ಎರವಲು ಅಧಿಕಾರಿಗಳಿಗೆ 2ವರ್ಷ ಹುದ್ದೆಯಲ್ಲಿರುವ ನಿಯಮ ಕಡ್ಡಾಯವಲ್ಲ : ಹೈಕೋರ್ಟ್
ಬೆಂಗಳೂರು, ಅ 14: ಮಾತೃ ಇಲಾಖೆ ಬಿಟ್ಟು ಬೇರೆ ಇಲಾಖೆಯಲ್ಲಿ ಎರವಲು ಸೇವೆಗೆ ನಿಯೋಜಿತ ಅಧಿಕಾರಿಗಳಿಗೆ ಒಂದೇ ಹುದ್ದೆಯಲ್ಲಿ ಎರಡು ವರ್ಷ ಮುಂದುವರೆಯಬೇಕು ಎಂಬ ನಿಯಮ ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ.
ತನ್ನನ್ನು ಮಾತೃ ಇಲಾಖೆಗೆ ವರ್ಗಾವಣೆ ಮಾಡಿದ್ದ ಕ್ರಮವನ್ನು ಪ್ರಶ್ನಿಸಿ ಗ್ರೇಡ್-1 ತಹಿಶೀಲ್ದಾರ್ ಆಗಿದ್ದ ಪಿ.ದಿನೇಶ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ಸೋಮಶೇಖರ್ ಮತ್ತು ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿದ್ದ ಏಕಸದಸ್ಯಪೀಠ ಈ ಆದೇಶ ಮಾಡಿದೆ.

ಅಲ್ಲದೆ, ಧಾರ್ಮಿಕ ದತ್ತಿ ಇಲಾಖೆಯಿಂದ ಕಂದಾಯ ಇಲಾಖೆಗೆ ಎರವಲು ಸೇವೆ ಪಡೆದು ನಿಯೋಜಿಸಿ ಮಾತೃ ಇಲಾಖೆಗೆ ವಾಪಸ್ ಕಳುಹಿಸಿದ್ದ ಸರ್ಕಾರದ ಕ್ರಮ ಪುರಸ್ಕರಿಸಿದ್ದ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ)ಆದೇಶವನ್ನು ಎತ್ತಿ ಹಿಡಿದಿದೆ.
ಅಲ್ಲದೆ, ಅರ್ಜಿದಾರರನ್ನು ಆನೇಕಲ್ ತಹಶೀಲ್ದಾರ ಹುದ್ದೆಯಿಂದ ಬೆಂಗಳೂರು ದಕ್ಷಿಣ ತಾಲೂಕು ತಹಶೀಲ್ದಾರರನ್ನಾಗಿ ಒಂದೂವರೆ ವರ್ಷದಲ್ಲಿ ವರ್ಗಾವಣೆ ಮಾಡಲಾಗಿದೆ. ಈ ಕ್ರಮವನ್ನು ನಿಯಮಗಳ ವಿರುದ್ಧವಾಗಿ ವರ್ಗಾವಣೆ ಮಾಡಿದದ್ದರೂ ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿಲ್ಲ.
ಹೈಕೋರ್ಟ್ ಆದೇಶವೇನು? ಅದರ ಬದಲಾಗಿ ಮಾತೃ ಇಲಾಖೆಗೆ ವಾಪಸ್ ಕಳುಹಿಸಿ ಹುದ್ದೆ ನೀಡಿದಾಗ ಮಾತ್ರ ಅವರು ನ್ಯಾಯಾಲಯದ ಕದ ತಟ್ಟಿದ್ದಾರೆ. ಇದು ಮಾತೃ ಇಲಾಖೆಗೆ ವರ್ಗಾವಣೆ ಮಾಡಿರುವುದು ಇಚ್ಚೆಯಿಲ್ಲ.
ಜತೆಗೆ, ಅವರಿಗೆ ಇಷ್ಟವಿರುವ ಹುದ್ದೆಗಳಲ್ಲಿ ನಿಯೋಜನೆ ಮಾಡಿದಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಲು ಮುಂದಾಗಿಲ್ಲ. ಇದೀಗ ಅರ್ಜಿ ಸಲ್ಲಿದ್ದು, ಹೀಗಾಗಿ ಅವರು ಅರ್ಜಿಯಲ್ಲಿ ಪ್ರಾಮಾಣಿಕತೆ ಹೊಂದಿಲ್ಲ ಎಂದು ಪೀಠ ತಿಳಿಸಿದೆ.
