ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಡಿಸೆಂಬರ್ 17 ರಿಂದ ಎರಡು ದಿನ ಮಳೆ

ಬೆಂಗಳೂರು, ಡಿಸೆಂಬರ್ 14: ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 17ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Recommended Video

      ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭಿಸಿದ Kamal Hassan | Oneindia Kannada

      ಚಂಡಮಾರುತಗಳು ದುರ್ಬಲವಾಗಿದ್ದು, ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹೇಳಲಾಗಿತ್ತು. ಆದರೆ ಮತ್ತೆ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂಬ ಮುನ್ಸೂಚನೆ ದೊರೆತಿದೆ.

      ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಡಿಸೆಂಬರ್ 17 ಹಾಗೂ 18 ರಂದು ಭಾರಿ ಮಳೆಯಾಗಲಿದೆ.

       ಬೆಂಗಳೂರು ಹವಾಮಾನ ವರದಿ

      ಬೆಂಗಳೂರು ಹವಾಮಾನ ವರದಿ

      ಬೆಂಗಳೂರಲ್ಲಿ ಚಳಿ ಮುಂದುವರೆದಿದೆ. ಆಕಾಶ ಶುಭ್ರವಾಗಿದ್ದು, 28 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಡಿಸೆಂಬರ್ 17-18 ರಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಮಳೆಯಾಗಲಿದೆ.

       ಮಳೆಯಾಗಲಿರುವ ಪ್ರದೇಶಗಳು

      ಮಳೆಯಾಗಲಿರುವ ಪ್ರದೇಶಗಳು

      ಉಡುಪಿ, ಉತ್ತರ ಕನ್ನಡ,ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಹಾಸನ, ಕೋಲಾರ, ಮಂಡ್ಯ, ಕೊಡಗು, ರಾಮನಗರ, ಮೈಸೂರಿನಲ್ಲಿ ಮಳೆಯಾಗಲಿದೆ.

       ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲು

      ದಾವಣಗೆರೆಯಲ್ಲಿ ಕನಿಷ್ಠ ತಾಪಮಾನ ದಾಖಲು

      ದಾವಣಗೆರೆಯಲ್ಲಿ 12.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ. ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಉಳಿದೆಡೆ ಒಣಹವೆ ಮುಂದುವರೆಯಲಿದೆ.

       ಮುಂಬೈನಲ್ಲಿ ಮಳೆ

      ಮುಂಬೈನಲ್ಲಿ ಮಳೆ

      ಮುಂದಿನ 24 ಗಂಟೆಯಲ್ಲಿ ಮುಂಬೈನಲ್ಲೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮಹಾರಾಷ್ಟ್ರ, ಮಧ್ಯಮಹಾರಾಷ್ಟ್ರ, ಕೊಂಕಣದಲ್ಲಿ ಮಳೆಯಾಗಲಿದೆ. ಮುಂದಿನ 3 ದಿನಗಳ ಕಾಲ ಮಳೆ ಮುಂದುವರೆಯಲಿದೆ. ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. ಮುಂಬೈನಲ್ಲಿ ಭಾನುವಾರ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು ಕೆಲವೆಡೆ ಮಳೆ ಸುರಿದಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+