ಕರ್ನಾಟಕದಲ್ಲಿ 2 ಭಾಷಾ ನೀತಿ: ಸಿದ್ದರಾಮಯ್ಯ ಹೇಳಿಕೆಗೆ ಕನ್ನಡಿಗರ ಅಸಮಾಧಾನ!
ಕರ್ನಾಟಕದಲ್ಲಿ ಹಲವು ವರ್ಷಗಳಿಂದ ದ್ವಿಭಾಷಾ ನೀತಿಯ ಬಗ್ಗೆ ವ್ಯಾಪಕವಾದ ಚರ್ಚೆ ಆಗುತ್ತಿದೆ. ಹಿಂದಿ ಭಾಷೆಯ ಹೇರಿಕೆಗೆ ಕಡಿವಾಣ ಹಾಕಬೇಕು. ರಾಜ್ಯದಲ್ಲಿ ದ್ವಿಭಾಷಾ ನೀತಿ ಅಂದರೆ, ಕನ್ನಡ ಹಾಗೂ ಇಂಗ್ಲಿಷ್ ಭಾಷೆ ಸಾಕು ಎಂದು ಕನ್ನಡಿಗರು ಆಗ್ರಹಿಸುತ್ತಿದ್ದಾರೆ. ಅಲ್ಲದೇ ಈಚೆಗೆ ಮಹಾರಾಷ್ಟ್ರ ಸರ್ಕಾರವು ದ್ವಿಭಾಷಾ ನೀತಿಯನ್ನು ಅಳವಡಿಸಿಕೊಂಡಿದೆ. ಹಿಂದಿ ಭಾಷೆಯನ್ನು ಕೈ ಬಿಟ್ಟಿದೆ. ಈ ರೀತಿ ಇರುವಾಗಲೇ ಕರ್ನಾಟಕದಲ್ಲೂ ದ್ವಿಭಾಷಾ ನೀತಿ ಜಾರಿಯಾಗಬೇಕು ಎನ್ನುವ ಅಭಿಯಾನ ಜೋರಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ಆದರೆ ಸಿದ್ದರಾಮಯ್ಯ ಅವರ ಮಾತು ಕನ್ನಡಿಗರಿಗೆ ಸಮಾಧಾನ ತಂದಿಲ್ಲ.
ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ನನ್ನ ಅಭಿಪ್ರಾಯವೇ ನಮ್ಮ ಸರ್ಕಾರದ ಅಭಿಪ್ರಾಯ
ವನ್ನಾಗಿಸುವ ದಿಕ್ಕಿನಲ್ಲಿ ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ. ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು ಅವರ ಆಶಯವಾಗಿತ್ತು. ಆದರೆ, ಇಂದು ಶಿಕ್ಷಣ ಹೆಚ್ಚಾದಷ್ಟೂ ಮೌಡ್ಯ, ಕಂದಾಚಾರ ಹೆಚ್ಚಾಗಿ ವೈಜ್ಞಾನಿಕ ಪ್ರಜ್ಞೆ ಕಡಿಮೆಯಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಜನ ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ "ಕುವೆಂಪು ವಿಚಾರ ಕ್ರಾಂತಿ" ಕೃತಿಯನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡಿದ್ದಾರೆ. ನಮ್ಮ ಸಂವಿಧಾನದಲ್ಲಿ ಕುವೆಂಪು, ಬಸವಣ್ಣ ಅವರ ಆಶಯಗಳೂ ಅಡಕವಾಗಿವೆ. ಸಂವಿಧಾನದ ಮೌಲ್ಯ ಮತ್ತು ಮಹತ್ವ ಅರಿಯುವ ಕೆಲಸ ಹೆಚ್ಚಾಗಬೇಕು. ಈ ಉದ್ದೇಶದಿಂದಲೇ ಸಂವಿಧಾನ ಓದು, ಸಂವಿಧಾನ ಪೀಠಿಕೆ ಅಭಿಯಾನವನ್ನು ನಾವು ನಡೆಸುತ್ತಿದ್ದೇವೆ. ರಾಜಕಾರಣಿಯಾಗಿ ನನಗೆ ಕೆಲವು ಮಿತಿಗಳು ಇರುತ್ತವೆ. ಸಮಾಜದ ನಂಬಿಕೆಗಳ ಜೊತೆಗೂ ನಾವು ಕೆಲವೊಮ್ಮೆ ನಡೆಯಬೇಕಾಗುತ್ತದೆ. ನಾನು ದೇವಸ್ಥಾನಕ್ಕೆ ಹೋದಾಗ ಕುಂಕಮ ಇಡುತ್ತಾರೆ. ಕುಂಕುಮ ಇಟ್ಟಿದ್ದಕ್ಕೂ ಕತೆ ಕಟ್ಟುತ್ತಾರೆ. ನಾವು ಗ್ರಾಮೀಣ ಭಾಗಕ್ಕೆ ಹೋದಾಗ ದೇವಸ್ಥಾನಗಳಿಗೆ ಹೋಗದಿದ್ದರೆ ನಮ್ಮ ಬಗ್ಗೆ ಬೇರೆಯದೇ ರೀತಿಯ ಕತೆ ಕಟ್ಟುತ್ತಾರೆ ಎಂದಿದ್ದಾರೆ.
ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದೇ ಹೋದರೆ ಕೇವಲ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ. ಈ ಕಾರಣಕ್ಕೇ ಮೌಢ್ಯ ನಿಷೇಧ ಕಾಯ್ದೆ ಪರಿಣಾಮಕಾರಿ ಆಗುವುದಿಲ್ಲ. ನಾವು ಏನೇ ಕಾನೂನು, ನಿಯಮ ಮಾಡಿದರೂ ಸಂವಿಧಾನದ ಚೌಕಟ್ಟಿಗೇ ಒಳಪಟ್ಟಿರಬೇಕು. ಗುಡಿ, ಚರ್ಚು, ಮಸೀದಿಗಳನ್ನು ಬಿಟ್ಟು ಹೊರ ಬನ್ನಿ, ಬಡತನದ ಬೇರುಗಳ ಬುಡ ಸಮೇತ ಕಿತ್ತು ಹಾಕಲು ಬನ್ನಿ ಎಂದು ಕುವೆಂಪು ಅವರು ಕರೆ ನೀಡಿದ್ದರು. ಈ ಕರೆಯನ್ನು ಸಮಾಜ ಪಾಲಿಸಿದರೆ ಅಸಮಾನತೆಯ ಸಮಾಜ ಸಮಾನತೆಯ ಕಡೆ ಚಲಿಸುತ್ತದೆ. ಕುವೆಂಪು ಅವರ ಆಶಯ ಮತ್ತು ಮೌಲ್ಯಗಳು ಇಡೀ ವಿಶ್ವಕ್ಕೇ ಅನ್ವಯ ಆಗುವುದರಿಂದ ಜಗತ್ತಿನ ಇತರೆ ಭಾಷೆಗಳಿಗೂ ಈ ಕೃತಿ ಅನುವಾದವಾಗಲಿ ಎಂಬುದು ನನ್ನ ಇಂಗಿತ ಎಂದಿದ್ದಾರೆ.
ಸಿದ್ದರಾಮಯ್ಯ ಮನಸ್ಸು ಮಾಡಬೇಕು: ಇನ್ನು ಈ ವಿಚಾರವಾಗಿ ಕನ್ನಡಿಗರು ಸಿದ್ದರಾಮಯ್ಯ ಅವರು ಗಟ್ಟಿ ನಿರ್ಧಾರ ತೆಗೆದುಕೊಳ್ಳಬೇಕು. ಅವರ ನಿರ್ಧಾರ ಬೇರೆ ಸರ್ಕಾರದ ನಿರ್ಧಾರ ಬೇರೆ ಎಂದು ಅಂತರ ಕಾಪಾಡಿಕೊಳ್ಳಬಾರದು. ಹೈಕಮಾಂಡ್ ಎದುರು ಹಾಕಿಕೊಳ್ಳಬಹುದು ಎನ್ನುವ ಅನುಮಾನದಿಂದ ದ್ವಿಭಾಷಾ ನೀತಿಯಿಂದ ಹಿಂದೆ ಸರಿಯಬಾರದು. ರಾಜ್ಯದಲ್ಲೂ ದ್ವಿಭಾಷಾ ನೀತಿ ಜಾರಿ ಆಗಬೇಕು ಎಂದು ಕನ್ನಡಿಗರು ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ.
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications