ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸರ್ಕಾರದಿಂದ ಮಹತ್ವದ 2 ನೇಮಕಾತಿ

|
Google Oneindia Kannada News

ಬೆಂಗಳೂರು, ಮೇ 30 : ಲೋಕಸಭಾ ಚುನಾವಣಾ ಫಲಿತಾಂಶದ ಬಳಿಕ ಕರ್ನಾಟಕ ಸರ್ಕಾರ ಹಲವು ಮಹತ್ವದ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದೆ. ವಿಧಾನ ಪರಿಷತ್ ಸದಸ್ಯರನ್ನು ನೇಮಕ ಮಾಡಿದೆ ಮತ್ತು ಅಲ್ಪ ಸಂಖ್ಯಾತರ ಆಯೋಗಕ್ಕೆ ಅಧ್ಯಕ್ಷರನ್ನು ನೇಮಕ ಮಾಡಿದೆ.

ಬುಧವಾರ ತಿಪ್ಪಣ್ಣ ಕಮಕನೂರು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ, ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ಜಿ.ಎ.ಬಾವಾ ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಲು ಒಂದೊಂದೇ ದಾಳವನ್ನು ಬಳಸಲಾಗುತ್ತಿದೆ.

ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!ಮುಂದಿನ ಬಾರಿ ಖರ್ಗೆ ಸಂಸತ್ತಿಗೆ ಬರಲ್ಲ ಅಂತ ಮೋದಿ ಹೇಳಿದ್ದರು!

ತಿಪ್ಪಣ್ಣ ಕಮಕನೂರು ಅವರು ಕೋಲಿ ಸಮಾಜದವರು, ಕಲಬುರಗಿ ಜಿಲ್ಲೆಯವರು. ಲೋಕಸಭಾ ಚುನಾವಣೆ ಲೆಕ್ಕಾಚಾರ ಇಟ್ಟುಕೊಂಡಿದ್ದ ಕಾಂಗ್ರೆಸ್ ನಾಯಕರು ತಿಪ್ಪಣ್ಣ ಕಮಕನೂರು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿದ್ದರು.

ವಿಧಾನ ಪರಿಷತ್ ಸದಸ್ಯರಾಗಿ ತಿಪ್ಪಣ್ಣ ಕಮಕನೂರು ನೇಮಕವಿಧಾನ ಪರಿಷತ್ ಸದಸ್ಯರಾಗಿ ತಿಪ್ಪಣ್ಣ ಕಮಕನೂರು ನೇಮಕ

ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರ ಶಿಫಾರಸಿನ ಅನ್ವಯ ತಿಪ್ಪಣ್ಣ ಕಮಕನೂರು ಅವರನ್ನು ವಿಧಾನ ಪರಿಷತ್ ಸದಸ್ಯರಾಗಿ ನೇಮಕ ಮಾಡಲಾಗಿದೆ. ಆ ಮೂಲಕ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಚಿವ ಬಾಬೂರಾವ್ ಚಿಂಚನಸೂರು ಅವರಿಗೆ ತಿರುಗೇಟು ನೀಡಲಾಗಿದೆ...

ಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರುಲೋಕಸಭಾ ಚುನಾವಣೆ 2019 : ಕರ್ನಾಟಕದಲ್ಲಿ ಗೆದ್ದವರು, ಸೋತವರು

ಕಾಂಗ್ರೆಸ್ ಪಾಲಿನ ಸ್ಥಾನ ಭರ್ತಿ

ಕಾಂಗ್ರೆಸ್ ಪಾಲಿನ ಸ್ಥಾನ ಭರ್ತಿ

2018ರ ಡಿಸೆಂಬರ್‌ನಲ್ಲಿ ನಡೆದ ಬಳ್ಳಾರಿ ಕ್ಷೇತ್ರದ ಲೋಕಸಭಾ ಉಪ ಚುನಾವಣೆಯಲ್ಲಿ ಗೆದ್ದ ವಿ.ಎಸ್.ಉಗ್ರಪ್ಪ ಅವರು ವಿಧಾನ ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅವರಿಂದ ತೆರವಾದ ಸ್ಥಾನಕ್ಕೆ ತಿಪ್ಪಣ್ಣ ಕಮಕನೂರು ಅವರನ್ನು ನೇಮಕ ಮಾಡಲಾಗಿದೆ. 2020ರ ಜೂನ್ 23ರ ತನಕ ತಿಮ್ಮಣ್ಣ ಅವರ ಸದಸ್ಯತ್ವದ ಅವಧಿ ಇದೆ.

ಕಲಬುರಗಿ ಜಿಲ್ಲೆಗೆ ಆದ್ಯತೆ

ಕಲಬುರಗಿ ಜಿಲ್ಲೆಗೆ ಆದ್ಯತೆ

ಕಲಬುರಗಿ ಭಾಗದ ನಾಯಕ ತಿಪ್ಪಣ್ಣ ಕಮಕನೂರು ಅವರಿಗೆ ಪರಿಷತ್ ಸದಸ್ಯತ್ವ ನೀಡುವ ಮೂಲಕ ಆ ಭಾಗಕ್ಕೆ ಕಾಂಗ್ರೆಸ್ ಆದ್ಯತೆ ನೀಡಿದೆ. ಮಾಜಿ ಸಚಿವ ಬಾಬೂರಾವ್ ಚಿಂಚಿನಸೂರು ಅವರು ಪಕ್ಷ ಬಿಟ್ಟ ಬಳಿಕ ಆ ಭಾಗದ ಮತ್ತೊಬ್ಬ ನಾಯಕರಿಗೆ ಸ್ಥಾನ ನೀಡಲಾಗಿದೆ.

ಸರ್ಕಾರ ಶಿಫಾರಸು ಮಾಡಿತ್ತು

ಸರ್ಕಾರ ಶಿಫಾರಸು ಮಾಡಿತ್ತು

ತಿಪ್ಪಣ್ಣ ಕಮಕನೂರು ಅವರನ್ನು ಪರಿಷತ್ ಸದಸ್ಯರಾಗಿ ನಾಮ ನಿರ್ದೇಶನ ಮಾಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಸಲಹೆ ನೀಡಿದ್ದರು. ಕರ್ನಾಟಕ ಸರ್ಕಾರ ಶಿಫಾರಸನ್ನು ರಾಜ್ಯಪಾಲರಿಗೆ ಕಳಿಸಿತ್ತು. ವಜುಭಾಯಿ ವಾಲಾ ಅವರು ಇದಕ್ಕೆ ಒಪ್ಪಿಗೆ ನೀಡಿದ್ದಾರೆ.

ಅಲ್ಪ ಸಂಖ್ಯಾತರ ಆಯೋಗಕ್ಕೆ ನೇಮಕ

ಅಲ್ಪ ಸಂಖ್ಯಾತರ ಆಯೋಗಕ್ಕೆ ನೇಮಕ

ಕರ್ನಾಟಕದಲ್ಲಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಅಲ್ಪ ಸಂಖ್ಯಾತರ ಅಯೋಗದ ಅಧ್ಯಕ್ಷ ಸ್ಥಾನ ಖಾಲಿ ಇತ್ತು. ಜಿ.ಎ.ಬಾವ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.

English summary
Karnataka government appointed Tippanna Kamaknur as Member of the Legislative Council (MLC) and G.A.Bava as president of The Karnataka State Minorities Commission (KSMC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X