ಉಡುಪಿ ಕಾಲೇಜು ವಿಡಿಯೋ ಪೋಸ್ಟ್ ಪ್ರಕರಣ: ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನ
ಬೆಂಗಳೂರು, ಜುಲೈ 28: ಉಡುಪಿಯ ಖಾಸಗಿ ಕಾಲೇಜಿನ ಬಾತ್‌ರೂಮ್‌ನಲ್ಲಿ ಹಿಂದೂ ಹುಡುಗಿಯರ ವಿಡಿಯೋ ಪೋಸ್ಟ್ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಎಂಬುವವರನ್ನು ಈಗ ಪೊಲೀಸರು ಬಂಧಿಸಿದ್ದಾರೆ.
ಉಡುಪಿಯ ಖಾಸಗಿ ಕಾಲೇಜಿನ ಬಾತ್ ರೂಮ್‌ನಲ್ಲಿ ರಹಸ್ಯ ಕ್ಯಾಮರಾ ಇಟ್ಟು ವಿಡಿಯೋ ಮಾಡಿದ್ದಾರೆ ಎಂದು ಆರೋಪಿಸಲಾದ ಪ್ರಕರಣದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ ಅವಹೇಳನ ಪೋಸ್ಟ್ ಮಾಡಿದ ಬಿಜೆಪಿ ಕಾರ್ಯಕರ್ತೆಯನ್ನು ಈಗ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣ ಕುರಿತು ಟ್ವೀಟ್ ಮಾಡಿದ್ದ ಶಕುಂತಲಾ ಎಂಬುವವರು ಸಿಎಂ ಸಿದ್ದರಾಮಯ್ಯ ವಿರುದ್ಧ ಫೇಸ್‌ಬುಕ್‌ನಲ್ಲೂ ಕೂಡ ಅವಹೇಳನಕಾರಿ ಪೋಸ್ಟ್ ಮಾಡಿದ್ದರು. ಉಡುಪಿಯ ಕಾಲೇಜು ವಿದ್ಯಾರ್ಥಿನಿಯರ ಮಕ್ಕಳಾಟವನ್ನು ಬಿಜೆಪಿ ರಾಜಕೀಯ ಕಾರಣಕ್ಕಾಗಿ ಬಳಸಿಕೊಳ್ಳುತ್ತಿದೆ ಎಂದು ಟ್ವೀಟ್ ಮಾಡಲಾಗಿತ್ತು. ಟ್ವೀಟ್ ಮಾಡಿದ ಬೆನ್ನಲ್ಲೆ ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನ ಶಕುಂತಲಾ (ಬಿಜೆಪಿ ಕಾರ್ಯಕರ್ತೆ) ಶೇರ್ ಮಾಡಿ ಮರು ಟ್ವೀಟ್ ಮಾಡುವ ಮೂಲಕ ಅದಕ್ಕೆ ಕಾಮೆಂಟ್ ಪೋಸ್ಟ್ ಮಾಡಿದ್ದರು.
ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್ನವರ ಪ್ರಕಾರ ಮಕ್ಕಳಾಟವಂತೆ..@siddaramaiah ನವರ ಸೊಸೆ or ಹೆಂಡ್ತಿ ಅವ್ರ ವಿಡಿಯೋವನ್ನು ಇದೆ ತರ ಮಾಡಿದ್ರೆ
— ಶಕುಂತಲ🪷Shakunthala (@ShakunthalaHS) July 25, 2023
ಅದನ್ನು ಮಕ್ಕಳಾಟ ಅಂತ ಒಪ್ಕೋತೀರಾ? pic.twitter.com/jP0QTKvL5R
ಅವರು ಮಾಡಿದ್ದ ಮರು ಟ್ವೀಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೊಸೆ ಅಥವಾ ಹೆಂಡತಿಗೆ ಆಗಿದ್ರೆ ಹೀಗೆ ಹೇಳುತ್ತಿದ್ದರಾ ಎಂದು ಪ್ರಶ್ನೆ ಮಾಡಿದ್ದರು. ಸಿಎಂ ವಿರುದ್ಧ ಅವಹೇಳನಕಾರಿಯಾಗಿ ಟ್ವೀಟ್ ಮಾಡಿದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿತ್ತು. ದೂರು ದಾಖಲಿಸಿಕೊಂಡು ಹೈಗ್ರೌಂಡ್ಸ್ ಪೊಲೀಸರು ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಈಗ ಬಂಧಿಸಿದ್ದಾರೆ.
ಪ್ರಕರಣ ಕುರಿತಾಗಿ 3 ಮುಸ್ಲಿಂ ವಿದ್ಯಾರ್ಥಿನಿಯರು ಹಿಂದೂ ವಿದ್ಯಾರ್ಥಿನಿಯರ ರಹಸ್ಯ ಚಿತ್ರೀಕರಣವನ್ನು ಮಾಡಿರುವ ಘಟನೆಯನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಮತ್ತು ಈ ಪ್ರಕರಣದ ಉನ್ನತಮಟ್ಟದ ತನಿಖೆಗೆ ಆಗ್ರಹಿಸಿ ತುಮಕೂರು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆಯಲ್ಲಿ ಶಕುಂತಲಾ ಭಾಗಿಯಾಗಿದ್ದರು. ಬಳಿಕ ಟ್ವೀಟ್‌ನಲ್ಲಿ ಮುಸ್ಲಿಂ ಯುವತಿಯರು ಹಿಂದೂ ಹುಡುಗಿಯರ ನಗ್ನ ಚಿತ್ರ ವೀಡಿಯೋ ಮಾಡಿದ್ದು ತಮಾಷೆ, ಮಕ್ಕಳಾಟ ಎನ್ನುತ್ತಿರುವ ಕಾಂಗ್ರೆಸ್ ಮತ್ತದರ ಅನುಯಾಯಿಗಳು, ಅನ್ಯಾಯವಾದ ಹೆಣ್ಣುಮಕ್ಕಳು ಬರೆದಿರುವ ದೂರು ಕೂಡ ನಕಲಿ ಎಂದು ಹೇಳುತ್ತಾರೆಯೇ? ಎಂದು ಪ್ರಶ್ನೆ ಮಾಡಿದ್ದರು.
ಇನ್ನು ಬಿಜೆಪಿ ಕಾರ್ಯಕರ್ತೆ ಶಕುಂತಲಾ ಬಂಧನವಾದ ಬೆನ್ನಲ್ಲಿಯೇ ಹಲವು ಬಿಜೆಪಿ ನಾಯಕರು ಪೊಲೀಸ್ ಠಾಣೆಗೆ ತೆರಳಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದ್ದಾರೆ. ನಂತರ, ಸ್ಟೇಷನ್ ಬೇಲ್ ಮೇಲೆ ಶಕುಂತಲಾ ಅವರನ್ನು ಬಿಡುಗಡೆ ಮಾಡಲಾಗಿದೆ.












Click it and Unblock the Notifications