Bengaluru News: ರಸ್ತೆ ದಾಟುತ್ತಿದ್ದ ವೇಳೆ ಬಿಎಂಟಿಸಿ ಬಸ್‌ ಡಿಕ್ಕಿ: ಇಬ್ಬರು ಯುವಕರು ದುರ್ಮರಣ

ಬೆಂಗಳೂರು, ಜೂನ್‌ 14: ರಾಜ್ಯದಲ್ಲಿ ಸರಣಿ ಅಪಘಾತಗಳು ಹೆಚ್ಚಾಗುತ್ತಿದ್ದು, ಬುಧವಾರ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್‌ ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಯುವಕರಿಬ್ಬರು ದುರ್ಮರಣ ಹೊಂದಿರುವಂತಹ ಘಟನೆ ಲಗ್ಗೆರೆಯ ರಿಂಗ್ ರಸ್ತೆಯ ಕೆಂಪೇಗೌಡ ಆರ್ಚ್ ಬಳಿ ಅಪಘಾತ ನಡೆದಿದೆ.

ಇನ್ನೂ ಘಟನೆ ನಡೆದ ಸ್ಥಳಕ್ಕೆ ರಾಜಾಜಿನಗರ ಸಂಚಾರಿ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಓರ್ವ ಯುವಕನನ್ನು ಸುರೇಶ್​ ಎಂದು ಗುರುತಿಸಲಾಗಿದ್ದು, ಮತ್ತೊಬ್ಬ ಯುವಕನ ಗುರುತು ಪತ್ತೆ ಆಗಿಲ್ಲ.

Bus Accident In Bengaluru

ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಭೀಕರ ಅಪಘಾತ

ಬೆಂಗಳೂರು - ಮೈಸೂರು ಎಕ್ಸ್‌ಪ್ರೆಸ್ ಹೈವೇಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಹೆಣ್ಣು ಮಕ್ಕಳು ಸಾವಿಗೀಡಾಗಿದ್ದಾರೆ. ಚನ್ನಪಟ್ಟಣದ ದೇವರಹೊಸಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ಇನ್ನೂ ಭೀಕರ ಅಪಘಾತದಲ್ಲಿ ಸಾವಿಗೀಡಾದವರು ಒಂದೇ ಕುಟುಂಬದವರಾಗಿದ್ದಾರೆ. ಇದರಲ್ಲಿ ಒಬ್ಬ ಬಾಲಕಿ ವಯಸ್ಸು 13, ಮತ್ತೊಬ್ಬಳದ್ದು 20 ವರ್ಷ ವಯಸ್ಸಿನವರು ಎಂದು ತಿಳಿದು ಬಂದಿದೆ. ಕಾರ್ ನಲ್ಲಿದ್ದ ಒಟ್ಟು 6 ಜನರಲ್ಲಿ ಮೂವರಿಗೆ ಗಂಭೀರ ಗಾಯ, ಒಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ಹೇಳಿವೆ

ಹೆಚ್.ಡಿ.ಕೋಟೆಯಿಂದ ಮದುವೆ ಮುಗಿಸಿ ಬೆಂಗಳೂರಿಗೆ ವಾಪಸ್ ಆಗುವ ವೇಳೆ ಅಫಘಾತ ನಡೆದಿದೆ. ಕಾರ್ ನಲ್ಲಿ ಹೋಗುತ್ತಿದ್ದವರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+