ಸರ್ಕಾರಿ ಶಾಲೆಗಳಿಗೆ ಬೀಗ ಬೀಳುವ ಆತಂಕ ದೂರ

By: ಐಸಾಕ್ ರಿಚರ್ಡ್, ಮಂಗಳೂರು
Subscribe to Oneindia Kannada

ಉಡುಪಿ, ಜೂನ್ 08 : ಉಡುಪಿ ಜಿಲ್ಲೆಯಲ್ಲಿ 25 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು ಬಾಗಿಲು ಮುಚ್ಚುವ ಭೀತಿಯಲ್ಲಿದ್ದವು. ವಿದ್ಯಾರ್ಥಿಗಳು ಕಡಿಮೆ ಇರುವ ಶಾಲೆಗಳನ್ನು ಮುಚ್ಚಿ, ಅವುಗಳನ್ನು ಬೇರೆ ಶಾಲೆಗಳ ಜೊತೆ ವಿಲೀನಗೊಳಿಸಿ ಎನ್ನುವ ಸರ್ಕಾರದ ಆದೇಶದಿಂದಾಗಿ ಈ ಭೀತಿ ಎದುರಾಗಿತ್ತು.

10 ಅಥವಾ ಅದಕ್ಕಿಂತ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಪ್ರಾಥಮಿಕ ಶಾಲೆಗಳನ್ನು ಮುಚ್ಚಿ, ಅಲ್ಲಿ ಕಲಿಯುತ್ತಿರುವ ವಿದ್ಯಾರ್ಥಿ ಗಳನ್ನು ಸುಮಾರು 1 ಕಿ.ಮೀ. ವ್ಯಾಪ್ತಿಯಲ್ಲಿರುವ ಪಕ್ಕದ ಸರ್ಕಾರಿ ಶಾಲೆಗೆ ಸೇರಿಸಲು ಸರ್ಕಾರ ಆದೇಶ ಹೊರಡಿಸಿತ್ತು. ಮಂಗಳವಾರ ಈ ಆದೇಶವನ್ನು ವಾಪಸ್ ಪಡೆಯಲಾಗಿದ್ದು, ಶಾಲೆಗಳಿಗೆ ಬೀಗ ಬೀಳುವ ಭೀತಿ ದೂರಾಗಿದೆ. [ಸರ್ಕಾರಿ ಕನ್ನಡ ಶಾಲೆಗಳನ್ನು ಮುಚ್ಚಬೇಡಿ]

'ಉಡುಪಿ ಜಿಲ್ಲೆಯಲ್ಲಿ 10ಕ್ಕಿಂತ ಕಡಿಮೆ ವಿದ್ಯಾರ್ಥಿಗಳು ಇರುವ 25 ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿ ಇಲಾಖೆಯ ನಿರ್ದೇಶಕರಿಗೆ ಕಳುಹಿಸಲಾಗಿತ್ತು. ಅಲ್ಲಿಂದ ಸೂಚನೆ ಬಂದ ತಕ್ಷಣ, ಈ ಶಾಲೆಗಳಲ್ಲಿರುವ ವಿದ್ಯಾರ್ಥಿಗಳನ್ನು ಪಕ್ಕದ ಶಾಲೆಗಳಿಗೆ ಸೇರ್ಪಡೆಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸು ಸಿದ್ಧತೆ ನಡೆಲಾಗಿತ್ತು. [ಕನ್ನಡ ಮಾಧ್ಯಮ ಶಾಲೆ ವಿದ್ಯಾರ್ಥಿ, ಪೋಷಕರ ಗಮನಕ್ಕೆ]

2 ಉರ್ದು ಶಾಲೆಗಳು : 23 ಕನ್ನಡ ಮಾಧ್ಯಮದ ಕಿರಿಯ ಪ್ರಾಥಮಿಕ ಶಾಲೆಗಳು ಮತ್ತು 2 ಉರ್ದು ಶಾಲೆಗಳು ಬಾಗಿಲು ಮುಚ್ಚುವ ಆತಂಕದಲ್ಲಿದ್ದವು. ಇವುಗಳಲ್ಲಿ ಹೆಚ್ಚಿನ ಶಾಲೆಗಳು ಬೈಂದೂರು ವಲಯದಲ್ಲಿದ್ದವು. [ಮರಳಿ ಶಾಲೆಗೆ : ಇಲ್ಲಿ ಬಾಗಿಲು ತೆರೆದಿದೆ, ಛಾವಣಿಯೂ ತೆರೆದಿದೆ!]

ಅಂದಹಾಗೆ ಕರ್ನಾಟಕ ಸರ್ಕಾರ ಈ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಕಡಿಮೆ ಇರುವ 2,959 ಶಾಲೆಗಳನ್ನು ಮುಚ್ಚಲು ಆದೇಶ ಹೊರಡಿಸಿತ್ತು. ಮಂಗಳವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಈ ಆದೇಶವನ್ನು ವಾಪಸ್ ಪಡೆದಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka government has ordered to close the schools with less than 10 children. 25 schools identified in Udupi district. But, On June 7, 2016 govt withdraw its order.
Please Wait while comments are loading...