಾಟ ಮಾಡಲು ಹರಾಜು ಕರೆದಿದ್ದರೂ ಅಕ್ಕಿಯನ್ನು ಕೇಳುವವರೇ ಗತಿಯಿಲ್ಲ. ಇದರ ಬದಲು ಕೇಂದ್ರ ಸರ್ಕಾರ ನಮಗೆ ಅಕ್ಕಿ ಕೊಡಬಹುದಿತ್ತು. ಕನಿಷ್ಟ ಪಕ್ಷ ಇದರಿಂದ ರಾಜ್ಯದ ಬಡವರ ಹೊಟ್ಟೆಯಾದರೂ ತುಂಬುತಿತ್ತು ಎಂದು ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ.

ನಾವು ಕೇಂದ್ರಕ್ಕೆ ಒಂದು kg ಅಕ್ಕಿಗೆ ₹34 ಕೊಡಲು ಒಪ್ಪಿದ್ದೆವು. ಆದರೆ ನಮಗೆ ಅಕ್ಕಿ ನಿರಾಕರಿಸಿದ ಕೇಂದ್ರ ಸರ್ಕಾರ FCI ಮೂಲಕ kgಗೆ ₹31.75ರ ಬೆಲೆ ನಿಗದಿ ಪಡಿಸಿ ಖಾಸಗಿಯವರಿಗೆ ಮಾರಲು ಇ- ಹರಾಜು ಕರೆದಿದೆ. ಇದು ರಾಜ್ಯBJP ನಾಯಕರ ದೃಷ್ಟಿಯಲ್ಲಿ ದ್ರೋಹ ಎನಿಸುವುದಿಲ್ಲವೇ? ಈ ಬಗ್ಗೆ ಮಾತಾಡಲು ರಾಜ್ಯ BJP ನಾಯಕರಿಗೆ ಧಮ್ ಇಲ್ಲವೇ? ಎಂದು ಪ್ರಶ್ನಿಸಿದ್ದಾರೆ.
3
— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) July 11, 2023
ಕೇಂದ್ರ ಅಕ್ಕಿ ರಾಜಕೀಯ ಮಾಡಿ ಬಡವರ ಅನ್ನ ಕಸಿದು ಕ್ರೌರ್ಯ ತೋರಿಸಿದೆ.
ಕೇಂದ್ರ ಅಕ್ಕಿ ಕೊಡದಿದ್ದರೂ ನಾವು ಬಡವರನ್ನು ಉಪವಾಸ ಕೆಡವುದಿಲ್ಲ.
ಈಗಾಗಲೇ ಅಕ್ಕಿಯ ಬದಲು ಹಣ ನೀಡುತ್ತಿದ್ದೇವೆ. ಹೊಟ್ಟೆ ತುಂಬಿದ ಗಿರಾಕಿಗಳಾದ BJPಯವರಿಗೆ ಹಸಿವಿನ ಸಂಕಟ ಗೊತ್ತಿಲ್ಲ.
ಇನ್ನಾದರೂ BJP ನಾಯಕರು ರಾಜಕೀಯ ಬಿಟ್ಟು ಕೇಂದ್ರದಿಂದ ಅಕ್ಕಿ ಕೊಡಿಸಲಿ.
ಕೇಂದ್ರ ಅಕ್ಕಿ ರಾಜಕೀಯ ಮಾಡಿ ಬಡವರ ಅನ್ನ ಕಸಿದು ಕ್ರೌರ್ಯ ತೋರಿಸಿದೆ. ಕೇಂದ್ರ ಅಕ್ಕಿ ಕೊಡದಿದ್ದರೂ ನಾವು ಬಡವರನ್ನು ಉಪವಾಸ ಕೆಡವುದಿಲ್ಲ. ಈಗಾಗಲೇ ಅಕ್ಕಿಯ ಬದಲು ಹಣ ನೀಡುತ್ತಿದ್ದೇವೆ. ಹೊಟ್ಟೆ ತುಂಬಿದ ಗಿರಾಕಿಗಳಾದ BJPಯವರಿಗೆ ಹಸಿವಿನ ಸಂಕಟ ಗೊತ್ತಿಲ್ಲ, ಇನ್ನಾದರೂ BJP ನಾಯಕರು ರಾಜಕೀಯ ಬಿಟ್ಟು ಕೇಂದ್ರದಿಂದ ಅಕ್ಕಿ ಕೊಡಿಸಲಿ ಎಂದು ಹೇಳಿದ್ದಾರೆ.
ಇನ್ನೂ ಕಾಂಗ್ರೆಸ್ ಸರ್ಕಾರದ ವಿರುದ್ದ ರಾಜ್ಯ ಬಿಜೆಪಿಯೂ ಕೂಡ ಟ್ವೀಟ್ ಮಾಡಿದ್ದು, ಅನ್ನಭಾಗ್ಯ ಯೋಜನೆ ಎಂಬ ಸಿದ್ದರಾಮಯ್ಯನವರ ರಾಜಕೀಯ ಸಿರೀಸ್‌ನ ಎಪಿಸೋಡ್‌ಗಳು ಎಂದು ಲೇವಡಿ ಮಾಡಿದೆ. ಟ್ವೀಟ್‌ನಲ್ಲಿ ಐದು ಎಪಿಸೋಡ್‌ಗಳನ್ನು ಪ್ರಸ್ತಾಪಿಸುವ ಮೂಲಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಕಾಲೆಳೆದಿದೆ. ಅದಲ್ಲದೇ ನುಡಿದಂತೆ ಅನ್ನಭಾಗ್ಯ ಯೋಜನೆ ಜಾರಿ ಮಾಡಲಾಗದ ಕಾಂಗ್ರೆಸ್ ಸರ್ಕಾರ ಹೊಸ ಎಪಿಸೋಡುಗಳು ಮಾತ್ರವಲ್ಲ, ಹೊಸ ಸೀಸನ್ ಆರಂಭಿಸಿದರು ಅಚ್ಚರಿಯಿಲ್ಲ ಎಂದು ಬಿಜೆಪಿ ಟ್ವೀಟ್ ಮಾಡಿದೆ.












Click it and Unblock the Notifications