ಇಂದೇ ಇಬ್ಬರು ಕಾಂಗ್ರೆಸ್ ಶಾಸಕಿಯರ ರಾಜೀನಾಮೆ?
ಬೆಂಗಳೂರು, ಜುಲೈ 10: ಇಬ್ಬರು ಕಾಂಗ್ರೆಸ್ ಶಾಸಕರು ಇಂದು ರಾಜೀನಾಮೆ ನೀಡಿರುವ ಬೆನ್ನಲ್ಲೆ ಇದೇ ದಿನ ಇಬ್ಬರು ಮಹಿಳಾ ಕಾಂಗ್ರೆಸ್ ಶಾಸಕಿಯರು ರಾಜೀನಾಮೆ ನೀಡುವ ಸಾಧ್ಯತೆ ದಟ್ಟವಾಗಿದೆ.
ಈಗಾಗಲೇ ರಾಜೀನಾಮೆ ನೀಡಿರುವ ಹಿರಿಯ ಕಾಂಗ್ರೆಸ್ಸಿಗ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ ಈಗಾಗಲೇ ವಿಧಾನಸೌಧದತ್ತ ತೆರಳಿದ್ದು, ಕೆಲವೇ ಕ್ಷಣಗಳಲ್ಲಿ ರಾಜೀನಾಮೆ ನೀಡಲಿದ್ದಾರೆ.
ಅವರ ಜೊತೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಸಹ ಇಂದು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದ್ದು, ಅವರೂ ಸಹ ವಿಧಾನಸೌಧದತ್ತ ಧಾವಿಸುತ್ತಿದ್ದಾರೆ ಎಂಬ ಸುದ್ದಿ ಇದೆ.

ಇಂದು ಸಂಜೆ 4 ರ ಸುಮಾರಿಗೆ ಚಿಕ್ಕಬಳ್ಳಾಪುರ ಶಾಸಕ ಸುಧಾಕರ್ ಮತ್ತು ಹೊಸಕೋಟೆ ಶಾಸಕ, ಸಚಿವ ಎಂಟಿಬಿ ನಾಗರಾಜು ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.












Click it and Unblock the Notifications