• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಆನಂದ್ ಸಿಂಗ್, ಗಣೇಶ್ ನಡುವಿನ ಗಲಾಟೆ ಪ್ರಕರಣಕ್ಕೆ ತಿರುವು!

|

ಬೆಂಗಳೂರು, ಜನವರಿ 21 : ವಿಜಯನಗರ ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ತಿರುವು ಸಿಕ್ಕಿದೆ. 2019ರ ಜನವರಿ 19ರಂದು ಕಂಪ್ಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಜೆ. ಎನ್. ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ್ದರು.

ಪರಸ್ಪರ ರಾಜಿ ಸಂಧಾನದ ಮೂಲಕ ಪ್ರಕರಣವನ್ನು ಇತ್ಯರ್ಥಗೊಳಿಸಿಕೊಳ್ಳುತ್ತೇವೆ ಎಂದು ಜೆ. ಎನ್. ಗಣೇಶ್ ಕರ್ನಾಟಕ ಹೈಕೋರ್ಟ್‌ಗೆ ಮೆಮೋ ಸಲ್ಲಿಸಿದ್ದಾರೆ. ಈ ಪ್ರಕರಣದ ವಿಚಾರಣೆಯನ್ನು ಮಂಗಳವಾರ ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ.

ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್ ವಿರುದ್ಧ ಎಫ್‌ಐಆರ್

ಆನಂದ್ ಸಿಂಗ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆ. ಎನ್. ಗಣೇಶ್ ವಿರುದ್ಧ ಬಿಡದಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಜೈಲು ಸೇರಿದ್ದ ಅವರು ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದಾರೆ. ತಮ್ಮ ವಿರುದ್ಧದ ಎಫ್‌ಐಆರ್ ರದ್ದುಗೊಳಿಸುವಂತೆ ಕೋರಿ ಗಣೇಶ್ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಆನಂದ್ ಸಿಂಗ್ ಮೇಲೆ ಹಲ್ಲೆ: ಎಫ್‌ಐಆರ್ ರದ್ದು ಕೋರಿ ಕಂಪ್ಲಿ ಗಣೇಶ್ ಮನವಿ

2019ರ ಜನವರಿ 19ರ ರಾತ್ರಿ ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಕಂಪ್ಲಿ ಶಾಸಕ ಜೆ. ಎನ್. ಗಣೇಶ್ ಮತ್ತು ವಿಜಯನಗರ ಕ್ಷೇತ್ರದ ಶಾಸಕ (ಆಗ ಕಾಂಗ್ರೆಸ್) ಆನಂದ್ ಸಿಂಗ್ ನಡುವೆ ಗಲಾಟೆ ನಡೆದಿತ್ತು. ಗಣೇಶ್ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪವಿದೆ. ತೀವ್ರಗಾಗಿ ಗಾಯಗೊಂಡಿದ್ದ ಆನಂದ್ ಸಿಂಗ್ ಆಸ್ಪತ್ರೆಗೆ ದಾಖಲಾಗಿದ್ದರು.

ಶಾಸಕರ ನಡುವಿನ ಗಲಾಟೆ : ಆನಂದ್‌ ಸಿಂಗ್ ಫೋಟೋ ವೈರಲ್

ಪ್ರಕರಣದ ಇತ್ಯರ್ಥಕ್ಕೆ ಅವಕಾಶ ಕೊಡಿ

ಪ್ರಕರಣದ ಇತ್ಯರ್ಥಕ್ಕೆ ಅವಕಾಶ ಕೊಡಿ

ಕರ್ನಾಟಕ ಹೈಕೋರ್ಟ್‌ಗೆ ಕಂಪ್ಲಿ ಕ್ಷೇತ್ರದ ಶಾಸಕ ಜೆ. ಎನ್. ಗಣೇಶ್ ಅರ್ಜಿ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಬಿ. ಎ. ಪಾಟೀಲ್ ನೇತೃತ್ವದ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ಉಭಯ ಕಕ್ಷಿದಾರರು ಮಂಗಳವಾರ ನ್ಯಾಯಾಲಯದ ಮುಂದೆ ಹಾಜರಾಗಲಿ. ಮೆಮೋ ಬಗ್ಗೆ ನಂತರ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದೆ.

ಎಫ್‌ಐಆರ್ ರದ್ದು ಮಾಡಿ

ಎಫ್‌ಐಆರ್ ರದ್ದು ಮಾಡಿ

ಜೆ. ಎನ್. ಗಣೇಶ್ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳುತ್ತೇವೆ. ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ರದ್ದುಗೊಳಿಸಬೇಕು ಎಂದು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಕಂಪ್ಲಿ ಗಣೇಶ್ ಬಂಧನವಾಗಿತ್ತು

ಕಂಪ್ಲಿ ಗಣೇಶ್ ಬಂಧನವಾಗಿತ್ತು

ಬಿಡದಿ ಪೊಲೀಸ್ ಠಾಣೆಯಲ್ಲಿ ಶಾಸಕ ಜೆ. ಎನ್. ಗಣೇಶ್ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಹಲ್ಲೆ ಪ್ರಕರಣದಲ್ಲಿ ಗಣೇಶ್ ಮೊದಲ ಆರೋಪಿ. ಐಪಿಸಿ ಸೆಕ್ಷನ್ 323, 324, 307, 504 ಹಾಗೂ 506ರ ಅಡಿ ಪ್ರಕರಣವನ್ನು ಪೊಲೀಸರು ದಾಖಲು ಮಾಡಿದ್ದಾರೆ. ಜೆ. ಎನ್. ಗಣೇಶ್ ಬಂಧಿಸಲಾಗಿತ್ತು, ಜಾಮೀನಿನ ಮೇಲೆ ಅವರು ಬಿಡುಗಡೆಗೊಂಡಿದ್ದಾರೆ.

ಆನಂದ್ ಸಿಂಗ್ ಗಾಯಗೊಂಡಿದ್ದರು

ಆನಂದ್ ಸಿಂಗ್ ಗಾಯಗೊಂಡಿದ್ದರು

ಜೆ. ಎನ್. ಗಣೇಶ್‌ರಿಂದ ಹಲ್ಲೆಗೊಳಗಾಗಿದ್ದ ಆನಂದ್ ಸಿಂಗ್ ತಿಂಗಳುಗಳ ಕಾಲ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಕಣ್ಣು, ಮುಖದ ಭಾಗಕ್ಕೆ ತೀವ್ರ ಗಾಯವಾಗಿತ್ತು. ಈಗ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಗಣೇಶ್ ಮುಂದಾಗಿದ್ದಾರೆ.

English summary
Twist to Kampli Congress MLA J.N.Ganesh attacked on Anand Singh case. FIR field against for attacked Anand Singh at Eagleton resort on January 19, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X