ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಕಲ ಸಿದ್ಧತೆ
ಉಡುಪಿ, ಜೂ. 13 : ಒಂಭತ್ತನೆಯ ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಜೂ.20 ಮತ್ತು 21ರಂದು ಪೂರ್ಣಪ್ರಜ್ಞ ಆಡಿಟೋರಿಯಂನಲ್ಲಿ ನಡೆಯಲಿದೆ. ಸಮ್ಮೇಳನದ ಆರ್ಥಿಕ ಸಮಿತಿ ಅಧ್ಯಕ್ಷರಾದ ಗೋಪಾಲ ಕೆ.ಬಂಗೇರ ಅವರು ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಿದ್ದಾರೆ.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಕವಿ, ಕತೆಗಾರ, ನಾಟಕಕಾರ ಪ್ರೊ.ರಾಮದಾಸ್ ಅವರನ್ನು ಆಯ್ಕೆ ಮಾಡಲಾಗಿದೆ. ಜೂನ್ 20 ಮತ್ತು 21 ರಂದು ಉಡುಪಿಯ ಪೂರ್ಣಪ್ರಜ್ಞ ಅಡಿಟೋರಿಯಂ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ.

ಸಾಹಿತ್ಯ ಸಮ್ಮೇಳನದವ ಆಮಂತ್ರಣ ಪತ್ರಿಕೆಯನ್ನು ಸಮ್ಮೇಳನದ ಆರ್ಥಿಕ ಸಮಿತಿಯ ಅಧ್ಯಕ್ಷರಾದ ಗೋಪಾಲ ಕೆ. ಬಂಗೇರ ಅವರು ಗುರುವಾರ ಬಿಡುಗಡೆ ಮಾಡಿದರು. ಸಮ್ಮೇಳನದ ಯಶಸ್ಸಿಗಾಗಿ ಒಗ್ಗೂಡಿ ಎಲ್ಲರೂ ಶ್ರಮಿಸುವಂತೆ ಕರೆ ನೀಡಿದರು.
ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಸಮ್ಮೇಳನದ ಕಾರ್ಯಾದ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಸಂಯೋಜಕರಾದ ಮುರಳಿ ಕಡೆಕಾರ್, ಪ್ರಧಾನ ಕಾರ್ಯದರ್ಶಿ ರಂಗಪ್ಪಯ್ಯ ಹೊಳ್ಳ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಪುಸ್ತಕ ಮಳಿಗೆಗೆ ಅರ್ಜಿ ಆಹ್ವಾನ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪುಸ್ತಕ ವ್ಯಾಪಾರಿಗಳಿಗೆ ಮಳಿಗೆಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಆಸಕ್ತರು ಪುಸ್ತಕ ಪ್ರದರ್ಶನ ಸಮಿತಿ ಅಧ್ಯಕ್ಷರಾದ ಆರೂರು ತಿಮ್ಮಪ್ಪ ಶೆಟ್ಟಿ ಅವರನ್ನು 9900271344 ನಂಬರ್ ಗಳಿಗೆ ಸಂಪರ್ಕಿಸಬಹುದಾಗಿದೆ.












Click it and Unblock the Notifications