Murugha Shree : ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿ ಇನ್ನೆರಡು ಪ್ರಕರಣ

ಬೆಂಗಳೂರು, ಅ. 13: ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣ-ಪೋಕ್ಸೋ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಚಿತ್ರದುರ್ಗದ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಅಡಿಯಲ್ಲಿ ಇನ್ನೆರಡು ಪ್ರಕರಣಗಳು ದಾಖಲಾಗಿದೆ ಎಂದು 'ದಿ ಫೈಲ್‌' ವರದಿ ಮಾಡಿದೆ.

ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೋ) ಅಡಿ ಬಂಧನದಲ್ಲಿರುವ ಮುರುಘಾ ಶರಣರ ವಿರುದ್ಧ ಇನ್ನಿಬ್ಬರು ಸಂತ್ರಸ್ತ ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಸಂಬಂಧ ದೂರು ದಾಖಲಿಸಿದ್ದಾರೆ.

Two More Cases under POCSO Have been Registered Against Murugha Shree

ಅಕ್ಕಮಹಾದೇವಿ, ವಿದ್ಯಾರ್ಥಿನಿಲಯದಲ್ಲಿ ವ್ಯಾಸಂಗ ಮಾಡುತ್ತಿರುವ 12 ಮತ್ತು 14 ವಯಸ್ಸಿನ ವಿದ್ಯಾರ್ಥಿನಿಯರು ಪೋಷಕರೊಂದಿಗೆ ಮೈಸೂರು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರಾಗಿ ಶರಣರ ವಿರುದ್ಧ ಲೈಂಗಿಕ ದೌರ್ಜನ್ಯ ದೂರು ದಾಖಲಿಸಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ 'ದಿ ಫೈಲ್‌' ವರದಿ ಉಲ್ಲೇಖಿಸಿದೆ.

ಬಾಲಕಿಯರಿಬ್ಬರು ತಮ್ಮ ಪೋಷಕರೊಂದಿಗೆ ಮೈಸೂರಿನ ಒಡನಾಡಿ ಸ್ಟ್ಯಾನ್ಲಿ ಅವರನ್ನು ಸಂಪರ್ಕಿಸಿದ್ದರು. ಅವರ ಸಲಹೆ ಮೇರೆಗೆ ಮಕ್ಕಳು ಮತ್ತು ಪೋಷಕರು ಮೈಸೂರಿನ ಸಿಡಬ್ಲ್ಯೂಸಿಯ ಮುಂದೆ ಗುರುವಾರ (ಅ.13) ಸಂಜೆ ಹಾಜರಾಗಿದ್ದಾರೆ. ಸಿಡಬ್ಲ್ಯೂಸಿಯು ಮಕ್ಕಳಿಬ್ಬರನ್ನು ಪ್ರತ್ಯೇಕವಾಗಿ ವಿಚಾರಣೆ ನಡೆಸಿದೆ ಎಂದು ವರದಿ ಉಲ್ಲೇಖಿಸಿದೆ.

ಮಕ್ಕಳ ವಿಚಾರಣೆ ನಂತರ, ಸಂತ್ರಸ್ತ ಬಾಲಕಿಯರ ಹೇಳಿಕೆಗಳನ್ನು ಪಡೆದು ದಾಖಲಿಸಿ ತಕ್ಷಣವೇ ಮುರುಘಾ ಶರಣರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಸಿಡಬ್ಲ್ಯೂಸಿಯು ಆದೇಶ ಹೊರಡಿಸಿದ್ದು, ಎಫ್‌ಐಆರ್ ಪ್ರಕ್ರಿಯೆ ಪ್ರಾರಂಭವಾಗಿದೆ ಎನ್ನಲಾಗಿದೆ.

ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್‌ ಮತ್ತೆ ಅಕ್ಟೋಬರ್ 21ರವರೆಗೆ ವಿಸ್ತರಣೆ ಮಾಡಿದೆ. ಇದರ ನಡುವೆ ಮತ್ತಿಬ್ಬರು ಬಾಲಕಿಯರು ದೂರು ನೀಡಲು ಮುಂದಾಗಿರುವುದು ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ಹೆಚ್ಚಾಗಿಸಿದೆ.

ಸೆಪ್ಟೆಂಬರ್ 28ರಂದು ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡಿದ್ದರಿಂದ ಚಿತ್ರದುರ್ಗದ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಅಂದು ಕೂಡ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರಾದ ಬಿ.ಕೆ. ಕೋಮಲಾ ಆದೇಶಿಸಿದ್ದರು. ಇಂದಾದರೂ ಜಾಮೀನು ಸಿಗಬಹುದು ಎಂದು ಮುರುಘಾ ಶರಣರು ನಿರೀಕ್ಷೆಯಲ್ಲಿದ್ದರು. ಆದರೆ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+