Get Updates
Get notified of breaking news, exclusive insights, and must-see stories!

2 ಪಟ್ಟಣ ಪಂಚಾಯತಿ ಹಾಗೂ ವಿವಿಧ 27 ವಾರ್ಡ್‌ಗಳ ಚುನಾವಣಾ ದಿನಾಂಕ ಪ್ರಕಟ

ಬೆಂಗಳೂರು, ಮಾರ್ಚ್ 8: ಎರಡು ಪಟ್ಟಣ ಪಂಚಾಯತಿ ಹಾಗೂ ವಿವಿಧ ಸ್ಥಳೀಯ ಸಂಸ್ಥೆಗಳ 27 ವಾರ್ಡ್‌ಗಳಿಗೆ ರಾಜ್ಯ ಚುನಾವಣಾ ಆಯೋಗ ಚುನಾವಣೆ ದಿನಾಂಕ ಘೋಷಣೆ ಮಾಡಿದೆ.

ಮೈಸೂರು ಜಿಲ್ಲೆಯ ಸರಗೂರು ಪಟ್ಟಣ ಪಂಚಾಯತಿ ಹಾಗೂ ತುಮಕೂರು ಜಿಲ್ಲೆ ಹುಳಿಯಾರು ಪಟ್ಟಣ ಪಂಚಾಯಿತಿಗೆ ಚುನಾವಣೆ ಘೋಷಿಸಲಾಗಿದೆ. ಜೊತೆಗೆ ವಿವಿಧ ಕಾರಣಗಳಿಂದ ರಾಜ್ಯಾದ್ಯಂತ ತೆರವಾಗಿರುವ 27 ವಾರ್ಡ್‌ಗಳಿಗೂ ಚುನಾವಣೆ ನಡೆಯಲಿದೆ.

ಮಾರ್ಚ್ 10 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆಯನ್ನು ಹೊರಡಿಸುತ್ತಾರೆ. ಮಾರ್ಚ್ 17 ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.

Two Town Panchayat Election Date Announced By Karnataka Election Commission

ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ ಮಾ.18 ಆಗಿದ್ದು, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕ ಮಾ.20 ಆಗಿರುತ್ತದೆ.

ಮಾರ್ಚ್‌ 29 ರಂದು ಮತದಾನ ನಡೆಯಲಿದ್ದು, ಮಾರ್ಚ್ 31ರಂದು ಮತ ಎಣಿಕೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.

Two Town Panchayat Election Date Announced By Karnataka Election Commission

ಗ್ರಾಮ ಪಂಚಾಯತಿ ಚುನಾವಣೆ

ಇನ್ನು ಇದೇ ವೇಳೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ಪ್ರಕರಣ 308ರಲ್ಲಿ ದತ್ತವಾಗಿರುವ ಅಧಿಕಾರದ ಮೇರೆಗೆ, ರಾಜ್ಯ ಚುನಾವಣಾ ಆಯೋಗವು ಮೇ-2021 ತಿಂಗಳಿನಲ್ಲಿ ಅವಧಿ ಮುಕ್ತಾಯವಾಗುವ ಗ್ರಾಮ ಪಂಚಾಯತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ ಗ್ರಾಮ ಪಂಚಾಯತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾಗಿರುವ ಸ್ಥಾನಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ನಿಗದಿಪಡಿಸಿದೆ.

ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸುವ ದಿನಾಂಕ: ಮಾರ್ಚ್ 15

ನಾಮಪತ್ರಗಳನ್ನು ಸಲ್ಲಿಸುವ ದಿನಾಂಕ: ಮಾರ್ಚ್ 19

ನಾಮಪತ್ರಗಳನ್ನು ಪರಿಶೀಲಿಸುವ ದಿನಾಂಕ: ಮಾರ್ಚ್ 20

ಉಮೇದುವಾರಿಕೆ ಹಿಂತೆಗೆದುಕೊಳ್ಳುವ ದಿನಾಂಕ: ಮಾರ್ಚ್ 22

ಮತದಾನ ಅವಶ್ಯವಿದ್ದರೆ, ಮತದಾನದ ದಿನಾಂಕ: ಮಾರ್ಚ್ 29

ಮರು ಮತದಾನ ಅವಶ್ಯವಿದ್ದಲ್ಲಿ, ಮತದಾನದ ದಿನಾಂಕ: ಮಾರ್ಚ್ 30

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+