ಉಡುಪಿ ಪರ್ಯಾಯ 2026: ಸರ್ವಜ್ಞ ಪೀಠ ಏರಿದ ಶೀರೂರು ಮಠದ ವೇದ ವರ್ಧನ ತೀರ್ಥರು, ಪುತ್ತಿಗೆ ಶ್ರೀಗಳಿಂದ ಪೂಜಾಧಿಕಾರ ಹಸ್ತಾಂತರ
ಉಡುಪಿ: ಉಡುಪಿ ಶ್ರೀ ಕೃಷ್ಣಮಠದ ಪರ್ಯಾಯ ಕಾರ್ಯಕ್ರಮ ಅಧ್ಧೂರಿಯಾಗಿ ನೆರವೇರಿತು. ಶೀರೂರು ಮಠಾಧೀಶರಾದ ವೇದವರ್ಧನ ತೀರ್ಥ ಸ್ವಾಮೀಜಿ ಅವರು ಭಾನುವಾರ ಬೆಳಗಿನ ಜಾವ ಶುಭ ಮುಹೂರ್ತದಲ್ಲಿ ಸರ್ವ ಪೀಠಾರೋಹಣ ಮಾಡಿದರು. ಪ್ರಥಮ ಪರ್ಯಾಯ ಆರಂಭಿಸಿದರು. ಪರ್ಯಾಯ ಅಧಿಕಾರ ಹಸ್ತಾಂತರ ಬಳಿಕ ನಗರದಲ್ಲಿ ಬೆಳಗ್ಗೆ ಜೋಡುಕಟ್ಟೆಯಿಂದ ಮಠದವರೆಗೆ ಭವ್ಯ ಮೆರವಣಿಗೆ ನಡೆಯಿತು.
ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಶ್ರೀಪಾದರು ಶೀರೂರು ಶ್ರೀಗಳಿಗೆ ಪಯಾರ್ಯ ಪೂಜಾಧಿಕಾರವನ್ನು ಹಸ್ತಾಂತರ ಮಾಡಿದರು. ಪರ್ಯಾಯ ನಂತರ ಭವ್ಯ ಮೆರವಣಿಗೆ ಮೂಲಕ ಸಾಗಿ ಉಡುಪಿ ಶ್ರೀ ಕೃಷ್ಣ ಮಠ ಪ್ರವೇಶಿಸಿದ ಶೀರೂರು ಶ್ರೀಗಳಿಗೆ ಸುಗುಣೇಂದ್ರ ತೀರ್ಥರು ಭವ್ಯ ಸ್ವಾಗತ ಕೋರಿದರು. ಅಕ್ಷಯ ಪಾತ್ರೆ ಮತ್ತು ಬೆಳ್ಳಿಯ ಸುಟ್ಟುಗವನ್ನು ನೀಡಿದರು. ಈ ಕಾರ್ಯಗಳು ಪೂರ್ಣಗೊಳ್ಳುತ್ತಿದ್ದಂತೆ ಶೀರೂರು ಶ್ರೀಗಳನ್ನು ಸರ್ವಜ್ಞ ಪೀಠದಲ್ಲಿ ಕೂರಿಸಲಾಯಿತು. ಇದಕ್ಕು ಮುನ್ನ ಶೀರೂರು ಶ್ರೀಗಳು ಅನಂತೇಶ್ವರ ಹಾಗೂ ಚಂದ್ರ ಮೌಳೆಶ್ವರ ದೇವಸ್ಥಾನಕ್ಕೆ ತೆರಳಿದರು ಪೂಜೆ ಸಲ್ಲಿಸಿದರು.

ಇಂದಿನ ಧಾರ್ಮಿಕ ಕಾರ್ಯಕ್ರಮ ಹಿನ್ನೆಲೆ ವಾದ್ಯ, ಕೊಂಬು ಇನ್ನಿತರ ಮಂಗಳವಾದ್ಯಗಳ ನಿನಾದ ಮೊಳಗಿತ್ತು. ಶ್ರೀ ಕೃಷ್ಣ ಭಕ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಮಠದಲ್ಲಿ ದೇವರ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು. ವಿಶೇಷ ಪೂಜೆಗಳು ಜರುಗಿದವು. ಇಡೀ ಮಠದ ಯತಿಗಳು ಶ್ರೀಗಳ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು, ಮತ್ತೊಂದು ಮೆರಗು ನೀಡಿತ್ತು. ಪೀಠ ಅಲಂಕರಿಸಿದ ಶ್ರೀಗಳು ಶ್ರೀಕೃಷ್ಣನಿಗೆ ವಿಶೇಷ ಪೂಜೆ ಸಲ್ಲಿಸಿದರು.
