ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕುವೆಂಪು ಉದಯರವಿ ನಿವಾಸಕ್ಕೆ 'ಸ್ಮಾರಕ' ರೂಪ: ಸಿದ್ದರಾಮಯ್ಯ

By Sachhidananda Acharya
|
Google Oneindia Kannada News

ಬೆಂಗಳೂರು, ಫೆಬ್ರವರಿ 16: ಮಹಾಕವಿ ಕುವೆಂಪುರವರ ಮೈಸೂರಿನ ನಿವಾಸ "ಉದಯರವಿ"ಯನ್ನು ರಾಷ್ಟ್ರಕವಿ ಸ್ಮಾರಕವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಬಜೆಟ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಭಾರತದ ಗ್ರಾಮೀಣ ಜನಪದ ಮತ್ತು ಸಾಂಸ್ಕೃತಿಕ ಕಲೆಗಳನ್ನು ಕರ್ನಾಟಕದ ಜನರಿಗೆ ಹಾಗೂ ಕನ್ನಡ ನಾಡಿನ ಜನಪದ ಸಂಸ್ಕೃತಿಯನ್ನು ಇಡೀ ಭಾರತಕ್ಕೆ ಪರಿಚಯಿಸುವ "ಜನಪದ ಸಾಂಸ್ಕೃತಿಕ ಭಾರತ" ಕಾರ್ಯಕ್ರಮ ಅನುಷ್ಠಾನಗೊಳಿಸಲಾಗುತ್ತದೆ ಎಂದೂ ಅವರು ಹೇಳಿದ್ದಾರೆ.

Live : ಕರ್ನಾಟಕ ಬಜೆಟ್ 2018, ಮುಖ್ಯಾಂಶಗಳುLive : ಕರ್ನಾಟಕ ಬಜೆಟ್ 2018, ಮುಖ್ಯಾಂಶಗಳು

ಕನ್ನಡದ ನವೋದಯ ಕಾವ್ಯದ ಪ್ರವರ್ತಕ ಗೋಪಾಲಕೃಷ್ಣ ಅಡಿಗರ ಜನ್ಮ ಶತಮಾನೋತ್ಸವದ ಪ್ರಯುಕ್ತ "ಕಟ್ಟುವೆವು ನಾವು ಹೊಸ ನಾಡೊಂದನ್ನು" ಎನ್ನುವ ಸಾಹಿತ್ಯ-ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮುಖ್ಯಮಂತ್ರಿಗಳು ಬಜೆಟ್ ಭಾಷಣದಲ್ಲಿ ಹೇಳಿದ್ದಾರೆ.

"Udayaravi" residence of Kuvempu will be developed as a monument: Siddaramaiah

ರಾಜ್ಯದಲ್ಲಿ ಪುಸ್ತಕ ಸಂಸ್ಕೃತಿ ಬೆಳೆಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸಹಯೋಗದಲ್ಲಿ 1.5 ಕೋಟಿ ರೂ ವೆಚ್ಚದಲ್ಲಿ "ಪುಸ್ತಕ ಜಾಥಾ" ಕಾರ್ಯಕ್ರಮ ಆಯೋಜನೆ ಮಾಡಲಾಗುತ್ತದೆ. ಜತೆಗೆ ವಿವಿಧ ಅಕಾಡೆಮಿಗಳಿಗೆ ನೀಡುತ್ತಿರುವ ಅನುದಾನವನ್ನು ಹೆಚ್ಚಳ ಮಾಡಲಾಗುವುದು ಎಂಬುದಾಗಿ ಸಿಎಂ ಭರವಸೆ ನೀಡಿದ್ದಾರೆ.

ಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರ್ಜರಿ ಬಳುವಳಿಬಜೆಟ್ಟಿನಲ್ಲಿ ಮುಸ್ಲಿಂ ಸಮುದಾಯಕ್ಕೆ ಭರ್ಜರಿ ಬಳುವಳಿ

ಗಡಿ ಪ್ರದೇಶ ಅಭಿವೃದ್ಧಿ ಮಂಡಳಿ ಮೂಲಕ 50 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಕ್ರಮ, ಸಮಗ್ರ ದಾಸ ಸಾಹಿತ್ಯದ ಅಧ್ಯಯನಕ್ಕಾಗಿ ನೂತನ ಅಧ್ಯಯನ ಪೀಠ ಸ್ಥಾಪನೆ, ಕನ್ನಡ ತಂತ್ರಾಂಶ ಅಭಿವೃದ್ಧಿ ಹಾಗೂ ಕನ್ನಡ ತಾಂತ್ರಿಕ ವಿಷಯಗಳಲ್ಲಿ ಸಂಶೋಧನೆ ನಡೆಸುವ ತಾಂತ್ರಿಕ ವಿದ್ಯಾರ್ಥಿಗಳಿಗೆ ಫೆಲೋಷಿಪ್, ದಾವಣಗೆರೆಯಲ್ಲಿ ವೃತ್ತಿ ರಂಗಭೂಮಿ ಕೇಂದ್ರ ಪ್ರಾರಂಭ, ಇವು ಬಜೆಟ್ ನಲ್ಲಿ ಕನ್ನಡ ಮತ್ತು ಸಂಸ್ಕೃತಿಗೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಘೋಷಣೆ ಮಾಡಿದ ಇತರ ಯೋಜನೆಗಳಾಗಿವೆ.

English summary
Chief Minister Siddaramaiah announced on the Budget that the "Udayaravi" residence of Kuvempu in Mysuru will be developed as a monument.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X