ಕನಕಪುರ: ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆಟೋ ಚಾಲಕನ ಬಂಧನ

Posted By:
Subscribe to Oneindia Kannada

ಕನಕಪುರ, ಜೂನ್ 16 : ಆಟೋ ಚಾಲಕನೊಬ್ಬ ತನ್ನ ಸ್ನೇಹಿತನೊಂದಿಗೆ ಸೇರಿ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಕನಕಪುರ ತಾಲೂಕಿನ ಹನುಮನಹಳ್ಳಿಯಲ್ಲಿ ನಡೆದಿದ್ದು, ಆರೋಪಿಗಳನ್ನು ಬಂಧಿಸಲಾಗಿದೆ.

ಆಡನಕುಪ್ಪೆ ಗ್ರಾಮದ ನಿವಾಸಿ ಆಟೋ ಚಾಲಕ ಇಮ್ರಾನ್ ಮತ್ತು ಇಯಾಜ್ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸಂಜೆ ಶಾಲೆಯಿಂದ ಮನೆಯತ್ತ ತೆರಳುತ್ತಿದ್ದ ಬಾಲಕಿಯನ್ನು ಮನೆಗೆ ಬಿಡುವುದಾಗಿ ಪುಸಲಾಯಿಸಿ ಹನುಮನಹಳ್ಳಿಯ ಕೆರೆ ಬಳಿಯ ತೋಟಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ.

Two accused arrested for raping on minor girl in Ramanagar district

ತಡವಾಗಿ ಮನೆಗೆ ಬಂದ ಬಾಲಕಿಯನ್ನು ಪೋಷಕರು ವಿಚಾರಿಸಿದಾಗ ಆಕೆ ನಡೆದ ಘಟನೆಯನ್ನು ವಿವರಿಸಿದ್ದಾಳೆ. ಬಳಿಕ ಪೋಷಕರು ತಡರಾತ್ರಿ ಗ್ರಾಮಾಂತರ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಈ ಸಂಬಂಧ ಗ್ರಾಮಾಂತರ ಠಾಣೆ ಆರಕ್ಷಕ ಉಪ ನಿರೀಕ್ಷಕ ಕುಮಾರಸ್ವಾಮಿ ಆರೋಪಿಗಳಿಬ್ಬರನ್ನು ಬಂಧಿಸಿ ಪೋಕ್ಸ್ ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two accused arrested for raping on minor girl in Hanumanahalli, Ramanagar district.
Please Wait while comments are loading...