ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಾಯುಭಾರ ಕುಸಿತ, ಕರ್ನಾಟಕದಲ್ಲಿ ಎರಡು ದಿನ ಭಾರಿ ಮಳೆ

|
Google Oneindia Kannada News

Recommended Video

ಆಂಧ್ರದಲ್ಲಿ ಭಾರೀ ಮಳೆ: ರಾಜ್ಯಕ್ಕೂ ತಟ್ಟಿದ ಎಫೆಕ್ಟ್

ಬೆಂಗಳೂರು, ಸೆಪ್ಟೆಂಬರ್ 19: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಇನ್ನೂ ಎರಡು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಾಮಾನ್ಯವಾಗಿ ಸೆಪ್ಟೆಂಬರ್ 1ರ ಬಳಿಕ ಮುಂಗಾರು ಕಡಿಮೆಯಾಗುತ್ತಿತ್ತು. ಆದರೆ ಸೆಪ್ಟೆಂಬರ್ 19 ಬಂದರೂ ಕೂಡ ಮಲೆನಾಡು, ಕರಾವಳಿ, ಉತ್ತರ ಕರ್ನಾಟಕ ಭಾಗದಲ್ಲಿ ಮಳೆಯಾಗುತ್ತಿದೆ.

ಮಹಾರಾಷ್ಟ್ರದಲ್ಲಿ ಮತ್ತೆ ಮಳೆ ಮುಂದುವರೆದಿದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದರೆ ಅದು ಕರ್ನಾಟಕದ ಮೇಲೂ ದುಷ್ಪರಿಣಾಮ ಬೀರಲಿದೆ ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ.

ಬೆಂಗಳೂರಲ್ಲಿ ಜೋರು ಮಳೆ: ಸಂಚಾರ ಅಸ್ತವ್ಯಸ್ತಬೆಂಗಳೂರಲ್ಲಿ ಜೋರು ಮಳೆ: ಸಂಚಾರ ಅಸ್ತವ್ಯಸ್ತ

ಒಂದು ಕಡೆ ಪ್ರವಾಹದಿಂದ ಬದುಕೇ ಬೀದಿಗೆ ಬಿದ್ದಿದೆ, ಇತ್ತ ಹೈದರಾಬಾದ್ ಕರ್ನಾಟಕದಲ್ಲಿ ಒಂದೆರಡು ದಿನದ ಮಟ್ಟಿಗೆ ಮಳೆರಾಯ ಮತ್ತೆ ಅಬ್ಬರಿಸೋ ಸಾಧ್ಯತೆ ಇದೆ. ಇವತ್ತು ಹೈದರಾಬಾದ್ ಕರ್ನಾಟಕದ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆಗಳಿವೆ.

ಮಹಾರಾಷ್ಟ್ರ ಮಳೆ ವಿರಾಮದ ನಂತರ ಮತ್ತೆ ಬಂದಿದೆ. ಪುಣೆ, ರಾಯ್‍ಗಢ್, ಮುಂಬೈ ಮತ್ತು ಸತಾರದಲ್ಲಿ ಇವತ್ತಿನ ಮಟ್ಟಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.

ಬೀಡ್, ಔರಂಗಬಾದ್, ಪಾಲ್ಗಾರ್, ಥಾಣೆ, ರತ್ನಗಿರಿ, ಸಿಂಧುದುರ್ಗ ಜಿಲ್ಲೆಯಲ್ಲೂ ಭಾರೀ ಮಳೆ ಆಗುವ ನಿರೀಕ್ಷೆ ಇದೆ. ಕೊಯ್ನಾ ಜಲಾಶಯದ ವ್ಯಾಪ್ತಿಯಲ್ಲಿ ಮಳೆ ಹೆಚ್ಚಾದರೆ ಮತ್ತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಪ್ರವಾಹ ಭೀತಿ ಎದುರಾಗಲಿದೆ.