253ನೇ ದ್ವೈವಾರ್ಷಿಕ ಪರ್ಯಾಯ
ಜರುಗಿದ 253ನೇ ದ್ವೈವಾರ್ಷಿಕ ಪರ್ಯಾಯವು ಶ್ರೀ ಕೃಷ್ಣ ಮಠದ ಇತಿಹಾಸ ಪುಟ ಸೇರಿತು. ವೇದವರ್ಧನ ತೀರ್ಥರ ಪ್ರಥಮ ಪರ್ಯಾಯ ಇದಾಗಿದೆ. ಅಧಿಕಾರ ಹಸ್ತಾಂತರ ಧಾರ್ಮಿಕ ಕಾರ್ಯಕ್ರಮಗಳು ಶನಿವಾರ ಮಧ್ಯ ರಾತ್ರಿಯಿಂದಲೇ ಆರಂಭವಾಗಿದ್ದವು. ಬೆಳಗಿನ ಜಾವ 1.30ಕ್ಕೆ ಕಾಪು ತಾಲೂಕಿನ ದಂಡ ತೀರ್ಥದಲ್ಲಿ ಪವಿತ್ರ ಸ್ನಾನ ನಡೆದು, ಬೆಳಗಿನ ಜಾವ 3 ಗಂಟೆಗೆ ಜೋಡುಕಟ್ಟೆಯಿಂದ ಮೆರಣಿಗೆ ಅರಂಭವಾಯಿತು. ಈ ಸಂಬಂಧ ಮಠದ ಸುತ್ತಮುತ್ತಲಿನ ಬೀದಿಗಳು ವಿದ್ಯುತ್ ಅಲಂಕಾರಗಳಿಂದ ಕಂಗೊಳಿಸಿದವು. ಇಡಿ ಉಡುಪಿ ನಗರ ಜಗಮಗಿಸುತ್ತಿತ್ತು.
ಎರಡು ವರ್ಷಗಳಿಗೊಮ್ಮೆ ಶ್ರೀ ಕೃಷ್ಣ ಮಠದ ಆಡಳಿತ ಹಸ್ತಾಂತರವು ಅಷ್ಟಮಠಗಳ ಮಧ್ಯೆ ನಡೆಯುತ್ತದೆ. ಇದೊಂದು ಪುರಾತನ ಮತ್ತು ವೈಶಿಷ್ಟ್ಯತೆಯಿಂದ ಕೂಡಿದ ಧಾರ್ಮಿಕ ವಿಧಿ ವಿಧಾನಗಳಲ್ಲಿ ಒಂದಾಗಿದೆ. ಕೃಷ್ಣ ಮಠದ ಈ ಪರ್ಯಾಯ ಪದ್ಧತಿಯು ತಲಾ 2 ವರ್ಷಗಳ ಅವಧಿಗೆ ಅಷ್ಟಮಠಗಳಿಗೆ ನಡುವೆ ನಡೆಯುತ್ತಿದೆ. ಶ್ರೀಕೃಷ್ಣ ಮಠದ ಜವಾಬ್ದಾರಿ ಮತ್ತು ದೇವರ ಪೂಜೆಯ ಅಧಿಕಾರ ಈ ಮೂಲಕ ಇನ್ನೊಂದು ಮಠಕ್ಕೆ ಹಸ್ತಾಂತರಿಸಲಾಗುತ್ತದೆ. ಈ ಅಪರೂಪದ ಕ್ಷಣಕ್ಕೆ ಭಾನುವಾರ ಬೆಳಗ್ಗೆ ಸಾವಿರಾರು ಭಕ್ತರು ಸಾಕ್ಷಿಯಾದರು. ಉಡುಪಿಯಲ್ಲಿ ಇದೊಂದು ಜಾತ್ರೆ ರೀತಿಯಲ್ಲಿ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಯುತ್ತದೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications