ಬೆಂಗಳೂರು : 2 ವರ್ಷದ ಬಾಲಕಿ ಮೇಲೆ ಅತ್ಯಾಚಾರ, ಕೊಲೆ
ಬೆಂಗಳೂರು, ಫೆ.6 : ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕಿಯನ್ನು ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿ, ಕೊಲೆ ಮಾಡಿರುವ ಪ್ರಕರಣ ಸೂಲಿಬೆಲೆ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಆರೋಪಿ ಪತ್ತೆಗೆ ಪೊಲೀಸರು ವಿಶೇಷ ತಂಡವನ್ನು ರಚನೆ ಮಾಡಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಲ್ಲೆಯ ಪಿಲಂಗುಟೆ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಜೆ ಈ ಘಟನೆ ನಡೆದಿದೆ. ಘಟನೆಯ ನಂತರ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು, ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಮನೆಯ ಮುಂದೆ ಆಟವಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ಕರೆದುಕೊಂಡು ಹೋದ ಆರೋಪಿ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಆತ ಕರೆದುಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ['ರೇಪ್ ಮಾಡುವ ಮುನ್ನ ಈಕೆಯ ವಿಡಿಯೋ ನೋಡಿ']
ಬಾಲಕಿ ಕಾಣೆಯಾಗಿದ್ದನ್ನು ಗಮನಿಸಿದ ದಂಪತಿ ಹುಡುಕಾಟ ಆರಂಭಿಸಿದಾಗ ಕಾರ್ಖನೆಯೊಂದರ ತಡೆಗೋಡೆ ಬಳಿ ಆಕೆ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಳು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ, ಅಷ್ಟರಲ್ಲೇ ಆಕೆ ಮೃತಪಟ್ಟಿದ್ದಳು. [ಅತ್ಯಾಚಾರಿಗೇ ಅವಮಾನವಾಗಿದೆ ಎಂದಳು 'ನಿರ್ಭಯಾ']
ವಿಶೇಷ ತಂಡ ರಚನೆ : ಆರೋಪಿಯ ಪತ್ತೆಗಾಗಿ ಸೂಲಿಬೆಲೆ ಪೊಲೀಸರು ವಿಶೇಷ ತಂಡವೊಂದನ್ನು ರಚಿಸಿದ್ದಾರೆ. ಹೆಚ್ಚುವರಿ ಎಸ್ಪಿ ಅಬ್ದುಲ್ ಅಹಾದ್, ಸೂಲಿಬೆಲೆ ಠಾಣೆ ಇನ್ಸ್‌ಪೆಕ್ಟರ್ ಪುಟ್ಟಓಬಳರೆಡ್ಡಿ ಅವರ ನೇತೃತ್ವದಲ್ಲಿ ತಂಡ ಆರೋಪಿಗಾಗಿ ಹುಡುಕಾಟ ನಡೆಸಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ವಶಕ್ಕೆ ಪಡೆದಿದ್ದಾರೆ.












Click it and Unblock the Notifications