ಉಡುಪಿ, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆ

ಉಡುಪಿ, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆ

ಉಡುಪಿ, ದಕ್ಷಿಣ ಕನ್ನಡದಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಅಷ್ಟೇ ಅಲ್ಲದೆ ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮೈಸೂರು, ಶಿವಮೊಗ್ಗ, ಕೊಡಗಿನಲ್ಲಿ ಒಂದು ವಾರದಿಂದ ಅತಿ ಹೆಚ್ಚು ಮಳೆಯಾಗುತ್ತಿದೆ.

ಕೊಡಗಿನಲ್ಲಿ ಗುಡ್ಡ ಕುಸಿತ ತಡೆಗೆ ವೆಟ್ಟಿವೆರ್ ಹುಲ್ಲು ನಾಟಿಕೊಡಗಿನಲ್ಲಿ ಗುಡ್ಡ ಕುಸಿತ ತಡೆಗೆ ವೆಟ್ಟಿವೆರ್ ಹುಲ್ಲು ನಾಟಿ

ಚಿತ್ರದುರ್ಗದಲ್ಲಿ ಸಾಮಾನ್ಯ ಮಳೆ

ಚಿತ್ರದುರ್ಗದಲ್ಲಿ ಸಾಮಾನ್ಯ ಮಳೆ

ಕೊಡಗು, ಉಡುಪಿ, ಶಿವಮೊಗ್ಗ, ಉತ್ತರ ಕನ್ನಡ ಇನ್ನಿತರೆ ಪ್ರದೇಶಗಳಲ್ಲಿ ಜುಲೈ, ಆಗಸ್ಟ್ ಸಮಯದಲ್ಲಿ ವಿಪರೀತ ಮಳೆಯಾಗುತ್ತಿದ್ದರೂ ಕಲ್ಲಿನ ಕೋಟೆ ಚಿತ್ರದುರ್ಗದಲ್ಲಿ ಮಾತ್ರ ಆಗಾಗ ಸಣ್ಣ ಮಳೆಯಾಗುತ್ತಿತ್ತು. ಇದೀಗ ಅಲ್ಲಿ ಬರದ ಸ್ಥಿತಿಯೇ ನಿರ್ಮಾಣವಾಗಿದೆ. ಕಳೆದೊಂದು ವಾರದಿಂದ ಸಾಮಾನ್ಯ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕ ಭಾಗದಲ್ಲೂ ಮಳೆ

ಉತ್ತರ ಕರ್ನಾಟಕ ಭಾಗದಲ್ಲೂ ಮಳೆ

ಬಾಗಲಕೋಟೆ, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರದಲ್ಲೂ ಕೂಡ ವಿಪರೀತ ಮಳೆಯಾಗುತ್ತಿದೆ. ಮಹಾರಾಷ್ಟ್ರದಲ್ಲಿ ಮಳೆಯ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಇದು ಕರ್ನಾಟಕದ ಮೇಲೂ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ ಎನ್ನಲಾಗಿದೆ.

ತುಂಬಿದ ಮಡುವಿನಕೋಡಿ ಕೆರೆ: ಏರಿ ಒಡೆಯುವ ಆತಂಕತುಂಬಿದ ಮಡುವಿನಕೋಡಿ ಕೆರೆ: ಏರಿ ಒಡೆಯುವ ಆತಂಕ

ಬೆಂಗಳೂರಲ್ಲಿಈ ಬಾರಿ ಹಿಂಗಾರು ಜೋರು?

ಬೆಂಗಳೂರಲ್ಲಿಈ ಬಾರಿ ಹಿಂಗಾರು ಜೋರು?

ಬೆಂಗಳೂರು ಸೇರಿದಂತೆ ಕರ್ನಾಟಕದ ಇತರೆ ಭಾಗಗಳಲ್ಲಿ ಈ ಬಾರಿ ಹಿಂಗಾರು ಮಳೆಯೂ ಜೋರಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಅಕ್ಟೋಬರ್ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ಹಿಂಗಾರು ಮಳೆ ಬೀಳಲಿದ್ದು ಕರ್ನಾಟಕದಲ್ಲೂ ಕೂಡ ಮಳೆಯಾಗಲಿದೆ.

English summary
Depression in Arabian sea Heavy Rain Fall chances in Karnataka for two days.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X