ಕಂದಾಯ ಇಲಾಖೆಗೆ ಮತ್ತೊಂದು ಅಧಿಕಾರಿಯ ನೇಮಕ
ಸರ್ಕಾರದ ಯಾವುದೇ ಇಲಾಖೆಯಲ್ಲಿ ಖಾಲಿ ಹುದ್ದೆಗಳು ಇದ್ದ ಸಂದರ್ಭದಲ್ಲಿನ ಮತ್ತೊಂದು ಇಲಾಖೆಯಿಂದ ಎರವಲು ಪಡೆದುಕೊಳ್ಳಲಾಗಿರುತ್ತದೆ. ಅರ್ಜಿದಾರರ ಸ್ಥಾನಕ್ಕೆ ಕಂದಾಯ ಇಲಾಖೆಗೆ ಮತ್ತೊಂದು ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಆ ಅಧಿಕಾರಿಯನ್ನು ಬದಲಾವಣೆ ಮಾಡುವುದಕ್ಕೆ ಸಾಧ್ಯವಿಲ್ಲ ಎಂದು ಪೀಠ ತಿಳಿಸಿದೆ.
ಸಾರ್ವಜನಿಕ ಹಿತದೃಷ್ಟಿಯಿಂದ ಸರ್ಕಾರಗಳು ಅಧಿಕಾರಗಳನ್ನು ಬದಲಾವಣೆ ಮಾಡುವ ಅಗತ್ಯವಿದೆ. ಇದೇ ಕಾರಣದಿಂದ ಮಾತೃ ಇಲಾಖೆಗೆ ವರ್ಗಾವಣೆ ಮಾಡಲಾಗಿದೆ ಎಂದು ಪೀಠ ಹೇಳಿದೆ.
ಎರಡು ವರ್ಷ ಸೇವೆ ಸಲ್ಲಿಸಬೇಕು ಎಂಬ ನಿಯಮ ಕಡ್ಡಾಯವಿಲ್ಲ
ಅಲ್ಲದೆ, ಎರವಲು ಸೇವೆ ಪಡೆದುಕೊಂಡ ಸಂದರ್ಭದಲ್ಲಿ ಎರಡು ವರ್ಷ ಸೇವೆ ಸಲ್ಲಿಸಬೇಕು ಎಂಬ ನಿಯಮ ಕಡ್ಡಾಯವಿಲ್ಲ ಎಂದು ನ್ಯಾಪೀಠ ತನ್ನ ಆದೇಶಲ್ಲಿ ತಿಳಿಸಿತು. ಇದೇ ಕಾರಣ ಆಡಳಿತಾತ್ಮ ನ್ಯಾಯಮಂಡಳಿ(ಕೆಎಟಿ) ನೀಡಿರುವ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಪ್ರಕರಣದ ಹಿನ್ನೆಲೆ: ಅರ್ಜಿದಾರರು ದಿನೇಶ್ ಅವರು ಧಾರ್ಮಿಕ ದತ್ತಿ ಇಲಾಖೆಯಲ್ಲಿ
ನೇಮಕಗೊಂಡಿದ್ದರು. ಈ ನಡುವೆ ಕಂದಾಯ ಇಲಾಖೆಗೆ ಗ್ರೇಡ್ ೧ ತಹಶೀಲದಾರ್ ಆಗಿ ಎರವಲು ಪಡೆದುಕೊಂಡಿತ್ತು.1.5 ವರ್ಷಗಳ ಕಾಲ ಆನೇಕಲ್ನಲ್ಲಿ ತಹಶೀಲ್ದಾರ್, ಬೆಂಗಳೂರು ದಕ್ಷಿಣ ತಹಶಿಲ್ದಾರ್ 8 ತಿಂಗಳ ಸೇವೆ ಸಲ್ಲಿಸಿದ ಬಳಿಕ ಮಾತೃ ಇಲಾಖೆಗೆ ವಾಪಸ್ ಮಾಡಿ ಕಳುಹಿಸಲಾಗಿತ್ತು.
ವರ್ಗಾವಣೆ ಆದೇಶವನ್ನು ಅರ್ಜಿದಾರರು, ಕರ್ನಾಟಕ ರಾಜ್ಯ ಆಡಳಿತಾತ್ಮಕ ನ್ಯಾಯಮಂಡಳಿ ಪ್ರಶ್ಬಿಸಿದ್ದ ಅರ್ಜಿ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು.












Click it and Unblock the Notifications